ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಶಸ್ಸಿಗೆ ಶ್ರಮಿಸಿ
Team Udayavani, Dec 23, 2019, 3:00 AM IST
ಜಾವಗಲ್: ಹೇಮಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಯಶಸ್ಸಿಗೆ ಪ್ರತಿಗ್ರಾಮ ಗ್ರಾಮಪಂಚಾಯಿತಿಯ ವಾಟರ್‌ಮನ್‌ಗಳು ಹಾಗೂ ಪಿಡಿಒಗಳು ಶ್ರಮಿಸಬೇಕು ಎಂದು ಶಾಸಕ ಕೆ.ಎಸ್. ಲಿಂಗೇಶ್ ತಿಳಿಸಿದರು.
ಜಾವಗಲ್ ಗ್ರಾಮ ಪಂಚಾಯಿತಿಯಿಂದ ಜಾವಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾವಗಲ್ ಹೋಬಳಿಯ ಗ್ರಾಮ ಪಂಚಾಯಿತಿ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಯನ್ನು 256ಕೋಟಿ ರೂ. ವೆಚ್ಚದಲ್ಲಿ ಅರಸೀಕೆರೆ ತಾಲೂಕಿನ 530 ಹಳ್ಳಿಗಳಿಗೆ ಹೊಸ ತಂತ್ರಜ್ಞಾನವನ್ನು ಅಳವಡಿಸಿ ಶುದ್ಧ ಕುಡಿಯುವ ನೀರನ್ನು 24*7 ಮಾದರಿಯಲ್ಲಿ ಸರಬರಾಜುಮಾಡಲಾಗುವುದೆಂದರು.
ಯೋಜನೆಯ ಬಗ್ಗೆ ಅರಿವು ಮೂಡಿಸಿ: ಪ್ರತಿ ಗ್ರಾಮ ಪಂಚಾಯಿತಿಯ ಹಳ್ಳಿಗಳಿಗೆ ಒಎಚ್‌ಟಿ, ಸಿಸ್ಟನ್‌ಗಳಿಗೆ ಮೀಟರ್ ಅಳವಡಿಸಿ ನೀರು ಸರಬರಾಜು ಮಾಡಲಾಗುವುದು. ಪ್ರತಿಯೊಂದು ಗ್ರಾಮಗಳಲ್ಲಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಗ್ರಾಮಸ್ಥರಲ್ಲಿ ಯೋಜನೆಯ ಸದುಯೋಗದ ಬಗ್ಗೆ ಅರಿವು ಮೂಡಿಸಬೇಕೆಂದರು ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ನೀರಿನ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ನೀರನ್ನು ಮಿತವಾಗಿ ಬಳಸಿ: ನೀರನ್ನು ಹಿತಮಿತವಾಗಿ, ಸಮರ್ಪಕವಾಗಿ ಬಳಸುವಂತೆ, ಸ್ವತ್ಛತೆಗೆ, ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದರು. ಪಿಡಿಒ, ಕಾರ್ಯದರ್ಶಿ ಹಾಗೂ ವಾಟರ್‌ಮನ್‌ಗಳು ಸಮರ್ಪಕವಾಗಿ ನೀರಿನ ನಿರ್ವಹಣೆ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ತಿಳಿಸಿದರು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಂಜಿತಾ ಮಾತನಾಡಿ, ಜಾವಗಲ್ ಹೋಬಳಿಯ ಹಲವು ಹಳ್ಳಿಗಳು , ಹೊಸ ಬಡಾವಣೆಗಳು ಯೋಜನೆಯಡಿ ಕೈಬಿಟ್ಟಿದ್ದು ಅವುಗಳನ್ನು ಸೇರಿಸುವ ವ್ಯವಸ್ಥೆ ಮಾಡಲಾಗುವುದೆಂದರು. ಕೆಲವೊಂದು ಗ್ರಾಮಗಳಲ್ಲಿ ಒಎಚ್‌ಟಿ , ಜಿಎಲ್‌ಎಸ್‌ಆರ್ ಸೌಲಭ್ಯ ಇಲ್ಲದಿರುವ ಕಡೆ ಅವುಗಳ ನಿರ್ಮಾಣಕ್ಕೆ ಹಾಗೂ ಸಿಸ್ಟನ್ ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು.
