ರಾಜ್ಯಾಡಳಿತಕ್ಕೆ ನಡುಕ ಹುಟ್ಟಿಸಿತ್ತು ರೈತಸಂಘ
ಪ್ರಬಲ ಸಂಘಟನೆಯಾಗಿತ್ತು 80ರ ದಶಕದ ರೈತ ಸಂಘ: ಕೋಡಿಹಳ್ಳಿ ಚಂದ್ರಶೇಖರ್
Team Udayavani, Dec 22, 2019, 1:29 PM IST
ಶಿವಮೊಗ್ಗ: ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ರೈತ ಸಂಘದ ಹಿರಿಯ ನಾಯಕರು ಯಶಸ್ವಿಯಾಗಿದ್ದರು ಎಂದು ರಾಜ್ಯ ರೈತಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ನಗರದ ಡಿಸಿಸಿ ಸಭಾಂಗಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಏರ್ಪಡಿಸಲಾಗಿದ್ದ ಎನ್.ಡಿ. ಸುಂದರೇಶ್ ಒಂದು ನೆನಪು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 80ರ ದಶಕದಲ್ಲಿ ರಾಜ್ಯದಲ್ಲಿ ರೈತ ಸಂಘ ಅತ್ಯಂತ ಪ್ರಬಲ ಸಂಘಟನೆಯಾಗಿ ಹೊರ ಹೊಮ್ಮಿತು ಎಂದರು. ಅಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಸರ್ಕಾರಕ್ಕೆ ರೈತರ ಚಳವಳಿ ಆರಂಭವಾಯಿತು ಎಂದರೆ ಒಂದು ರೀತಿಯಲ್ಲಿ ನಡುಕ ಶುರುವಾಗುತ್ತಿತ್ತು. ಆ ಮಟ್ಟದ ಪ್ರಬಲ ಹಾಗೂ ಶಕ್ತಿಯುತ ಚಳವಳಿ ರೈತಸಂಘದ್ದಾಗಿತ್ತು ಎಂದರು. ಎನ್.ಡಿ. ಸುಂದರೇಶ್, ಪ್ರೊ| ನಂಜುಂಡಸ್ವಾಮಿ, ಎಚ್.ಎಸ್. ರುದ್ರಪ್ಪ ಅವರು ರೈತ ಸಂಘಟನೆಯನ್ನು ಕೆಳ ಹಂತದಿಂದ ಸಂಘಟಿಸುವ ಮೂಲಕ ಈ ರಾಜ್ಯದ ಅನ್ನದಾತನ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಮೂಲಕ ರೈತರಿಗೆ ಸಿಗಬೇಕಾದ ಸವಲತ್ತುಗಳನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾದ ಹೋರಾಟ ನಡೆಸಿದರು. ಇದರ ಪರಿಣಾಮವಾಗಿಯೇ ಈ ನಾಯಕರು ಇಂದಿಗೂ ಸಹ ನಮ್ಮೆಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ ಎಂದರು.
ರೈತಸಂಘದ ಕಾರ್ಯಾಧ್ಯಕ್ಷ ಎಚ್. ಆರ್. ಬಸವರಾಜಪ್ಪ ಮಾತನಾಡಿ, ಎನ್.ಡಿ. ಸುಂದರೇಶ್ ಅವರ ಸಮಯ ಪ್ರಜ್ಞೆ ಅತ್ಯಂತ ಮಹತ್ವದ್ದು. ಅವರಿಗಿರುವಂತಹ ಸಮಯ ಪ್ರಜ್ಞೆ ನಮ್ಮಲ್ಲಿ ಯಾರಿಗೂ ಇಲ್ಲ. ಅದರಲ್ಲೂ ವಿಶೇಷವಾಗಿ ಇಂದಿನ ಯುವಕರಲ್ಲಂತೂ ಸಮಯಪ್ರಜ್ಞೆ ಇಲ್ಲವೇ ಇಲ್ಲ ಎಂದರು. ಕಾರ್ಯಕ್ರಮದಲ್ಲಿ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಹಿರಿಯ ರೈತ ಮುಖಂಡರಾದ ಕಡಿದಾಳ್ ಶಾಮಣ್ಣ, ಉಪಾಧ್ಯಕ್ಷರಾದ ಟಿ.ಎಂ. ಚಂದ್ರಪ್ಪ, ಅನುಸೂಯಮ್ಮ, ತರೀಕೆರೆ ಮಹೇಶ್, ಹಿಟ್ಟೂರು ರಾಜು, ಪ್ರಧಾನ ಕಾರ್ಯದರ್ಶಿಗಳಾದ ಅಬ್ಬಣಿ ಶಿವಪ್ಪ ಇತರ ರಾಜ್ಯ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.