ನಿಮ್ಮ ವಾಹನ ಫ್ಯಾನ್ಸಿ ನಂಬರ್ ಪ್ಲೇಟ್ ಹೊಂದಿದೆಯೇ? ಹಾಗಾದರೆ ಇದನ್ನು ಓದಿ

ನೂತನ ಕೇಂದ್ರ ಮೋಟಾರು ವಾಹನಗಳ ನಿಯಮಾನುಸಾರ ಫ್ಯಾನ್ಸಿ ನಂಬರ್‌ ಪ್ಲೇಟ್‌ ಅಲವಡಿಸಿದ್ದರೆ ದಂಡ

Team Udayavani, Dec 24, 2019, 11:27 PM IST

Fancy-Number-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೆಲ ತಿಂಗಳುಗಳ ಹಿಂದೆಯಷ್ಟೇ ಪರಿಷ್ಕೃತ ಮೋಟಾರು ವಾಹನ ನಿಯಮ ಜಾರಿ ಮಾಡಿದ್ದ ಕೇಂದ್ರ ಸರಕಾರ ಇದೀಗ ಮತ್ತೊಂದು ನೂತನ ನಿಯಮ ಜಾರಿ ಮಾಡಿದೆ. ಈ ನಿಯಮಗಳ ಅನುಸಾರ ವಾಹನಗಳಲ್ಲಿ ಫ್ಯಾನ್ಸಿ ನಂಬರ್‌ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ಅವಕಾಶ ಇಲ್ಲ.

ತಮ್ಮ ವಾಹನಗಳಲ್ಲಿ ಫ್ಯಾನ್ಸಿ ನಂಬರ್‌ ಪ್ಲೇಟ್ ಗಳನ್ನು ಹಾಕಿಕೊಂಡಿರುವವರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ಆರ್.ಟಿ.ಒ. ನಿಯಮಗಳಿಗೆ ವಿರುದ್ಧವಾಗಿರುವ ಈ ರೀತಿಯ ಫ್ಯಾನ್ಸಿ ನಂಬರ್ ಪ್ಲೇಟ್ ಗಳ ತೆರವು ಕಾರ್ಯಾಚರಣೆಯನ್ನು ಡಿ. 27ರಿಂದ ತೀವ್ರಗೊಳಿಸಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿನ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಯಮಗಳ ಪ್ರಕಾರವೇ ನೋಂದಣಿ ಫ‌ಲಕಗಳಲ್ಲಿ ನಿಗದಿತ ಅಳತೆಯ ಅಕ್ಷರಗಳು ಮತ್ತು ಅಂಕಿಗಳನ್ನು ಬರೆಸುವುದು ಕಡ್ಡಾಯವಾಗಿದೆ. ಆದರೆ, ಕೆಲವರು ನಂಬರ್‌ ಪ್ಲೇಟ್‌ಗಳಲ್ಲಿ  ಮನಸೋ ಇಚ್ಛೆ ಸಂಘ-ಸಂಸ್ಥೆಗಳ ಹೆಸರು, ಲಾಂಛನ, ಚಿಹ್ನೆಗಳನ್ನು ಹಾಕಿಕೊಂಡು ನಿಯಮ ಉಲ್ಲಂಘಿಸುತ್ತಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ದೂರುಗಳಿವೆ. ಅನಧಿಕೃತ ನಂಬರ್‌ ಪ್ಲೇಟ್‌ಗಳ ತೆರವು ಕಾರ್ಯಾಚರಣೆಗೆ ಹೈಕೋರ್ಟ್‌ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.” ಎಂದು ಅವರು ಹೇಳಿದರು.

‘ಕೆಲ ವಾಹನ ಮಾಲಕರು ಅನುಮತಿ ಪಡೆಯದೆಯೇ ನಂಬರ್‌ ಪ್ಲೇಟ್‌ಗಳಲ್ಲಿ ಸರಕಾರಿ ಲಾಂಛನ ಬಳಸುತ್ತಿರುವುದು ಕಂಡು ಬಂದಿದೆ. ಸರಕಾರದ ಲಾಂಛನ ಅಳವಡಿಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕಿದೆ. ಕೆಲ ಸರಕಾರಿ ವಾಹನಗಳು ಮತ್ತು ಅತಿ ಗಣ್ಯರ ವಾಹನಗಳ ನಂಬರ್‌ ಪ್ಲೇಟ್‌ಗಳಲ್ಲಿ ಪದನಾಮ, ಲಾಂಛನ ಬಳಸಲು ಅನುಮತಿ ಇದೆ,” ಎಂದು ತಿಳಿಸಿದರು.

‘’ಹಲವು ವಾಹನ ಮಾಲೀಕರು ನೋಂದಣಿ ಸಂಖ್ಯೆಗಳನ್ನು ನಿಯಮಾನುಸಾರ ಅಳವಡಿಸಿಕೊಳ್ಳದೇ, ಕೆ.ಎ. ಬದಲು ಕರ್ನಾಟಕ, ಆಲಂಕಾರಿಕ ಅಕ್ಷರಗಳನ್ನು ನಾನಾ ಬಣ್ಣ, ಶೈಲಿಯಲ್ಲಿ ಬರೆಸುವುದು, ಚಿತ್ರಗಳನ್ನು ಅಂಟಿಸುವುದು, ಫ‌ಲಕಗಳ ಮೇಲೆ ಮತ್ತು ಕೆಳಗೆ ಹಸಿರು, ಕೆಂಪು ಪಟ್ಟಿಯನ್ನು ಹಾಕಿಸುವ ಮೂಲಕ ನಿಯಮ ಉಲ್ಲಂಘಿಸಲಾಗುತ್ತಿದೆ.

ಇಂಥ ವಾಹನಗಳ ಫ‌ಲಕಗಳ ತೆರವಿಗೆ ವಿಶೇಷ ತಂಡಗಳನ್ನು ರಚಿಸಲಾಗುತ್ತಿದೆ. ವಾಹನಗಳ ಗಾಜು ಮತ್ತು ಕವಚದ ಮೇಲೆಯೂ ಸಂಘ-ಸಂಸ್ಥೆಗಳ ಹೆಸರು, ಪದನಾಮ ಬರೆಸಿಕೊಳ್ಳುವುದು ಜಾಹೀರಾತು ಎನಿಸಿಕೊಳ್ಳುತ್ತದೆ. ಈ ರೀತಿ ಪ್ರದರ್ಶನಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.” ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.