ನಾರ್ವೆ ಮಾದರಿ ತಡೆಗೋಡೆ ಕೈಬಿಟ್ಟ ರಾಜ್ಯ ಸರ್ಕಾರ
Team Udayavani, Dec 24, 2019, 3:00 AM IST
ಬಾಗಲಕೋಟೆ: ರಾಜ್ಯದ ಅತಿ ದೊಡ್ಡ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಯೋಜನೆ ಅನುಷ್ಠಾನದ ವೇಳೆ ಮುಳುಗಡೆ ಯಾಗುವ 12 ಗ್ರಾಮ ಹಾಗೂ ಸಾವಿರಾರು ಎಕರೆ ಭೂ ಸ್ವಾಧೀನ ಮಾಡಿಕೊಳ್ಳುವುದನ್ನು ತಡೆಯಲು ನಾರ್ವೆ ದೇಶದ ಮಾದರಿಯಲ್ಲಿ ತಡೆಗೋಡೆ ನಿರ್ಮಾಣ ಯೋಜನೆ ಕೈಬಿಡುವಂತೆ ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿ ಗಳಿಗೆ ಸೂಚಿಸಿದ್ದಾರೆ.
ಸೋಮವಾರ ಯುಕೆಪಿ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಕಾರಜೋಳ, ನಾರ್ವೆ ಮಾದರಿ ತಡೆಗೋಡೆ ನಮ್ಮಲ್ಲಿ ಸಾಧ್ಯವಿಲ್ಲ. ಅದನ್ನು ಕೈಬಿಟ್ಟು, ಕೂಡಲೇ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕು ಎಂದರು. ನ್ಯಾ. ಬ್ರಿಜೇಶಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣದ ಅಂತಿಮ ತೀರ್ಪಿನಲ್ಲಿ ರಾಜ್ಯಕ್ಕೆ 170 ಟಿಎಂಸಿ ಅಡಿ ನೀರು ಹಂಚಿಕೆಯಾಗಿದ್ದು, ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸಲು ಅನುಮತಿ ನೀಡಿದೆ.
ಜಲಾಶಯ ಎತ್ತರಿಸಿದಾಗ ಬಾಗಲಕೋಟೆ ನಗರದ 3 ಸಾವಿರ ಕಟ್ಟಡ, ಅವಳಿ ಜಿಲ್ಲೆಯ 20 ಗ್ರಾಮಗಳು, 97 ಸಾವಿರ ಎಕರೆ ಭೂಮಿ ಹಿನ್ನೀರಿನಲ್ಲಿ ಮುಳುಗಡೆಯಾಗುತ್ತದೆ. ಇದನ್ನು ತಡೆಯಲು ನಾರ್ವೆ ಮಾದರಿ ತಡೆಗೋಡೆ ನಿರ್ಮಿಸಲು ಹಿಂದಿನ ಕಾಂಗ್ರೆಸ್ ಸರ್ಕಾರ ಚಿಂತಿಸಿತ್ತು. ಇದಕ್ಕಾಗಿ ಯೋಜನೆ ರೂಪಿಸಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಿಸಿ ಜಮೀನು ಮತ್ತು ಗ್ರಾಮಗಳನ್ನು ಉಳಿಸಲು ಸಾಧ್ಯವಿದೆ ಎಂದು ತಿಳಿಸಲಾಗಿತ್ತು. ಈ ಕುರಿತು ಪರ-ವಿರೋಧ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.