ಜೋಳಕ್ಕೆ ಮಿಡತೆ ಕಾಟ

ಸುಳಿ ರೋಗದಿಂದ ಹಾಳಾಗುತ್ತಿದೆ ಜೋಳ ಎಳ್ಳಮಾವಾಸ್ಯೆಗೆ ಚರಗ ಚೆಲ್ಲಲು ಸಮಸ್ಯೆ

Team Udayavani, Dec 25, 2019, 10:55 AM IST

25-December-2

ಅಫಜಲಪುರ: ಚಿಂಚೋಳಿ ಗ್ರಾಮದ ರೈತರೊಬ್ಬರ ಹೊಲದಲ್ಲಿ ಜೋಳದ ಬೆಳೆಗೆ ಮಿಡತೆ ಹಾರಿ ಎಲೆಗಳು ತೂತಾಗಿವೆ

ಮಲ್ಲಿಕಾರ್ಜುನ ಹಿರೇಮಠ

ಅಫಜಲಪುರ: ಹಿಂಗಾರು ಹಂಗಾಮಿನ ಬೆಳೆಗಳಲ್ಲಿ ಪ್ರಮುಖವಾದ ಜೋಳದ ಬೆಳೆಗೆ ಮಿಡತೆ ಕಾಟ ಶುರುವಾಗಿದ್ದು, ಜೋಳದ ಎಲೆಗಳಿಗೆಲ್ಲ ತೂತು ಬೀಳುತ್ತಿವೆ. ಇದರಿಂದ ಬೆಳೆ ಹಾಳಾಗುತ್ತಿದೆ. ತಾಲೂಕಿನಾದ್ಯಂತ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಜೋಳಕ್ಕೆ ಸದ್ಯ ಮಿಡತೆ ಕಾಟ ಕಾಡುತ್ತಿದೆ. ಫಲವತ್ತಾಗಿ ಬೆಳೆದ ಜೋಳಕ್ಕೆ ಮಿಡತೆ ಕಾಟದಿಂದ ದಂಟುಗಳು, ಎಲೆಗಳಿಗೆಲ್ಲ ತೂತುಗಳು ಬೀಳುತ್ತಿವೆ. ಇದರಿಂದ ರೈತರಿಗೆ ಚಿಂತೆ ಶುರುವಾಗಿದೆ.

ಸುಳಿ ರೋಗ: ಜೋಳದ ಬೆಳೆ ಸದ್ಯ ಅನೇಕ ಕಡೆ ತೆನೆ ಕಟ್ಟುವ ಹಂತಕ್ಕೆ ಬಂದಿದೆ. ಆದರೆ ಬಹುತೇಕ ಕಡೆ ಮೊಳಕಾಲುದ್ದ ಬೆಳೆದಿದೆ. ಫಲವತ್ತಾಗಿ ಬೆಳೆಯುತ್ತಿದ್ದ ಜೋಳ ಒಂದು ಕಡೆ ಮಿಡತೆ ಕಾಟದಿಂದ ಹಾಳಾಗುತ್ತಿದ್ದರೆ, ಇನ್ನೊಂದು ಕಡೆ ಸುಳಿ ರೋಗ ಬಾಧಿಸಿ ಇನ್ನಷ್ಟು ಬೆಳವಣಿಗೆ ಕುಂಠಿತವಾಗಿಸಿದೆ.

ಆತಂಕ: ಮುಂಗಾರು ಹಂಗಾಮಿನ ಬೆಳೆಗಳು ಸರಿಯಾಗಿ ಬರಲಿಲ್ಲ. ಇನ್ನೇನು ಊಟಕ್ಕೆ ಜೋಳ, ದನಕರುಗಳಿಗೆ ಮೇವಾಗುತ್ತದೆ ಎನ್ನುವ ಉದ್ದೇಶದಿಂದ ಜೋಳ ಬಿತ್ತನೆ ಮಾಡಿದ ರೈತರಿಗೆ ಮಿಡತೆ ಕಾಟ, ಸುಳಿ ರೋಗ ಆತಂಕ ಉಂಟಾಗುವಂತೆ ಮಾಡಿದೆ.

ನೀರಾವರಿ ಬೇಸಾಯ ಮಾಡುವ ರೈತರಿಗೆ ಜೋಳದ ಬೆಳೆ ಉತ್ತಮವಾಗಿದೆ. ನೀರಾವರಿ ಇಲ್ಲದೇ ಒಣ ಬೇಸಾಯ ಮಾಡುವ ರೈತರಿಗೆ ಬಹಳಷ್ಟು ಹಿನ್ನಡೆಯಾಗುತ್ತಿದೆ.

