ಜ. 15ರೊಳಗೆ ತನಿಖಾ ವರದಿ ನೀಡಿ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒಗೆ ಸಚಿವ ಸೋಮಣ್ಣ ಸೂಚನೆ
Team Udayavani, Dec 23, 2019, 6:53 PM IST
ಬೀದರ: ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸುವಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಸಿ ಜ. 15ರೊಳಗೆ ವರದಿ ನೀಡಬೇಕು ಎಂದು ವಸತಿ ಖಾತೆ ಸಚಿವ ವಿ. ಸೋಮಣ್ಣ ಅವರು ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್ ಅವರಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ನಡೆದ ವಸತಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ಮನೆಗಳ ನಿರ್ಮಾಣದಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ಗಮನ ಸೆಳೆದರು. ಔರಾದ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಕಳಪೆ ಕಾಮಗಾರಿ ನಡೆಸಲಾಗಿದೆ. ಅವ್ಯವಹಾರವೂ ಆಗಿದೆ. ಹೀಗಾಗಿ ಮನೆಗಳ ನಿರ್ಮಾಣದ ಕುರಿತು ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವ ಸೋಮಣ್ಣ 2013ರಿಂದ ಈವರೆಗೆ ಸರ್ಕಾರದ ವಿವಿಧ ಯೋಜನೆಗಳಾದ ಡಾ| ಬಿ.ಆರ್. ಅಂಬೇಡ್ಕರ್ ಗ್ರಾಮೀಣ, ಬಸವ ವಸತಿ, ದೇವರಾಜ ಅರಸು ಹಾಗೂ ಪ್ರಧಾನಮಂತ್ರಿ ಆವಾಸ್ ವಸತಿ ಯೋಜನೆಗಳಡಿ ನಿರ್ಮಿಸಿರುವ ಮನೆಗಳ ಕುರಿತು ತನಿಖೆ ನಡೆಸಿ ವರದಿ ನೀಡಬೇಕು ಎಂದು ಸೂಚಿಸಿದರು.
ಬಳಿಕ ಜಿಲ್ಲೆಗೆ ವಸತಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವನ್ನು 10 ದಿನಗಳಿಗಾಗಿ ಬೀದರಗೆ ಕಳುಹಿಸಿ ಮೂರನೇ ಹಂತದ ತನಿಖೆ ನಡೆಸುವೆ. ಒಂದು ವೇಳೆ ಅಧಿಕಾರಿಗಳು ನೀಡಿರುವ ವರದಿ ತಪ್ಪಾಗಿದ್ದರೆ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಮನೆ ನಿರ್ಮಾಣ,
ಹಂಚಿಕೆಯಲ್ಲಿ ಎಷ್ಟೇ ದೊಡ್ಡ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವೆ ಎಂದು ಹೇಳಿದರು.
ಅರ್ಹ ಬಡವರಿಗೆ ಮನೆಗಳ ಹಂಚಿಕೆ ಆಗಬೇಕು. ಆದರೆ, ಪ್ರತಿ ಬಾರಿ ಒಬ್ಬನೇ ಫಲಾನುಭವಿಗೆ ವಿವಿಧ ಯೋಜನೆಗಳಡಿ ಮನೆ ನೀಡುವ ಮೂಲಕ ಅಧಿಕಾರಿಗಳು ತಪ್ಪು ಎಸಗುತ್ತಿದ್ದಾರೆ. ಈ ವಿಷಯದಲ್ಲಿ ಪಾರದರ್ಶಕತೆ ಕಾಯ್ದುಕೊಂಡು ವಂಚನೆಗೆ ಅವಕಾಶ ನೀಡದಂತೆ ಕೆಲ ಮಾಡಿ. ವಸತಿ ಯೋಜನೆಗಳಲ್ಲಿನ ಅವ್ಯವಹಾರ ತಡೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಕೆಎಎಸ್ ಶ್ರೇಣಿ ಅಧಿಕಾರಿಗಳನ್ನು ಜಿಲ್ಲೆಗೆ ಕಳುಹಿಸಿ ಮೂರನೇ ಹಂತದ ತನಿಖೆ ನಡೆಸಲಾಗುವುದು ಎಂದು ಸಚಿವರು ಹೇಳಿದರು. ಭಾಲ್ಕಿಯಲ್ಲಿ ಉಳ್ಳವರಿಗೆ ಮನೆ ನೀಡುವ ಮೂಲಕ ಅರ್ಹರಿಗೆ ಅನ್ಯಾಯ ಮಾಡಲಾಗಿದೆ ಎಂದು ಸಂಸದ ಭಗವಂತ ಖೂಬಾ ಸಚಿವರ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಸಚಿವ ವಿ. ಸೋಮಣ್ಣ, ಭಾಲ್ಕಿ ತಾಲೂಕಿನಲ್ಲಿ ಗ್ರಾಮವಾರು, ಕುಟುಂಬವಾರು ಹಾಗೂ ಯೋಜನಾವಾರು ತನಿಖೆ ನಡೆಸಿ, ಫಲಾನುಭವಿಗಳ ಪಟ್ಟಿ ನೀಡುವಂತೆ ಸಿಇಒ ಅವರಿಗೆ ಸೂಚಿಸಿದರಲ್ಲದೇ ಒಂದು ವೇಳೆ ತಪ್ಪೇ ಆಗಿದ್ದಲ್ಲಿ ಭಾಲ್ಕಿಗೆ 1 ರೂ. ಸಹ ಬಿಡುಗಡೆ ಮಾಡಬೇಡಿ ಎಂದು ನಿರ್ದೇಶನ ನೀಡಿದರು.
ಶಾಸಕ ರಹೀಮ್‌ಖಾನ್, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ್, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.