ಶತಾಯುಷಿ ಅಣ್ಣಾ ಗೌಡಗೆ ಸತ್ಕಾರ
Team Udayavani, Dec 23, 2019, 4:29 PM IST
ಚಿಕ್ಕೋಡಿ: ಶತಾಯುಷಿಗಳು ಇಂದಿನ ಯುವಕರಿಗೆ ಆದರ್ಶಪ್ರಾಯರಾಗಿದ್ದು, ಅವರು ಸೇವನೆ ಮಾಡುವ ಆಹಾರ ಪದ್ಧತಿ ಮತ್ತು ಜೀವನ ಶೈಲಿಯನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಪಾತ್ರ ವಹಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಹೇಳಿದರು.
ರವಿವಾರ ತಾಲೂಕಿನ ಚಿಂಚಣಿ ಗ್ರಾಮದ ಸಿದ್ಧಪ್ರಭು ಸಂಸ್ಥಾನ ಮಠದ ಕನ್ನಡಭವನದಲ್ಲಿ ಶತಾಯುಷಿ ಅಣ್ಣಾಗೌಡ ಲಕ್ಷ್ಮಣಗೌಡ ಪಾಟೀಲರಿಗೆ ಹಮ್ಮಿಕೊಂಡ ನಾಗರಿಕ ಸನ್ಮಾನ ಹಾಗೂ ಅಭಿನಂದನ ಗ್ರಂಥಗಳ ಲೋಕಾರ್ಪಣೆ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿ, ಗಾಂಧಿಧೀವಾದಿ,ಶರಣಜೀವಿ ಹಾಗೂ ಸದಾ ಕಾಯಕಯೋಗಿಯಾಗಿ ಸಮಾಜದ ಉನ್ನತಿಗಾಗಿ ಶ್ರಮಿಸಿದ ಚಿಂಚಣಿಯ ಶತಾಯುಷಿ ಅಣ್ಣಾಗೌಡ ಲಕ್ಷ್ಮಣಗೌಡ ಪಾಟೀಲರು ನೇರ ನಡೆನುಡಿಯಿಂದ ಸಮಾಜದಲ್ಲಿ ನೊಂದ ಜನರಿಗೆ ನ್ಯಾಯ ಒದಗಿಸುವಲ್ಲಿ ಮಾಡಿದ ಗೌಡಕಿ ಮನೆತನ ಅವರ ಬದುಕು ಆದರ್ಶಮಯವಾಗಿದೆ ಎಂದರು. ಸಾನ್ನಿಧ್ಯ ವಹಿಸಿದ್ದ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು.
ಶಿಕ್ಷಕ ಕುಮಾರ ಹೊನ್ನಾಯ್ಕ ಬರೆದಿರುವ “ನಮ್ಮೂರ ಹಿರಿಯ ಚೇತನ ಶತಾಯುಷಿ ಅಣ್ಣಾಗೌಡ ಲಕ್ಷ್ಮಣಗೌಡ ಪಾಟೀಲ’ ಅಭಿನಂದನ ಗ್ರಂಥವನ್ನು ಗದಗದ ಜಗದ್ಗುರು ಡಾ. ತೋಂಟದ ಸಿದ್ದರಾಮ ಸ್ವಾಮೀಜಿ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಚಿಕ್ಕೋಡಿಯ ಸಂಪಾದನಾ ಸ್ವಾಮೀಜಿ, ಆಡಿಯ ಸಿದ್ದೇಶ್ವರ ಸ್ವಾಮೀಜಿ, ಮಜಲಟ್ಟಿಯ ಬಸವಪ್ರಭು ಮಹಾರಾಜರು, ಗಿರಗಾಂವದ ನರಸಿಂಗೇಶ್ವರ ಮಹಾರಾಜರು, ಮಾಜಿ ಸಚಿವ ಎ.ಬಿ. ಪಾಟೀಲ,ವೀರಕುಮಾರ ಪಾಟೀಲ, ಶಾಸಕ ಕಾಕಾಸಾಹೇಬ ಪಾಟೀಲ, ಸಹಕಾರಿ ಧುರೀಣ ಡಿ.ಟಿ. ಪಾಟೀಲ,ಬಿ.ಆರ್. ಸಂಗಪ್ಪಗೋಳ, ಎಸ್.ವೈ.ಹಂಜಿ, ವೀರೇಶ ಪಾಟೀಲ, ಬಸವರಾಜ ಪಾಟೀಲ, ಸಿದ್ದೇಶ್ವರ ಪಾಟೀಲ, ಸಂದೀಪ ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.