ಚರಗ ಚೆಲ್ಲಲು ಜೋಳದ ಸಮಸ್ಯೆ: ಪ್ರತಿ ವರ್ಷ ಎಳ್ಳಮವಾಸ್ಯೆ ಪ್ರಯುಕ್ತ ರೈತ ಬಾಂಧವರೆಲ್ಲ ಬಗೆಬಗೆಯ ಅಡುಗೆ ಮಾಡಿಕೊಂಡು ಮನೆ ಮಂದಿಯೆಲ್ಲ ಜೋಳ ಬಿತ್ತಿದ ಹೊಲಕ್ಕೆ ಹೋಗಿ ಭೂತಾಯಿಗೆ ಚರಗ ಚೆಲ್ಲುವ ಪದ್ಧತಿ ಇದೆ. ಆದರೆ ಈ ಬಾರಿ ಒಣ ಬೇಸಾಯ ಮಾಡುವ ರೈತರ ಜಮೀನುಗಳಲ್ಲಿ ಜೋಳದ ಬೆಳೆ ಗುಣಮಟ್ಟದಲ್ಲಿ ಬೆಳವಣಿಗೆ ಆಗುತ್ತಿಲ್ಲ. ಹೀಗಾಗಿ ಎಳ್ಳಮವಾಸ್ಯೆಗೆ ಚರಗ ಚಲ್ಲಲು ಜೋಳ ಇಲ್ಲದಂತಾಗಿದೆ. ಒಟ್ಟಿನಲ್ಲಿ ಜೋಳಕ್ಕೆ ರೋಗ ಬಾಧೆ ಕಾಡುತ್ತಿದ್ದರೆ, ರೈತರಲ್ಲಿ ಹಬ್ಬದ ಕಳೆ ಇಲ್ಲದಂತಾಗಿಸಿದೆ.

ಚರಗ ಚೆಲ್ಲಾಕ್‌ ಜ್ವಾಳ ಇಲ್ಲದಂಗ ಆಗ್ಯಾದ್ರಿ. ಮೊಳಕಾಳುದ್ದ ಬೆಳೆದ ಜ್ವಾಳಕ್‌ ಮಿಡತಿ ಹಾರಿ ಅರ್ಧ ಹಾಳಾಗ್ಯಾವ. ಇನ್ನರ್ಧ ಸುಳಿ ರೋಗ ಬಿದ್ದು ಹಾಳಾಗ್ಯಾವ. ಹೊಟ್ಟಿಗಿ ಗಂಜಿ ಆಗ್ತದ, ದನಕರಗೊಳಿಗೆ ಮೇವಾಗ್ತದ ಅನ್ಕೊಂಡಿದ್ದೆವು. ಈಗ ಎರಡು ಆಗಂಗ ಕಾಣವಲ್ದು.
ಚಾಂದಸಾಬ ನಾಕೇದಾರ,
ರೈತ, ಬಳೂರ್ಗಿ

ತಾಲೂಕಿನಾದ್ಯಂತ 2019ನೇ ಸಾಲಿನಲ್ಲಿ 11580 ಹೆಕ್ಟೇರ್‌ ಜೋಳ ಬಿತ್ತನೆಯಾಗಿದೆ. ಕಳೆದ ವರ್ಷ 23 ಸಾವಿರ ಹೆಕ್ಟೇರ್‌ ಬಿತ್ತನೆಯಾಗಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ ಜೋಳ ಬಿತ್ತನೆ ಕಡಿಮೆಯಾಗಲು ಕಾರಣ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹತ್ತಿ, ತೊಗರಿ ಬಿತ್ತನೆ ಕ್ಷೇತ್ರ 80ರಿಂದ 90 ಪ್ರತಿಶತ ಹೆಚ್ಚಳವಾಗಿದೆ. ಹೀಗಾಗಿ ಜೋಳ ಬಿತ್ತನೆ ಈ ವರ್ಷ ಕಮ್ಮಿಯಾಗಿದೆ. ತಡವಾಗಿ ಬಿತ್ತನೆ ಆಗಿದ್ದರಿಂದ ಬೆಳವಣಿಗೆಗೆ ಹಿನ್ನಡೆಯಾಗಿದೆ. ಮಿಡತೆ ಕಾಟದಿಂದ ಜೋಳಕ್ಕೆ ಯಾವ ಹಾನಿಯೂ ಇಲ್ಲ. ಆದರೆ ಜೋಳಕ್ಕೆ ಸುಳಿ ರೋಗ ಬಿದ್ದರೆ ಅದಕ್ಕೆ ಔಷಧ ಸಿಂಪಡಿಸಿ ನಿಯಂತ್ರಣಕ್ಕೆ ತರಬೇಕು.
ಸರ್ದಾರಭಾಷಾ ನದಾಫ್‌,
ತಾಂತ್ರಿಕ ಅಧಿಕಾರಿ, ಕೃಷಿ ಇಲಾಖೆ

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.