ಹೋರಾಟಕ್ಕೆ ಜಾನಪದ ಪದವೀಧರರ ತೀರ್ಮಾನ

Team Udayavani, Dec 23, 2019, 12:56 PM IST

hv-tdy-1

ಶಿಗ್ಗಾವಿ: ಜಾನಪದದ ಪದವೀಧರರಿಗೆ ಸರ್ಕಾರದ ವ್ಯವಸ್ಥೆಯಲ್ಲಿ ಮಾನ್ಯತೆ ಪಡೆದುಕೊಳ್ಳಬೇಕಾಗಿದ್ದು, ಇದಕ್ಕಾಗಿ ರಾಜ್ಯವ್ಯಾಪಿ ಹೋರಾಟ ಮಾಡಲು ಕರ್ನಾಟಕ ಜಾನಪದ ಪದವೀಧರರ ಸಂಘ ತೀರ್ಮಾನಿಸಿದೆ.

ಪಟ್ಟಣದ ಪ್ರವಾಸಿಗೃಹದಲ್ಲಿ ನಡೆಸಿದ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಜಾನಪದವನ್ನು ಗ್ರಾಮೀಣ ಅಬಿವೃದ್ಧಿ ಇಲಾಖೆ, ಪಾರಂಪರಿಕ ಕೌಶಲ್ಯ ಅಭಿವೃದ್ಧಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಜಾನಪದ ಪದವೀಧರರಿಗೆ ಅವಕಾಶ ಕಲ್ಪಿಸಬೇಕು ಎಂದು ಸಂಬಂಧಿಸಿದ ಇಲಾಖಾ ಸಚಿವರಲ್ಲಿ ಬೇಡಿಕೆ ಸಲ್ಲಿಸಬೇಕು ಎಂದು ನಿರ್ಧರಿಸಲಾಯಿತು. ಕರ್ನಾಟಕದಲ್ಲಿ ಹಲವು ದಶಕಗಳಿಂದ ಜಾನಪದ ಪದವೀಧರರಿಗೆ ಅನ್ಯಾಯ ಆಗುತ್ತಲೇ ಇದೆ. ಈ ಪದವಿ ಮುಗಿಸಿದವರಿಗೆ ಸರಕಾರದಲ್ಲಿ ವೃತ್ತಿ ಅವಕಾಶಗಳು ಅತಿ ಕಡಿಮೆಯಾಗಿದ್ದು,ಇರುವ ಕೆಲವೇ   ಕೆಲವು ಅವಕಾಶಗಳನ್ನು ವಿವಿಧ ಪದವೀಧರರು ಕಿತ್ತುಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು. ಜಾನಪದ ಪದವೀಧರರಿಗೆ ಹೊಸ ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.

ಜಾನಪದ ಪದವೀಧರರಿಗೆ ಉದ್ಯೋಗ ಸೃಷ್ಟಿಸುವ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರುವ ಮುಂದಾಳತ್ವವನ್ನು ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ವಹಿಸಿಕೊಳ್ಳಲು ಮನವಿ ಮಾಡಬೇಕು. ಈ ಬಗ್ಗೆ ವಿವಿ ಕುಲಪತಿಯವರೊಂದಿಗೆ ಚರ್ಚಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಜಾನಪದವನ್ನು ಪಿಯುಸಿ ಹಾಗೂ ಪದವಿ ಅಧ್ಯಯನದಲ್ಲಿ ಸೇರಿಸುವುದಕ್ಕೆ ಸರ್ಕಾರದ ಗಮನ ಸೆಳೆಯಬೇಕು. ಇದಕ್ಕಾಗಿ ಹಲವು ಹೋರಾಟ ಮಾಡಬೇಕು. ಈ ಹೋರಾಟಕ್ಕೆ ಜಾನಪದ ಅಕಾಡೆಮಿ, ಕರ್ನಾಟಕ ಬಯಲಾಟ ಅಕಾಡೆಮಿ, ಯಕ್ಷಗಾನ ಅಕಾಡೆಮಿ, ಜಾನಪದ ಪರಿಷತ್ತು, ಜಾನಪದ ಲೋಕ, ಕನ್ನಡ ಜಾನಪದ ಪರಿಷತ್‌ನಂತಹ ಸಂಘಟನೆಗಳ ಸಹಯೋಗ, ಬೆಂಬಲ ಪಡೆದುಕೊಳ್ಳಬೇಕು. ಹೋರಾಟಕ್ಕಾಗಿ ಸಮಿತಿ ಯೋಜನೆ ಹಾಕಿಕೊಳ್ಳಬೇಕು ಎಂದು ನಿರ್ಧರಿಸಲಾಯಿತು.

ಸಭೆಯಲ್ಲಿ ಕರ್ನಾಟಕ ಜಾನಪದ ಪದವೀಧರರ ಸಂಘದ ಅಧ್ಯಕ್ಷ ಬಸವರಾಜ ಜವಳಗಟ್ಟಿ, ಉಪಾಧ್ಯಕ್ಷ ಗುಡ್ಡಪ್ಪ ನಿಂಬಣ್ಣನವರ, ಕಾರ್ಯದರ್ಶಿ ಜಿ.ಎಸ್‌.ಸಣ್ಣಯ್ಯ, ಖಜಾಂಚಿ ಷರೀಫ್‌ ಮಾಕಪ್ಪನವರ, ಸಂಘಟನಾ ಕಾರ್ಯದರ್ಶಿಗಳಾದ ಹನುಮಂತಪ್ಪ ಬೆಂಗೇರಿ ಹಾಗೂ ಡಾ| ರಜೀಯಾಬೇಗಂ ನಧಾಪ್‌, ಮಾಧ್ಯಮ ಕಾರ್ಯದರ್ಶಿಗಳಾದ ಡಾ. ರಾಜಶೇಖರ ಡೊಂಬರಮತ್ತೂರು ಮತ್ತು ಪ್ರವೀಣ ಕರಿಯಪ್ಪನವರ ಇನ್ನಿತರರು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.