ಜ.3ರಂದು ರೈತರ ಸಮಾವೇಶಕ್ಕೆ ಪ್ರಧಾನಿ ಮೋದಿ?

Team Udayavani, Dec 23, 2019, 3:00 AM IST

jan3

ತುಮಕೂರು: ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜ.3ರಂದು ನಡೆಸಲು ಉದ್ದೇಶಿಸಿರುವ ರೈತರ ಸಮಾವೇಶದಲ್ಲಿ 2ನೇ ಹಂತದ ರೈತ ಸಮ್ಮಾನ್‌ ಯೋಜನೆಗೆ ಪ್ರಧಾನಿ ನರೇಂದ್ರಮೋದಿ ಚಾಲನೆ ನೀಡುವ ಸಾಧ್ಯತೆ ಇದ್ದು, ಇನ್ನೂ ಖಚಿತವಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನಕ್ಕೆ ಭಾನುವಾರ ಭೇಟಿ ನೀಡಿ ಕಾರ್ಯಕ್ರಮ ನಡೆಸುವ ಸ್ಥಳ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿದ್ಧಗಂಗಾ ಮಠಕ್ಕೆ ಭೇಟಿ: ತುಮಕೂರು ಪ್ರಗತಿಪರ ರೈತರ ಒಳಗೊಂಡ ಜಿಲ್ಲೆಯಾಗಿರುವುದರಿಂದ ಇಲ್ಲಿಂದಲೇ 2ನೇ ಹಂತದ ರೈತ ಸಮ್ಮಾನ್‌ ಯೋಜನೆಗೆ ಚಾಲನೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ಬಯಸಿದ್ದಾರೆ. ಜ.3ರಂದು ಬೆಳಗ್ಗೆ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಶ್ರೀ ಮಠದಲ್ಲಿ ಲಿಂ. ಡಾ. ಶ್ರೀ ಶಿವಕುಮಾರ್‌ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು ಅರ್ಧ ಗಂಟೆ ಮಠದಲ್ಲಿ ಕಾಲ ಕಳೆಯಲಿದ್ದಾರೆ. ನಂತರ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ರೈತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದ‌ು ಹೇಳಿದರು.

ಸಮಾವೇಶದಲ್ಲಿ ರಾಜ್ಯದ ವಿವಿಧೆಡೆಗಳಿಂದ ಸುಮಾರು 50 ಸಾವಿರಕ್ಕೂ ಅಧಿಕ ರೈತರು ಸೇರಲಿದ್ದಾರೆ. ಹಾಗಾಗಿ ಬಂದೋಬಸ್ತ್ ಕುರಿತು ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು. ತುಮಕೂರಿನಲ್ಲಿ ಫ‌ುಡ್‌ಪಾರ್ಕ್‌ ಸ್ಥಾಪನೆಯಾಗಿದ್ದು, ರೈತರ ಆದಾಯ ದ್ವಿಗುಣ ಮಾಡಬೇಕೆಂಬ ಆಶಯ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸಲಾಗಿದೆ. ಈ ಗೊಂದಲ ಹೋಗಲಾಡಿಸುವ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರ ದೊಡ್ಡ ಮಟ್ಟದಲ್ಲಿ ಅಭಿಯಾನ ಕೈಗೊಂಡು ಜನರಲ್ಲಿ ಮೂಡಿರುವ ತಪ್ಪು ತಿಳಿವಳಿಕೆ ದೂರ ಮಾಡಲಾಗುವುದು.

ಸಾಮಾಜಿಕ ಜಾಲತಾಣದ ಮೇಲೆ ನಿಯಂತ್ರಣ ಹೇರುವ ಸಲುವಾಗಿ ಮತ್ತು ಸೈಬರ್‌ ಕ್ರೈಂ ನಿಯಂತ್ರಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ಬಿ.ಸುರೇಶ್‌ಗೌಡ, ಡಾ. ಎಂ.ಆರ್‌. ಹುಲಿನಾಯ್ಕರ್‌, ಜಿಲ್ಲಾಧಿಕಾರಿ ಡಾ.ಕೆ. ರಾಕೇಶ್‌ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ, ಬಿಜೆಪಿ ಮುಖಂಡ ಎಸ್‌.ಶಿವಪ್ರಸಾದ್‌ ಮತ್ತಿತರರಿದ್ದರು.

ಪರಿಸ್ಥಿತಿ ಶಾಂತಿಯುತ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದಿದ್ದ ಪ್ರತಿಭಟನೆಗಳು ತಣ್ಣಗಾಗುತ್ತಿದ್ದು, ರಾಜ್ಯದಲ್ಲಿ ಶಾಂತಿಯುತ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಲ್ಲಿ ಗಲಭೆಗೆ ಕಾರಣರಾದವರ ಕುರಿತು ತನಿಖೆ ನಡೆಯುತ್ತಿದೆ. ಕೇರಳದಿಂದ ಬಂದವರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಪೆಟ್ರೋಲ್‌ ಬಾಂಬ್‌ ಹಾಕಿದ್ದಾರೆ. ಈ ಬಗ್ಗೆ ವಿಡಿಯೋಗಳು ಸಿಕ್ಕಿದೆ. ತನಿಖೆ ಸಂದರ್ಭ ಎಲ್ಲವನ್ನೂ ಪರಿಗಣಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿದರು.

ಅಪರಾಧದಲ್ಲಿ ಭಾಗಿಯಾಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು. ಇಂದಿನ ಸ್ಥಿತಿಗೆ ಯಾರು ಕಾರಣ ಎಂಬುದು ದೇಶಕ್ಕೆ ಗೊತ್ತಿದೆ.
-ಬಸವರಾಜ್‌ ಬೊಮ್ಮಾಯಿ, ಗೃಹ ಸಚಿವ

ಟಾಪ್ ನ್ಯೂಸ್

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.