ಗ್ರಾಮೀಣ ಸಬಲೀಕರಣಕ್ಕೆ ಜಾಬಿನ್‌ ಜಾಗೃತಿ


Team Udayavani, Dec 23, 2019, 11:02 AM IST

huballi-tdy-3

ಹುಬ್ಬಳ್ಳಿ: ಗ್ರಾಮೀಣ ಜನರಿಗೆ ಆರೋಗ್ಯ, ಶಿಕ್ಷಣ, ಸಾವಯವ ಕೃಷಿ, ಸರ್ಕಾರಿ ವಿವಿಧ ಸೌಲಭ್ಯಗಳ ಕುರಿತಾಗಿ ಜಾಗೃತಿ ಮೂಡಿಸುವ, ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಮಾರ್ಗದರ್ಶನ, ಸಹಕಾರಿ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಆರಂಭಿಸಿರುವ ಉನ್ನತ ಭಾರತ ಅಭಿಯಾನದಡಿ ಇಲ್ಲಿನ ಪಿ.ಸಿ.ಜಾಬಿನ್‌ ಕಾಲೇಜು ಐದು ಗ್ರಾಮಗಳಲ್ಲಿ ಜಾಗೃತಿಯ ಮಹತ್ವದ ಹೆಜ್ಜೆಗಳನ್ನಿರಿಸಿದೆ.

ಕೇಂದ್ರ ಸರ್ಕಾರದ ಉನ್ನತ ಭಾರತ ಅಭಿಯಾನ 2.0 ಅಡಿಯಲ್ಲಿ ರಾಜ್ಯದ ಎರಡು ಕಾಲೇಜುಗಳನ್ನು ಆಯ್ಕೆ ಮಾಡಲಾಗಿದ್ದು, ಎರಡೂ ಉತ್ತರ ಕರ್ನಾಟಕದ ಕಾಲೇಜುಗಳು ಎಂಬುದು ಹೆಮ್ಮೆಯ ವಿಷಯ. ಹುಬ್ಬಳ್ಳಿಯ ಕೆಎಲ್‌ಇ ಸಂಸ್ಥೆಯ ಪಿ.ಸಿ.ಜಾಬಿನ್‌ ಕಾಲೇಜು ಹಾಗೂ ಬಾಗಲಕೋಟೆ ಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜು ಅಭಿಯಾನಕ್ಕೆ ಆಯ್ಕೆಯಾಗಿವೆ. ಪಿ.ಸಿ.ಜಾಬಿನ್‌ ಕಾಲೇಜು ಐದು ಗ್ರಾಮಗಳನ್ನು ದತ್ತು ಪಡೆದು ಹಲವು ಜಾಗೃತಿ, ಅಭಿವೃದ್ಧಿಗೆ ಪೂರಕ ಕಾರ್ಯಗಳನ್ನು ಈಗಾಗಲೇ ಕೈಗೊಂಡಿದೆ.

ಮುಂಬೈ ಐಐಟಿಯವರು ಗ್ರಾಮಗಳ ಅಭಿವೃದ್ಧಿ ಹಾಗೂ ಸಬಲೀಕರಣ ನಿಟ್ಟಿನಲಿ ಕೈಗೊಳ್ಳಬಹುದಾದ ಜಾಗೃತಿ ಹಾಗೂ ಕಾಮಗಾರಿಗಳ ಕುರಿತಾಗಿ ಹಲವು ಶಿಫಾರಸುಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು, ಈ ಚಿಂತನೆಯ ಫ‌ಲವಾಗಿ ಕೇಂದ್ರ ಸರ್ಕಾರ ಉನ್ನತ ಭಾರತ ಅಭಿಯಾನ 2.0 ದೇಶಾದ್ಯಂತ ಜಾರಿಗೊಳಿಸಿತ್ತು.

ಐದು ಗ್ರಾಮಗಳಲ್ಲಿ ಜಾಗೃತಿ: ಪಿ.ಸಿ.ಜಾಬಿನ್‌ ಕಾಲೇಜು ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ, ಸುಳ್ಳ, ಸಿರಗುಪ್ಪಿ, ಅದರಗುಂಚಿ, ಶರೇವಾಡ ಗ್ರಾಮಗಳನ್ನು ದತ್ತು ಪಡೆದಿದೆ. ಅಲ್ಲಿನ ಗ್ರಾಪಂಗಳ ಸಹಯೋಗದೊಂದಿಗೆ ಗ್ರಾಮಗಳಲ್ಲಿ ವಿವಿಧ ಜಾಗೃತಿ, ಅಭಿವೃದ್ಧಿ ಹಾಗೂ ಪರಿಸರಕ್ಕೆ ಪೂರಕ ಕಾರ್ಯಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ತೊಡಗಿದ್ದಾರೆ.

ಪ್ರತಿ ಗ್ರಾಮದಲ್ಲಿ ಕನಿಷ್ಟ ನಾಲ್ಕು ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಕಳೆದೊಂದು ವರ್ಷದಿಂದ ಗ್ರಾಮಸ್ಥರಿಗೆ ಆರೋಗ್ಯ, ಶಿಕ್ಷಣ, ಪರಿಸರ, ಕೃಷಿ, ನೀರು ನಿರ್ವಹಣೆ, ಗ್ರಾಮೀಣ ಉದ್ಯಮ ಇನ್ನಿತರ ವಿಷಯಗಳ ಕುರಿತಾಗಿ ಚರ್ಚೆ, ಜನರಿಂದ ಮಾಹಿತಿ, ಅಭಿಪ್ರಾಯ ಸಂಗ್ರಹ ಜಾಗೃತಿ ಹಾಗೂ ಅಗತ್ಯ ಮಾಗದರ್ಶನ ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದೆ.

