ಮತ್ತೆ ಅಹೋರಾತ್ರಿ ಧರಣಿ
Team Udayavani, Dec 24, 2019, 10:25 AM IST
ಧಾರವಾಡ: ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ತಾತ್ಕಾಲಿಕವಾಗಿ ಹಿಂಪಡೆದಿದ್ದ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೋಮವಾರದಿಂದ ಮತ್ತೆ ಧರಣಿ ಆರಂಭಿಸಿದ್ದಾರೆ.
ಡಿ.17ರಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದ ಸದಸ್ಯರು ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಡಿ. 19ಕ್ಕೆ ತಾತ್ಕಾಲಿಕವಾಗಿ ಧರಣಿ ಅಂತ್ಯ ಮಾಡಿದ್ದರು. ಡಿ. 21ರಂದು ನಿಷೇಧಾಜ್ಞೆ ಅಂತ್ಯಗೊಂಡಿದ್ದು, ಇದಾದ ಬಳಿಕವೂ ಜಿಲ್ಲಾಡಳಿತ ಹಾಗೂ ಜಿಪಂ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ಲಭಿಸದ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹಾಗೂ ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಬಹುತೇಕ ಕಾಂಗ್ರೆಸ್ ಪಕ್ಷದ ಜಿಪಂ ಸದಸ್ಯರು ಮತ್ತೆ ಜಿಪಂ ಕಚೇರಿಯ ಪ್ರವೇಶ ದ್ವಾರದ ಬಳಿ ಧರಣಿ ಕೈಗೊಂಡಿದ್ದಾರೆ. ಬಿಜೆಪಿ ಸದಸ್ಯರೊಂದಿಗೆ ಕೆಲ ಕಾಂಗ್ರೆಸ್ ಸದಸ್ಯರೂ ಗೈರಾಗಿದ್ದು, ಆಡಳಿತಾರೂಡ ಪಕ್ಷಕ್ಕೆ ಇರಿಸು ಮುರಿಸು ಉಂಟಾಗಿದೆ.
ರೈತರಿಂದ ಮನವಿ: ಬೆಳಗ್ಗೆಯಿಂದ ಆರಂಭಿಸಿದ ಧರಣಿಗೆ ಕುಂದಗೋಳ ತಾಲೂಕಿನ ಯರೇಬೂದಿಹಾಳದ ಗ್ರಾಪಂ ವ್ಯಾಪ್ತಿಯ ರೈತರು ಬೆಂಬಲ ನೀಡಿದ್ದು, ಅಲ್ಲದೇ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಜಿಪಂ ಅಧ್ಯಕ್ಷರಿಗೆ ಮನವಿ ಕೂಡ ಸಲ್ಲಿಸಿದರು.
ಮಧ್ಯಾಹ್ನದ ಸ್ಥಳದಲ್ಲಿಯೇ ಊಟ ಮಾಡಿದ ಸದಸ್ಯರಿಗೆ ಧರಣಿ ಕೈಬಿಡುವಂತೆ ಜಿಪಂ ಸಿಇಒ ಡಾ| ಸತೀಶ ಮನವಿ ಮಾಡಿದರು. ಆದರೆ ನೆರೆ ಪರಿಹಾರ ಕಾಮಗಾರಿಯಲ್ಲಿ ಆಗಿರುವ ಅವಗಣನೆ ಸರಿಪಡಿಸಿ ನಮಗೆ ಆದ್ಯತೆ ನೀಡುವರೆಗೂ ಧರಣಿ ಕೈಬಿಡಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.