ಪೌರತ್ವ ವಿರೋಧಿ ಪ್ರತಿಭಟನೆಯಲ್ಲಿ ಮೊಳಗಿದ ರಾಷ್ಟ್ರಗೀತೆ


Team Udayavani, Dec 25, 2019, 12:17 PM IST

BG-TDY-3

ಬೈಲಹೊಂಗಲ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ಬಾಂಧವರು ರಾಷ್ಟ್ರಗೀತೆ ಹಾಡಿ, ಭಾರತ ಮಾತಾಕೀ ಜೈ, ಒಂದೇ ಮಾತರಂ ಘೋಷಣೆ ಮೊಳಗಿಸಿ, ಹಿಂದೂ-ಮುಸ್ಲಿಂ ಬಾಂಧವರೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು ಎಂಬ ಸಂದೇಶ ಸಾರಿದರು.

ಪಟ್ಟಣದ ಅಂಬೇಡ್ಕರ್‌ ಉದ್ಯಾನ ಎದುರು ವೇದಿಕೆ ಹಾಕಿ ಪ್ರತಿಭಟನೆಗಿಳಿದಿದ್ದ ಅಪಾರ ಸಂಖ್ಯೆಯ ಮುಸ್ಲಿಮರು ದೇಶದಲ್ಲಿ ಏನು ಆಗುತ್ತದೆಯೋ, ಬಿಡುತ್ತದೆಯೋ ಗೊತ್ತಿಲ್ಲ. ಆದರೆ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರಕೇಸರಿ ಅಮಟೂರು ಬಾಳಪ್ಪನ ಪುಣ್ಯ ಭೂಮಿಯಾದ ಬೈಲಹೊಂಗಲ ನಾಡಿನಲ್ಲಿ ಯಾರೂ ಯಾವುದೇ ಕಾರಣಕ್ಕೂ ಜಾತೀಯತೆ, ಧರ್ಮಾಂಧತೆಗೆ ಸಿಲುಕಿ ಕೋಮು ಸೌಹಾರ್ದತೆಗೆ ಧಕ್ಕೆ ಆಗದಂತೆ ಜಾಗೃತರಾಗಿರೋಣವೆಂದು ಶಪಥ ಮಾಡಿದರು.

ಮುಸ್ಲಿಂ ಸಮಾಜದ ಹಿರಿಯ ವಕೀಲ ಝಡ್‌.ಎ. ಗೋಕಾಕ ಮಾತನಾಡಿ, ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಕೊಟ್ಟಿದೆ. ಅದರ ಸದ್ಬಳಕೆ ಅಗತ್ಯವಿದೆ. ಅದನ್ನು ಯಾವುದೇ ಕಾರಣಕ್ಕೂ ದುರ್ಬಳಕೆ ಮಾಡಿಕೊಳ್ಳಬಾರದು. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಆಗುವ ಲಾಭ, ಹಾನಿ ಬಗ್ಗೆ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು. ಧರ್ಮಗುರು ಶೌಕತ್‌ಅಲಿ ಭಾದಿ ಮಾತನಾಡಿ, ಭಾರತ ದೇಶ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಭಾರತಕ್ಕೆ ಆಪತ್ತು ಬಂದಾಗ ಭಾರತೀಯ ಪುಣ್ಯ ನೆಲದ ಹಿಂದೂ, ಮುಸ್ಲಿಂ ಬಾಂಧವರು ಸೇರಿ ದೇಶದ ರಕ್ಷಣೆಗೆ ಕಂಕಣ ಬದ್ಧರಾಗಿರಬೇಕು. ಪ್ರಾಣ ಹೋದರೂ ಭಾರತಾಂಬೆ ರಕ್ಷಣೆಗೆ ಬದ್ಧರಾಗಿರಬೇಕು ಎಂದರು.

ಶಾಸಕ ಮಹಾಂತೇಶ ಕೌಜಲಗಿ, ಜಿಪಂ ಸದಸ್ಯ ಶಂಕರ ಮಾಡಲಗಿ, ರಫೀಕ್‌ ಬಡೇಘರ ಮಾತನಾಡಿದರು. ಮುಸ್ಲಿಂ ಸಮಾಜದ ಮುಖಂಡರಾದ ಡಾ. ಐಜಾಜ್‌ ಬಾಗೇವಾಡಿ, ನಿಸ್ಸಾರಅಹ್ಮದ ತಿಗಡಿ, ಮಹ್ಮದ ರಫೀಕ ನಾಯ್ಕ, ಆಲಮ್‌ ಖಾರೆಖಾಜಿ, ಅಬ್ದುಲ್‌ ರಹಿಮ್‌ ಹುಬ್ಬಳ್ಳಿ, ದಾವುಲಸಾಬ ಕಂದಗೋಳಿ, ಜಿ.ಡಿ. ಬಾಗವಾನ, ಜಿಪಂ ಸದಸ್ಯ ಅನಿಲ ಮ್ಯಾಕಲಮರ್ಡಿ, ಶರೀಫ ಮೊಖಾಶಿ, ಬಾಬು ಸುತಗಟ್ಟಿ, ಫಾರುಖ್‌ ತಿಗಡಿ, ಅಲಲಾ ಯುವಕ ಸಂಘ ಪದಾ ಧಿಕಾರಿಗಳು ಇದ್ದರು. ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮೂಲಕ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು.

ಡಿವೈಎಸ್ಪಿ ಜೆ.ಎಂ. ಕರುಣಾಕರಶೆಟ್ಟಿ ನೇತೃತ್ವದಲ್ಲಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.