ಸೌದಿ ಪತ್ರಕರ್ತನ ಹತ್ಯೆ : ಐವರಿಗೆ ಮರಣ ದಂಡನೆ ವಿಧಿಸಿದ ನ್ಯಾಯಾಲಯ
Team Udayavani, Dec 23, 2019, 8:13 PM IST
ಸೌದಿ: ಸೌದಿಯ ರಿಯಾದ್‌ನಲ್ಲಿ ವಾಷಿಂಗ್ಟನ್ ಪೋಸ್ಟ್‌ನ ಪತ್ರಕರ್ತನ ಹತ್ಯೆಗೆ ಕಾರಣವಾದ 5 ಮಂದಿಗೆ ಅಲ್ಲಿನ ನ್ಯಾಯಾಲಯ ಮರಣ ದಂಡನೆಯ ತೀರ್ಪು ನೀಡಿದೆ. ರಿಯಾದ್‌ನಲ್ಲಿ ಪತ್ರಕರ್ತ ಜಮಾಲ್ ಖಶೋಗ್ಗಿ ಅವರನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಕುರಿತಂತೆ ಸೌದಿ ಅರೇಬಿಯಾದ ಪಬ್ಲಿಕ್ ಪ್ರಾಸಿಕ್ಯೂಟರ್ ಸೋಮವಾರ ತೀರ್ಪು ನೀಡಿದೆ.
ಸೌದಿ ಅರೇಬಿಯಾ ರಾಜಮನೆತನದ ಟೀಕಾಕಾರರಾಗಿದ್ದ ಜಮಾಲ್ ಖಶೋಗಿಯನ್ನು ಕಳೆದ ಅಕ್ಟೋಬರ್‌ನಲ್ಲಿ ಟರ್ಕಿಯ ಇಸ್ತಾಂಬುಲ್ ನಲ್ಲಿರುವ ಸೌದಿ ರಾಯಭಾರ ಕಚೇರಿಯೊಳಗೆ ಹತ್ಯೆ ಮಾಡಲಾಗಿತ್ತು. ಹತ್ಯೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಐವರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ನೀಡಿದ್ದು, ಉಳಿದ ಇಬ್ಬರನ್ನು ಖುಲಾಸೆಗೊಳಿಸಲಾಗಿದೆ.
ಕೊಲೆ ನಡೆದ ಸಮಯದಲ್ಲಿ ಇಸ್ತಾಂಬುಲ್‌ನ ರಾಯಭಾರಿಯಾಗಿದ್ದ ಮೊಹಮ್ಮದ್ ಅಲ್ ಒತೈಬಿಯನ್ನೂ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಒಟ್ಟಾರೆ 11 ಆರೋಪಿಗಳಲ್ಲಿ ಐವರಿಗೆ ಗಲ್ಲು ಶಿಕ್ಷೆ, ಮೂರು ಜನರಿಗೆ ತಲಾ 24 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಈ ಹತ್ಯೆ ಸಂಬಂಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಸೌದಿ ದೊರೆ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ವಿರುದ್ಧ ಸಹ ಆಕ್ರೋಶ ಕೇಳಿಬಂದಿತ್ತು. ಆದರೆ ಈ ಹತ್ಯೆಗೂ ಅಲ್ಲಿನ ರಾಜಕುಮಾರರಿಗೂ ಯಾವುದೇ ಸಂಬಂಧ ಇಲ್ಲ ಎಂದು ಸೌದಿ ಹೇಳಿತ್ತು.
ಈಗ ಪ್ರಾಸಿಕ್ಯೂಶನ್ ಖಶೋಗ್ಗಿ ಹತ್ಯೆ ಪೂರ್ವನಿಯೋಜಿತ ಕೃತ್ಯವಲ್ಲ ಎಂದಿದೆ. ಜಮಾಲ್ ಖಶೋಗ್ಗಿ ಅವರು ಅಕ್ಟೋಬರ್ 2018ರಲ್ಲಿ ಬೆಳಗ್ಗೆ ಇಸ್ತಾಂಬುಲ್‌ನಲ್ಲಿರುವ ತಮ್ಮ ದೇಶದ ದೂತಾವಾಸಕ್ಕೆ ಕಚೇರಿಗೆ ತೆರಳಿದ್ದರು. ಆದರೆ ಅವರು ಹತ್ಯೆಯಾಗಿದ್ದು ಅವರ ಮೃತದೇಹ ಎಲ್ಲಿಯೂ ಪತ್ತೆಯಾಗಿಲ್ಲ.
ಆದರೆ ಟರ್ಕಿ ಹೇಳುವ ಪ್ರಕಾರ ಪತ್ರಕರ್ತನನ್ನು ಆ ದೇಶದ ರಾಯಾಭಾರ ಕಚೇರಿಯಲ್ಲಿ ಕತ್ತು ಹಿಸುಕಿ ಸಾಯಿಸಲಾಗಿದೆ. ಆತನ ದೇಹವನ್ನು ತುಂಡರಿಸಲಾಗಿದೆ ಎಂದಿದ್ದರು. ಅವರ ಅವಶೇಷಗಳು ಈ ತನಕ ಪತ್ತೆಯಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.