ಮೀಟರ್ ಅಳವಡಿಕೆ ಮಾಡಲಾಗಿದ್ದು, ಅವುಗಳನ್ನು ದುಷ್ಕಮಿಗಳು ಹಾಳು ಮಾಡದಂತೆ ಅಧಿಕಾರಿಗಳು ವಾಟರ್ ಮನ್‌ಗಳು ಗಮನಹರಿಸುವಂತೆ ಸೂಚಿಸಿದರು. ಅರಸೀಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಪಿ ನಟರಾಜು ಮಾತನಾಡಿ, ಯೋಜನೆಯ ಸಂಪೂರ್ಣ ಯಶಸ್ಸಿಗೆ ಪಿಡಿಒ, ಕಾರ್ಯದರ್ಶಿ, ವಾಟರ್‌ಮನ್‌ಗಳ ಸಂಪೂರ್ಣ ಜವಾಬ್ದಾರಿಯೊಂದಿಗೆ ಸಾರ್ವಜನಿಕರ ಸಹಕಾರ ಮುಖ್ಯವೆಂದರು.
ಎಪಿಎಂಸಿ ಮಾಜಿ ಅಧ್ಯಕ್ಷ ಮಹದೇವಪ್ಪ, ತಾಪಂ ಸದಸ್ಯರಾದ ವಿಜಯಕುಮಾರ್, ಬಸವರಾಜು, ಪ್ರಭಾಕರ್ , ಪಿಡಿಒ ಮಂಜುನಾಥ್, ಕಾರ್ಯದರ್ಶಿ ಈರೇಗೌಡ, ಮಾತನಾಡಿದರು. ಗ್ರಾಪಂ ಅಧ್ಯಕ್ಷ ಕುಮಾರ್ ನಾಯ್ಕ ಉಪಾಧ್ಯಕ್ಷೆ ಶಂಕರಮ್ಮ , ಎಪಿಎಂಸಿ ಸದಸ್ಯ ಧರ್ಮಪ್ಪ, ಹೋಬಳಿ ಪಿಡಿಒ ಗಳು ಕಾರ್ಯದರ್ಶಿಗಳು ವಾಟರ್‌ಮನ್‌ಗಳು, ಅ ಕಾರಿಗಳು, ಯೋಜನೆಯ ಗುತ್ತಿಗೆದಾರರು ಭಾಗವಹಿಸಿದ್ದರು.
ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಯತ್ನ: ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಜಾವಗಲ್ ಪಟ್ಟಣ ಸೇರಿದಂತೆ ಹೋಬಳಿಯ ಸುಮಾರು, 23 ಗ್ರಾಮಗಳಿಗೆ ಯಗಚಿ ನೀರು ಸಮರ್ಪಕವಾಗಿ ಸರಬರಾಜು ಆಗದಿರುವುದರಿಂದ ಜಾವಗಲ್ ಪಟ್ಟಣವನ್ನು ಹೇಮಾವತಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸೇರಿಸಿ ಕುಡಿಯುವ ನೀರಿನ ಸೌಲಭ್ಯ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನಮಾಡುವುದಾಗಿ ಶಾಸಕ ಶಿವಲಿಂಗೇಗೌಡ ಭರವಸೆನೀಡಿದರು.
183 ಹಳ್ಳಿಗಳಿಗೆ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡುತ್ತಿದೆ. 2020ರ ಜನವರಿ ಅಂತ್ಯಕ್ಕೆ ಎಲ್ಲಾ 530 ಗ್ರಾಮಗಳಿಗೂ ನೀರು ಸರಬರಾಜು ಮಾಡಲಾಗುವುದು.
-ಶ್ರೀನಿವಾಸ್, ಗ್ರಾಮೀಣ ಕುಡಿಯುವ ನೀರು ವ್ಯವಸ್ಥೆ ಎಇಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.