ಪೇಜಾವರ ಶ್ರೀ ಅನಾರೋಗ್ಯ: ಆಸ್ಪತ್ರೆಗೆ ಭೇಟಿ ನೀಡಲಿರುವ ಉಮಾ ಭಾರತಿ, ಸಿದ್ದರಾಮಯ್ಯ
Team Udayavani, Dec 23, 2019, 9:05 AM IST
ಸಂಗ್ರಹ ಚಿತ್ರ
ಮಣಿಪಾಲ: ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅನಾರೋಗ್ಯದಿಂದಾಗಿ ಕಳೆದ ಶುಕ್ರವಾರ ಪೇಜಾವರ ಶ್ರೀಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃತಕ ಉಸಿರಾಟ ವ್ಯವಸ್ಥೆ ಮುಂದುವರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ಮುಂದುವರಿದಿದೆ.
ಔಷಧ ಪ್ರಮಾಣ ಹೆಚ್ಚಿಸುವ ಅಥವಾ ಚಿಕಿತ್ಸಾ ವಿಧಾನ ಬದಲಿಸುವ ಬಗ್ಗೆ ಇಂದು ವೈದ್ಯರ ತಂಡ ತೀರ್ಮಾನ ಮಾಡಲಿದೆ.
ಬಿಜೆಪಿ ಹಿರಿಯ ನಾಯಕಿ, ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಇಂದು ಉಡುಪಿಗೆ ಆಗಮಿಸಲಿದ್ದು, ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ.
ವಿಧಾನಸಭೆಯ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಗಳೂರಿಗೆ ಆಗಮಿಸಲಿದ್ದು, ನಂತರ ಶ್ರೀಗಳ ಯೋಗಕ್ಷೇಮ ವಿಚಾರಿಸಲು ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.