12ರಿಂದ ರಾಯಣ್ಣ ಉತ್ಸವ
Team Udayavani, Dec 25, 2019, 12:10 PM IST
ಬೈಲಹೊಂಗಲ: ಜ.12, 13 ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ಅದ್ಧೂರಿಯಿಂದ ಆಚರಿಸಲಾಗುವುದು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಮಂಗಳವಾರ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ಉತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವತಿಯಿಂದ ಜರುಗಿದ ಪೂರ್ವಭಾವಿ ಸಭೆಯಲ್ಲಿ ಯನ್ನುದ್ದೇಶಿಸಿ ಮಾತನಾಡಿ, ಉತ್ಸವವನ್ನು ಅದ್ದೂರಿಯಾಗಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೆಚ್ಚಿನ ಅನುದಾನ ನೀಡಲು ಒತ್ತಾಯಿಸಲಾಗುವುದು ಎಂದರು.
ಈಗಾಗಲೇ 20 ಲಕ್ಷ ರೂ ಬಿಡುಗಡೆಯಾಗಿದೆ. ಇನ್ನೂ 10 ಲಕ್ಷ ರೂ. ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು. ಕಾರ್ಯಕ್ರಮಕ್ಕೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ, ಸಚಿವರು, ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.
ಉತ್ಸವದ ಕಾರ್ಯಕ್ರಮಗಳಲ್ಲಿ ಮ್ಯಾಜಿಕ ಹಾಗೂ ಗ್ರಾಮೀಣ ಕಲೆಗೆ ಹೆಚ್ಚಿನ ಒತ್ತು ನೀಡಿ, ಕಲಾ ವಾಹಿನಿ ತಂಡಗಳ, ಸಾಂಸ್ಕೃತಿಕ ಕಾರ್ಯಕ್ರಮ, ವಾಲಿಬಾಲ್, ಕುಸ್ತಿ, ಕಬಡ್ಡಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗುವುದು. ಗ್ರಾಮಸ್ಥರು ಗ್ರಾಮವನ್ನು ನಿರಂತರವಾಗಿ ಸ್ವತ್ಛವಾಗಿಟ್ಟುಕೊಳ್ಳಬೇಕು ಎಂದರು.
ಮುಂಬರುವ ದಿನಗಳಲ್ಲಿ ಗ್ರಾಮದ ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಇನ್ನೀತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ಗ್ರಾಪಂ ಕ್ರಮ ಕೈಗೊಳ್ಳಬೇಕು. ಉತ್ಸವಕ್ಕೆ ಗ್ರಾಮಸ್ಥರು ಹೆಚ್ಚಿನ ಸಹಕಾರ ನೀಡಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ವಿನಂತಿಸಿಕೊಂಡರು.
ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಉತ್ಸವದ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಲು ಉಪ ಸಮಿತಿ ರಚಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಹೆಸರು ನೋಂದಾಯಿಸಬೇಕು. ಉತ್ಸವದ ನಿಮಿತ್ತ ಗ್ರಾಮಸ್ಥರು ತಳಿರು ತೊರಣಗಳಿಂದ ಗ್ರಾಮವನ್ನು ಶೃಂಗರಿಸಬೇಕು ಎಂದರು. ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಸ್ಥಳೀಯ, ತಾಲೂಕಿನ ಯೋಧರನ್ನು ಗೌರವಿಸಬೇಕು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಬೇಕು. ಉತ್ಸವದ ದಿನಗಳಲ್ಲಿ ಗ್ರಾಮಕ್ಕೆ ಹೆಚ್ಚಿನ ಬಸ್ ಸೌಕರ್ಯ ನೀಡಬೇಕು. ರಾಯಣ್ಣ ಅಭಿಮಾನಿಗಳನ್ನು ಗುರುತಿಸಿ ಸನ್ಮಾನಿಸಬೇಕು. ಕಲಾವಿದರಿಗೆ ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಬೇಕು. ಹಿಂದಿನ ವರ್ಷ ಉತ್ಸವಕ್ಕೆ ಪೆಂಡಾಲ್, ಇತರ ವ್ಯವಸ್ಥೆ ಕಲ್ಪಿಸಿದವರ ಬಾಕಿ ಹಣ ಸಂದಾಯ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.
ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ, ಜಿಪಂ ಸದಸ್ಯ ಅನಿಲ ಮೆಕಲಮರ್ಡಿ, ಸದಸ್ಯ ಗೌಸಸಾಬ ಬುಡ್ಡೆಮುಲ್ಲಾ, ಇಒ ಸಮೀರ ಮುಲ್ಲಾ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಹಳೆಮನಿ, ಉಪಾಧ್ಯಕ್ಷ ಬಸವರಾಜ ಕೊಡ್ಲಿ, ಅರುಣ ಯಲಿಗಾರ, ಬಸವರಾಜ ಡೊಳ್ಳಿನ, ಸುನೀಲ ಕುಲಕರ್ಣಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.