ಐದು ಗ್ರಾಮಗಳಿಗೆ ಪ್ರತ್ಯೇಕವಾಗಿ ಇಬ್ಬರು ಉಪನ್ಯಾಸಕರ ನೇತೃತ್ವದಲ್ಲಿ ತಲಾ 25 ವಿದ್ಯಾರ್ಥಿಗಳ ತಂಡವನ್ನು ರೂಪಿಸಲಾಗಿದ್ದು, ಆಯಾ ತಂಡಗಳು ನಿಗದಿಪಡಿಸುವ ಗ್ರಾಮಗಳಿಗೆ ಕನಿಷ್ಟ ತಿಂಗಳಿಗೊಮ್ಮೆಯಾದರೂ ತೆರಳಿ ಅಲ್ಲಿನ ಜನರೊಂದಿಗೆ ಬೆರೆಯುವ, ಅವರ ಸಮಸ್ಯೆಗಳನ್ನು ಆಲಿಸುವ, ಜಾಗೃತಿ ಮೂಡಿಸುವ, ಸೌಲಭ್ಯಗಳ ಪಡೆಯುವ ನಿಟ್ಟಿನಲ್ಲಿ ಅಗತ್ಯ ಸಹಕಾರ ತೋರುವ ಕಾರ್ಯ ಮಾಡುತ್ತಿದ್ದಾರೆ.

ಜಲ ಸಂರಕ್ಷಣೆ-  ಸಂವರ್ಧನೆಗೆ ಆದ್ಯತೆ:  ಐದು ಗ್ರಾಮಗಳಲ್ಲಿ ಪರಸರ ಸಂರಕ್ಷಣೆ ನಿಟ್ಟಿನಲ್ಲಿ ಗಿಡಗಳನ್ನು ನೆಡುವ ಕಾರ್ಯ ಮಾಡಲಾಗಿದ್ದು, ಟೀಕ್‌, ಬೇವು, ಸಿಲ್ವರ್‌ ಓಕ್‌, ವಿವಿಧ ಔಷಧಿ ಗುಣಗಳ ಗಿಡಗಳನ್ನು ನಡೆಲಾಗಿದೆ. ಸರ್ಕಾರಿ ಶಾಲೆ ಆವರಣದಲ್ಲಿ ಹಾಗೂ ರೈತರ ಹೊಲಗಳಲ್ಲಿಯೂ ಗಿಡಗಳನ್ನು ನೆಡಲಾಗಿದ್ದು, ಸ್ಥಳೀಯ ಒಬ್ಬ ವಿದ್ಯಾರ್ಥಿಗಳಿಗೆ ಒಂದು ಗಿಡದ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಜತೆಗೆ ಪ್ಲಾಸ್ಟಿಕ್‌ ಬಳಸದಂತೆ ಜಾಗೃತಿ ಮೂಡಿಸುವ ಅಭಿಯಾನ ಕೈಗೊಳ್ಳಲಾಗಿದೆ. ಜಲಶಕ್ತಿ ಅಭಿಯಾನದಡಿ ಜಲ ಸಂರಕ್ಷಣೆ, ಸಂವರ್ಧನೆ ಹಾಗೂ ನಿರ್ವಹಣೆ ಕುರಿತಾಗಿ ಜಾಗೃತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಭವಿಷ್ಯದ ದೃಷ್ಟಿಯಿಂದ ಜಲ ಸಂರಕ್ಷಣೆಯಲ್ಲಿ ಜನರ ಪಾಲ್ಗೊಳ್ಳುವಿಕೆ, ಜಲ ಬಜೆಟ್‌ ತಯಾರು, ನೀರು ಬಳಕೆ ನಿರ್ವಹಣೆ, ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಇತರೆ ಜಲ ಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ರ್ಯಾಲಿಗಳನ್ನು ಕೈಗೊಳ್ಳಲಾಗಿದ್ದು, ಜನರಿಗೆ ಮಳೆ ನೀರು ಕೊಯ್ಲು ಅಳವಡಿಕೆಗೆ ಪ್ರೇರಣೆ ನೀಡುವ ಕಾರ್ಯ ಮಾಡಲಾಗುತ್ತಿದೆ.

ಉನ್ನತ ಭಾರತ ಅಭಿಯಾನದಡಿ ನಮ್ಮ ಕಾಲೇಜು ಐದು ಗ್ರಾಮಗಳನ್ನು ದತ್ತು ಪಡೆದು ವಿವಿಧ ಜಾಗೃತಿ, ಅಭಿವೃದ್ಧಿ ಪೂರಕ ಕಾರ್ಯಗಳಿಗೆ ಮುಂದಾಗಿದ್ದು, ಗ್ರಾಮದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಐದು ಗ್ರಾಮಗಳಲ್ಲಿನ ಸುಮಾರು 24 ನಿವೃತ್ತ ಸೈನಿಕರನ್ನು ಆಹ್ವಾನಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸನ್ಮಾನ ಮಾಡಿದ್ದೇವೆ. ಗ್ರಾಮೀಣ ಜನರ ಹಲವು ಸಮಸ್ಯೆಗಳಿಗೆ ಸ್ಪಂದಿಸುವ, ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮುಂದುವರೆದಿದೆ.  -ಡಾ| ಎಸ್‌.ವಿ.ಹಿರೇಮಠ, ಪ್ರಾಂಶುಪಾಲ, ಪಿ.ಸಿ.ಜಾಬಿನ್‌ ಕಾಲೇಜು

 

-ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.