ಮಹದಾಯಿ: 5ಕ್ಕೆ ಶಾಸಕ, ಸಂಸದರ ಸಭೆ
Team Udayavani, Dec 24, 2019, 3:04 AM IST
ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಇಲಾಖೆ ಒಪ್ಪಿಗೆ ನೀಡಿ, ನಂತರ ಗೋವಾ ಒತ್ತಡಕ್ಕೆ ಮಣಿದು ಹಿಂಪಡೆದಿದ್ದನ್ನು ಖಂಡಿಸಿ ಹಾಗೂ ಮಹದಾಯಿ ಅಧಿಸೂಚನೆಗೆ ಒತ್ತಾಯಿಸಿ ಹೋರಾಟ ಗಟ್ಟಿಗೊಳಿಸಲು ಜ.5ರಂದು ಬೆಳಗಾವಿ ವಿಭಾಗದ ಶಾಸಕರು, ಸಂಸದರ ಸಭೆ ಕರೆಯಲು ತೀರ್ಮಾನಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಹುಬ್ಬಳ್ಳಿ, ನವಲಗುಂದ, ನರಗುಂದ ಸೇರಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಹೋರಾಟಗಾರರು, ರೈತ ಮುಖಂಡರು ಸೋಮವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ಸಂಘಟಿತ ಹೋರಾಟ ತೀವ್ರಗೊಳಿಸುವ ಕುರಿತಾಗಿ ನಿರ್ಧರಿಸಿದರು.
ಜ.20ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ಈ ಭಾಗದಲ್ಲಿ ಬೃಹತ್ ಹೋರಾಟ ಕೈಗೊಳ್ಳುವುದು. ಇದಕ್ಕೆ ಪೂರ್ವಭಾವಿಯಾಗಿ ಬೆಳಗಾವಿ ವಿಭಾಗ ವ್ಯಾಪ್ತಿಯ ಶಾಸಕರು, ಸಂಸದರ ಸಭೆ ಕರೆಯುವುದು.
ಕಾವೇರಿ ಹೋರಾಟದ ಮಾದರಿಯಲ್ಲಿ ಮಹದಾಯಿ ಹೋರಾಟ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಡಿ.23 ಅಥವಾ 29ರಂದು ಪ್ರಮುಖರ ನೇತೃತ್ವದಲ್ಲಿ ಸಂಚಾಲನ ಸಮಿತಿ ರಚಿಸುವ ಕುರಿತು ಚರ್ಚಿಸಲಾಯಿತು. ಎಲ್ಲ ಸಂಘಟನೆಗಳನ್ನು ಒಂದೇ ವೇದಿಕೆಯಡಿ ತಂದು ಒಬ್ಬರ ನಾಯಕತ್ವದಡಿ ಸಾಗುವಂತಾಗಬೇಕು. ಇನ್ನೆರಡು ದಿನಗಳಲ್ಲಿ ಸಮಿತಿ ಹಾಗೂ ಸಮಿತಿಗೆ ನಾಮಕರಣಕ್ಕೆ ನಿರ್ಣಯಿಸಲಾಯಿತು.
ಮಹದಾಯಿ ಕುರಿತ ಎಲ್ಲ ಹೋರಾಟಗಾರರು ಒಂದೇ ವೇದಿಕೆಗೆ ಬರುವ ವಿಶ್ವಾಸವಿದ್ದು, ನ್ಯಾಯಾಧಿಕರಣ ತೀರ್ಪಿನಂತೆ ಅಧಿಸೂಚನೆ ಹೊರಡಿಸಿ ಕಾಮಗಾರಿ ಪೂರ್ಣಗೊಳ್ಳವವರೆಗೂ ಈ ಹೋರಾಟ ನಿರಂತರವಾಗಿ ನಡೆಯಲಿದೆ. ಹೋರಾಟದಲ್ಲಿ ತೊಡಗಿರುವ ಪ್ರಮುಖರೊಬ್ಬರೂ ನೇತೃತ್ವ ವಹಿಸಿಕೊಳ್ಳಬೇಕು.
-ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.