ಡಿ.27ಕ್ಕೆ ಯಕ್ಷಗಾನ ಪ್ರಸಂಗಗಳ ಡಿಜಿಟಲೀಕರಣ ಲೋಕಾರ್ಪಣೆ
Team Udayavani, Dec 23, 2019, 7:17 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಡಿ.27 ರಂದು ನಗರದಲ್ಲಿ ‘ಯಕ್ಷಗಾನ ಪ್ರಸಂಗಗಳ ಡಿಜಟಲೀಕರಣ’ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಗೆ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಅವರು ಯಕ್ಷಗಾನ ಪ್ರಸಂಗಗಳ ಲೋಕಾರ್ಪಣೆ ಮಾಡಲಿದ್ದಾರೆ.
ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ, ಯಕ್ಷಗಾನ ವಾಹಿನಿ ಅಧ್ಯಕ್ಷ ಡಾ. ಆನಂದರಾಮ ಉಪಾಧ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ.
ಇದಕ್ಕೂ ಮೊದಲು ಕು.ತುಳಸಿ ಹೆಗಡೆ ಅವರು ‘ಪಂಪ ಪಾವನ ಕಥಾ’ ಎಂಬ ಯಕ್ಷರೂಪಕವನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.