ಕಡತದಲ್ಲೇ ಬಾಕಿಯಾದ ಕರಾವಳಿಯ “ಪ್ಲಾಸ್ಟಿಕ್‌ ಪಾರ್ಕ್‌’!

90 ಎಕ್ರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಉದ್ದೇಶಿತ ಯೋಜನೆ

Team Udayavani, Dec 23, 2019, 4:53 AM IST

wd-25

ಮಹಾನಗರ: ನಗರ ಹೊರವಲಯದ ಗಂಜೀಮಠ ಮತ್ತು ಗುರುಪುರದ ಸುಮಾರು 90 ಎಕ್ರೆ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೇಂದ್ರ ಸರಕಾರದ ಬಹುನಿರೀಕ್ಷಿತ “ಪ್ಲಾಸ್ಟಿಕ್‌ ಪಾರ್ಕ್‌’ ಯೋಜನೆ ಇನ್ನೂ ಅನುಷ್ಟಾನ ಹಂತದಲ್ಲೇ ಬಾಕಿಯಾಗಿದೆ.

ಸಂಸದ ನಳಿನ್‌ ಕುಮಾರ್‌ ಕಟೀಲು ನೇತೃತ್ವದಲ್ಲಿ ಎರಡು ವರ್ಷದ ಹಿಂದೆ ಗುರುಪುರ ಹಾಗೂ ಗಂಜಿಮಠದಲ್ಲಿ ಪಾರ್ಕ್‌ ಸ್ಥಾಪನೆಯ ಸ್ಥಳ ಪರಿಶೀಲಿಸಿ, ಕೇಂದ್ರ ಕೌಶಲಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತಕುಮಾರ್‌ ಹೆಗಡೆ ಅವರ ಉಪಸ್ಥಿತಿಯಲ್ಲಿ ಮಂಗಳೂರಿನಲ್ಲಿ ಸಭೆ ಕೂಡ ನಡೆಸಲಾಗಿತ್ತು. ಯೋಜನೆಯ ಪ್ರಸ್ತಾವನೆಯನ್ನು ಬೆಂಗಳೂರಿನ ಕೈಗಾರಿಕೆ ಇಲಾಖೆಯ ಉನ್ನತ ಅಧಿಕಾರಿಗಳ ಸಮಿತಿಗೆ ಅಂದು ಕಳುಹಿಸಲಾಗಿತ್ತು. ಈ ಕಡತ ಇಲಾಖೆಯಿಂದ ಇಲಾಖೆಗಳಿಗೆ ಈಗಲೂ ಹೋಗುತ್ತಿದೆ.

ಹಾಗಾದರೆ, ಕೆಲವು ವರ್ಷಗಳಿಂದ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣ ಸಂಬಂಧ ಘೋಷಣೆ-ಮಾತುಕತೆ ನಡೆದದ್ದಕ್ಕೆ ಇನ್ನೂ ಕೂಡ ಜೀವಕಳೆ ಪಡೆದಿಲ್ಲ ಎಂಬುದು ಸ್ಪಷ್ಟವಾದಂತಾಗಿದೆ. ಕೈಗಾರಿಕೆ ಸ್ನೇಹಿ ವಾತಾವರಣವನ್ನು ರಾಜ್ಯದಲ್ಲಿ ಕಲ್ಪಿಸಿಕೊಡುವ ಬಗ್ಗೆ ಮಾತನಾಡುವ ಜನಪ್ರತಿನಿಧಿಗಳು ಇನ್ನೂ ಕೂಡ “ಪ್ಲಾಸ್ಟಿಕ್‌ ಪಾರ್ಕ್‌’ ಯೋಜನೆಯನ್ನು ಬೆನ್ನು ಹಿಡಿದು ಕಾರ್ಯಗತಗೊಳಿಸುವಲ್ಲಿ ಎಡವಿದ್ದು ಯಾಕೆ? ಎಂಬ ಪ್ರಶ್ನೆ ಈಗ ಕಾಡುವಂತಾಗಿದೆ.

1 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯಡಿ ಪ್ಲಾಸ್ಟಿಕ್‌ ತಯಾರಿಕೆಯ ಜತೆಗೆ, ಪ್ಲಾಸ್ಟಿಕ್‌ನ ಮರುಬಳಕೆ ತಂತ್ರಜ್ಞಾನಕ್ಕೂ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಲಾಗಿತ್ತು. ಇದರಿಂದ ಪ್ಲಾಸ್ಟಿಕ್‌ ತ್ಯಾಜ್ಯದ ಸಮರ್ಪಕ ವಿಲೇವಾರಿ ಆಗಲಿದ್ದು, ಇನ್ನೊಂದೆಡೆ ದೇಶದಲ್ಲಿ ಬೇಡಿಕೆ ಇರುವ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತಯಾರಿಸಲು ಸಾಧ್ಯವಾಗಲಿದೆ. ದೇಶದಲ್ಲಿ ಹಲವಾರು ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆ ಘಟಕಗಳಿವೆ.

