ಸಿಎಎ-ಎನ್‌ಆರ್‌ಸಿ ವಿರುದ್ಧ ಗುಟುರು
Team Udayavani, Dec 25, 2019, 10:33 AM IST
ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ವಿರೋಧಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಪ್ರತಿಭಟನಾ ಮೆರವಣಿಗೆ ಹಾಗೂ ಬಹಿರಂಗ ಸಮಾವೇಶ ಮಂಗಳವಾರ ನಡೆಯಿತು.
ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಮುಂಭಾಗದಿಂದ ನೆಹರು ಮೈದಾನದವರೆಗೆ ನಡೆಯಿತು. ಇದಕ್ಕೂ ಮೊದಲು ಡಾ| ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಗರದ 135 ಮೊಹಲ್ಲಾಗಳಿಂದ ಪ್ರತ್ಯೇಕ ಮೆರವಣಿಗೆಗಳಲ್ಲಿ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಪ್ರತಿಭಟನಾಕಾರರು ಅಲ್ಲಿಂದ ನೆಹರು ಮೈದಾನಕ್ಕೆ ಆಗಮಿಸಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರ ಉದ್ದೇಶಪೂರ್ವಕವಾಗಿ ಮುಸ್ಲಿಂ ಜನಾಂಗವನ್ನು ಗುರಿಯಾಗಿಸಿಕೊಂಡು ಕಾಯ್ದೆ ಜಾರಿ ಮಾಡಿದೆ. ಕೂಡಲೇ ಸಿಎಎ ಹಾಗೂ ಎನ್‌ಆರ್‌ಸಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ನೆಹರು ಮೈದಾನದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಧರ್ಮಗುರು ತಾಜುದ್ದಿನ್ ಖಾದ್ರಿ ಮಾತನಾಡಿ, ನಮ್ಮ ಅಸ್ತಿತ್ವಕ್ಕಾಗಿ ಹಾಗೂ ಮುಂದಿನ ಜನಾಂಗದ ಭವಿಷ್ಯಕ್ಕಾಗಿ ಈ ಹೋರಾಟ ಮಾಡಬೇಕಾಗಿದೆ.
ಇಂತಹ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. ಕಾಂಗ್ರೆಸ್, ಜೆಡಿಎಸ್, ದಲಿತ ಸಂಘಟನೆಗಳು, ಸಿಐಟಿಯು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದವು. ಶಾಸಕಿ ಕುಸುಮಾವತಿ ಶಿವಳ್ಳಿ, ಮಾಜಿ ಸಂಸದ ಪ್ರೊ| ಐ.ಜಿ. ಸನದಿ, ಅಬ್ದುಲ್ ಹಮೀದ್ ಖೈರಾತಿ, ಅಲ್ತಾಫ್ ಹಳ್ಳೂರು, ಸದಾನಂದ ಡಂಗನವರ, ಅಲ್ತಾಫ್ ಕಿತ್ತೂರ, ಅನೀಲಕುಮಾರ ಪಾಟೀಲ, ಪಿತಾಂಬ್ರಪ್ಪ ಬಿಳಾರ, ಗುರುನಾಥ ಉಳ್ಳಿಕಾಶಿ, ಅನ್ವರ್ ಮುಧೋಳ, ಬಾಬಾಜಾನ ಮುಧೋಳ, ಅಸ್ಪಾಕ್ ಕುಮಟಾಕರ ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದರು. ನಂತರ ವೇದಿಕೆಗೆ ಆಗಮಿಸಿದ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.