ಆರ್‌ಟಿಐ ಸೇವೆ ಆನ್‌ಲೈನ್‌ನಲ್ಲಿ ಲಭ್ಯ
Team Udayavani, Dec 25, 2019, 3:07 AM IST
ಬೆಂಗಳೂರು: ನಾಗರಿಕರಿಗೆ ನಿಗದಿತ ಅವಧಿಯಲ್ಲಿ ಸೇವೆ ದೊರೆಯುವಂತೆ ಮಾಡಲು ಸಕಾಲ ಸೇವೆಗಳನ್ನು ಆನ್‌ಲೈನ್‌ಗೊಳಿಸಿದ ಮಾದರಿಯಲ್ಲೇ ಮಾಹಿತಿ ಹಕ್ಕು ಅಧಿನಿಯಮದಡಿ (ಆರ್‌ಟಿಐ) ಬರುವ ಸೇವೆಗಳನ್ನು ಆನ್‌ಲೈನ್ ವ್ಯವಸ್ಥೆಗೆ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ, ಕಾರ್ಮಿಕ ಮತ್ತು ಸಕಾಲ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರಿಗೆ ಸಕಾಲ ಸೇವೆಗಳ ಕುರಿತ ಮಂಗಳವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಅನಗತ್ಯ ವಿಳಂಬ ಮಾಡುವುದನ್ನು ತಪ್ಪಿಸುವ ಸಲುವಾಗಿ ಸಕಾಲ ಸೇವೆಯನ್ನು ಆನ್‌ಲೈನ್ ಮಾಡಿರುವಂತೆಯೇ ಆರ್‌ಟಿಐ ಸೇವೆಯನ್ನು ಆನ್‌ಲೈನ್ ಮಾಡುವ ಹೊಸ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದರು.
ಬಿಬಿಎಂಪಿಯಲ್ಲಿ ಸಕಾಲ ವ್ಯಾಪ್ತಿಗೆ ಒಳಗಾದ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡದಿರುವ ಪ್ರಕರಣಗಳು ಹೆಚ್ಚುತ್ತಿರುವುದು ಕಂಡು ಬರುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕಾಲ ಸೇವೆಗೆ ಬೆಂಗಳೂರು ನಗರದ ಒಟ್ಟು ಜನಸಂಖ್ಯೆಯ ಶೇ.0.01ರಷ್ಟು ಜನರಿಂದಲೂ ಅರ್ಜಿಗಳು ಬರುವುದಿಲ್ಲ. ಬಂದಿರುವ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೇ ಹೋದರೆ ಇನ್ನು 1.40 ಕೋಟಿ ಜನರಿಗೆ ಮಾಡುವ ಎಲ್ಲ ಸೇವೆಗಳನ್ನು ಹೇಗೆ ನಿರ್ವಹಿಸಬಹುದಾಗಿದೆ ಎಂಬುದನ್ನು ಬಿಬಿಎಂಪಿ ಅಧಿಕಾರಿಗಳು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಸಚಿವರು ನಿರ್ದೇಶಿಸಿದರು.
ಸಕಾಲ ಸೇವೆ ಕುರಿತು ದೇಶದ ಎಲ್ಲ ರಾಜ್ಯಗಳು ಕರ್ನಾಟಕದತ್ತ ನೋಡುತ್ತಿವೆ. ನಮ್ಮ ಸಕಾಲ ಮಿಷನ್ ಯೋಜನೆ ಸೇವಾ ಪ್ರಕ್ರಿಯೆ ಕುರಿತು ಇಡೀ ದೇಶದಲ್ಲಿ ಉತ್ತಮ ಹೆಸರಿದೆ. ಆದರೆ ಅದನ್ನು ನಾವು ಇನ್ನೂ ಸಮರ್ಪಕವಾಗಿ ಕೆಲಸ ಮಾಡುವುದರಿಂದ ಜನರಿಗೆ ಹೆಚ್ಚಿನ ಸೇವೆ ಒದಗಲಿದೆ ಎಂದರು.
ಬಿಬಿಎಂಪಿಗೆ ಪ್ರತ್ಯೇಕ ಪ್ರಶಸ್ತಿ: ಸಕಾಲದಡಿ ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಿದ ಜಿಲ್ಲೆ ಮತ್ತು ತಾಲೂಕುಗಳಿಗೆ ರಾಜ್ಯಮಟ್ಟದಲ್ಲಿ ಪ್ರತಿ ತಿಂಗಳು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೆಯೇ ಇನ್ನು ಮುಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವ ಅಧಿಕಾರಿ ನಿಗದಿತ ಸಮಯದಲ್ಲಿ ಅರ್ಜಿ ವಿಲೇವಾರಿಯಲ್ಲಿ ಉತ್ತಮ ಸೇವೆ ತೋರುತ್ತಾರೋ ಅವರಿಗೆ ಈ ಪ್ರಶಸ್ತಿ ದೊರೆಯಲಿದೆ ಎಂದು ಸಚಿವರು ತಿಳಿಸಿದರು. ಬಿಬಿಎಂಪಿ ಅಪರ ಆಯುಕ್ತ ಅನುಕುಮಾರ್, ಸಕಾಲ ಅಪರ ಮಿಷನ್ ನಿರ್ದೇಶಕ ಸುನಿಲ್ ಪವಾರ್, ಸಕಾಲ ಅಪರ ಮಿಷನ್ ನಿರ್ದೇಶಕ ಬಿ.ಎನ್. ವರಪ್ರಸಾದ ರೆಡ್ಡಿ ಉಪಸ್ಥಿತರಿದ್ದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಕಾಲ ಸೇವೆಗಳು ಶೇ.100ರಷ್ಟು ಪರಿಣಾಮ ಕಾರಿಯಾಗಿ ದೊರೆಯ ಬೇಕು. ಸಕಾಲ ವ್ಯಾಪ್ತಿಯ ಇನ್ನೊಂದು ಸೇವೆಯಾದ ಜನಸೇವಕ ಯೋಜನೆ ಪ್ರಸ್ತುತ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಯಶಸ್ವಿಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯ ಇನ್ನೂ 3 ವಿಧಾನಸಭಾ ಕ್ಷೇತ್ರಗಳಲ್ಲಿ ಜಾರಿಗೊಳಿ ಸಲಾಗುವುದು.
-ಎಸ್.ಸುರೇಶ್ ಕುಮಾರ್, ಸಕಾಲ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.