ಈ ಘಟಕಗಳು ಲಘು ಮತ್ತು ಸಣ್ಣ ಪ್ರಮಾಣದಲ್ಲಿದ್ದು, ದೇಶದ ಬೇಡಿಕೆಯನ್ನು ಪೂರೈಸುವುದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಹುತೇಕ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಹೊರ ದೇಶಗಳಿಂದಲೇ ಆಮದು ಮಾಡಿಕೊಳ್ಳಬೇಕಾಗಿದೆ. ಇದನ್ನು ನಿವಾರಿಸುವುದಕ್ಕಾಗಿಯೇ ದೇಶದ ವಿವಿಧೆಡೆ ಪ್ಲಾಸ್ಟಿಕ್‌ ಪಾರ್ಕ್‌ಗಳ ಸ್ಥಾಪನೆಗೆ ಕೇಂದ್ರದ ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್‌ ಸಚಿವಾಲಯವು ಮುಂದಾಗಿತ್ತು.

ಇದರಂತೆ, ಪಂಜಾಬ್‌ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಒಡಿಶಾ ಹಾಗೂ ಆಂಧ್ರಪ್ರದೇಶಗಳಲ್ಲಿ ಆರು ಪ್ಲಾಸ್ಟಿಕ್‌ ಪಾರ್ಕ್‌ಗಳ ಸ್ಥಾಪನೆಗೆ ಮಂಜೂರಾತಿ ನೀಡಲಾಗಿತ್ತು. ಇದರ ಜತೆಗೆ ಮಧ್ಯಪ್ರದೇಶ, ತಮಿಳುನಾಡು, ಒಡಿಶಾ ಮತ್ತು ಅಸ್ಸಾಂಗಳಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ಗಳ ಸ್ಥಾಪನೆಯ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ವಿಶೇಷವೆಂದರೆ ಎಲ್ಲ ಭಾಗದ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣ ಯೋಜನೆ ಅನುಷ್ಟಾನ ಹಂತದಲ್ಲಿದ್ದರೆ, ಮಂಗಳೂರು ಯೋಜನೆ ಇನ್ನು ಕೂಡ ಕಡತದಲ್ಲಿಯೇ ಬಾಕಿಯಾಗಿದೆ.

ಎಂಆರ್‌ಪಿಎಲ್‌ನಿಂದ ಹೊಸ ರೂಪ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಎಂಆರ್‌ಪಿಎಲ್‌ ಅವಕಾಶಗಳನ್ನು ತೆರೆದಿಟ್ಟಿತು. ಎಂಆರ್‌ಪಿಎಲ್‌ನಿಂದ ಪಾಲಿಪ್ರೊಪಲಿನ್‌ ಘಟಕ ಆರಂಭವಾಗುತ್ತಿದ್ದಂತೆಯೇ ಪ್ಲಾಸ್ಟಿಕ್‌ ಪಾರ್ಕ್‌ನ ಬೇಡಿಕೆ ಗರಿಗೆದರಿತ್ತು. ಪಾಲಿಪ್ರೊಪಲಿನ್‌ ಘಟಕದ ತ್ಯಾಜ್ಯವು ಪ್ಲಾಸ್ಟಿಕ್‌ ಪಾರ್ಕ್‌ನ ಕಚ್ಚಾ ವಸ್ತುವಾಗಿ ಬಳಕೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ಸ್ಥಾಪಿಸುವಂತೆ ಕೆನರಾ ಪ್ಲಾಸ್ಟಿಕ್‌ ಮ್ಯಾನುಫ್ಯಾಕ್ಚರರ್ಸ್‌ ಆ್ಯಂಡ್‌ ಟ್ರೇಡರ್ಸ್‌ ಅಸೋಸಿಯೇಶನ್‌ ವತಿಯಿಂದ 2015ರಲ್ಲಿಯೇ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಇದರಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲವು, ಇದಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿತ್ತು.

“ಪ್ರಸ್ತಾವನೆ ಶೀಘ್ರ ಕೇಂದ್ರಕ್ಕೆ’
ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ನಿರ್ಮಾಣ ಸಂಬಂಧಿಸಿದ ಎಲ್ಲ ಪೂರಕ ಕ್ರಮಗಳು ಈಗ ಅಂತಿಮ ಹಂತದಲ್ಲಿವೆ. ಇದೀಗ ಅನುಷ್ಟಾನ ಏಜೆನ್ಸಿ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕೆಐಎಡಿಬಿ ಇದರ ಉಸ್ತುವಾರಿ ನೋಡಿಕೊಳ್ಳಲಿದೆ. ಇದರ ವರದಿಯನ್ನು ಕೇಂದ್ರ ಸರಕಾರ ಅಂತಿಮಗೊಳಿಸಿ ಪಾರ್ಕ್‌ ನಿರ್ಮಾಣ ಕಾರ್ಯ ನಡೆಯಲಿದೆ.
 - ಗೋಕುಲ್‌ದಾಸ್‌ ನಾಯಕ್‌, ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.