ನೀರಾವರಿ ಕಚೇರಿಗಳಿಗೆ ಬೀಗ


Team Udayavani, Dec 25, 2019, 12:57 PM IST

gadaga-tdy-3

ನರಗುಂದ: ಪ್ರತಿವರ್ಷ ತೊಂದರೆ ಎದುರಿಸುವ ಜೊತೆಗೆ ಪ್ರಸಕ್ತ ಸಾಲಿನಲ್ಲೂ ಮಲಪ್ರಭಾ ಕಾಲುವೆಯಿಂದ ಒಂದು ಬಾರಿಯೂ ನೀರು ಬಾರದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶಗೊಂಡ ತಾಲೂಕಿನ ಹದಲಿ ಗ್ರಾಮದ ರೈತರು ಪಟ್ಟಣದ ವಿಭಾಗೀಯ ಕಚೇರಿ ಸೇರಿದಂತೆ ನೀರಾವರಿ ನಿಗಮದ ಎಲ್ಲ ಕಚೇರಿಗಳಿಗೆ ಬೀಗ ಜಡಿದು ಪ್ರತಿಭಟಿಸಿದರು.

ಮಂಗಳವಾರ ಟ್ರ್ಯಾಕ್ಟರ್‌ನಲ್ಲಿ ಪಟ್ಟಣಕ್ಕಾಗಮಿಸಿದ ರೈತರು ನೀರಾವರಿ ಕಚೇರಿಗೆ ತೆರಳಿದರು. ಯಾವ ಕಚೇರಿಯಲ್ಲೂ ಹಿರಿಯ ಅಧಿಕಾರಿಗಳ ಅನುಪಸ್ಥಿತಿಗೆ ಆಕ್ರೋಶಗೊಂಡ ರೈತರು ವಿಭಾಗೀಯ ಕಚೇರಿ ಹಾಗೂ 1 ಮತ್ತು 2ನೇ ಉಪವಿಭಾಗ ಕಚೇರಿಗಳಲ್ಲಿನ ಅಧಿಕಾರಿಗಳು, ಸಿಬ್ಬಂದಿಯನ್ನು ಹೊರಹಾಕಿ ಎಲ್ಲ ಕಚೇರಿಗಳಿಗೆ ಬೀಗ ಜಡಿದು ವಿಭಾಗೀಯ ಕಚೇರಿ ಎದುರು ಧರಣಿ ನಡೆಸಿದರು.

ನೀರು ಬಾರದ ಕಾಲುವೆ: ಮಲಪ್ರಭಾ ನರಗುಂದ ಶಾಖಾ ಕಾಲುವೆ 14ನೇ ಮುಖ್ಯ ಹಂಚಿಕೆ ಹದಲಿ ಗ್ರಾಮದ ನೂರಾರು ಎಕರೆ ಕೃಷಿಗೆ ನೀರುಣಿಸಬೇಕು. ಪ್ರಸಕ್ತ ಸಾಲಿನಲ್ಲಿ ಒಮ್ಮೆಯೂ ಕಾಲುವೆಗೆ ನೀರು ಬಾರದೇ ತಮ್ಮ ಬೆಳೆಗಳು ಒಣಗುತ್ತಿವೆ. ನೀರಾವರಿ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಹಿರಿಯ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದರೂ ನಮ್ಮ ಕಾಲುವೆಗೆ ನೀರು ಹರಿಸಿಲ್ಲ ಎಂದು ಧರಣಿ ನಿರತರು ಆರೋಪಿಸಿದರು. ಜಾಕವೆಲ್‌ ಬಂದ್‌: ಗಂಗಾಪುರ ಗ್ರಾಮದ ಏತ ನೀರಾವರಿ ಯೋಜನೆಯಿಂದ ಹದಲಿ, ಖಾನಾಪುರ, ಗಂಗಾಪುರ, ಸುರಕೋಡ, ರಡ್ಡೇರನಾಗನೂರ ಗ್ರಾಮಗಳ ನೂರಾರು ಎಕರೆ ಕೃಷಿಗೆ ನೀರು ದೊರಕಬೇಕು. ಆದರೆ ಪ್ರಸಕ್ತ ಸಾಲಿನಲ್ಲಿ ಜಾಕವೆಲ್‌ ಕೂಡ ಪ್ರಾರಂಭ ಮಾಡಿಲ್ಲ. ಹೀಗಾಗಿ ಜಾಕವೆಲ್‌ ನೀರೂ ಸಿಗಲಿಲ್ಲ. ಕಾಲುವೆಗೂ ನೀರು ಬರಲಿಲ್ಲ. ಹೀಗಾದರೆ ನಮ್ಮ ಬೆಳೆಗಳ ಗತಿಯೇನು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿವರ್ಷ ಈ ತಾಪತ್ರಯದಿಂದ ಮುಕ್ತಿ ಸಿಕ್ಕಿಲ್ಲ. ನೀರಾವರಿ ಅಧಿಕಾರಿಗಳ ನಿರ್ಲಕ್ಷ ದಿಂದ ಸಾವಿರಾರು ರೂಪಾಯಿ ಖರ್ಚು ಮಾಡಿದ ಕಡಲೆ, ಗೋಧಿ, ಹತ್ತಿ, ಸೂರ್ಯಕಾಂತಿ, ಬಿಳಿ ಕುಸುಬಿ, ಜೋಳ ಬೆಳೆಗಳು ಒಣಗಿ ನಿಲ್ಲುವ ಹಂತಕ್ಕೆ ಬಂದಿವೆ. ಆದ್ದರಿಂದ ಧಾರವಾಡ ನೀರಾವರಿ ನಿಗಮದ ಮುಖ್ಯ ಅಭಿಯಂತರು ಸ್ಥಳಕ್ಕೆ ಬರುವವರೆಗೂ ನಾವು ಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಹದಲಿ ಗ್ರಾಮದ ಬಿ.ಜಿ.ಸುಂಕದ, ಭೀಮಪ್ಪ ಹಾದಿಮನಿ, ಮಲಿಕಾಜಗೌಡ ಕುದರಿ, ಯಲ್ಲಪ್ಪಗೌಡ ಬನಹಟ್ಟಿ, ಗಂಗಾಧರ ಹಲಗತ್ತಿ, ಪ್ರಭು ಕಂಠೆಣ್ಣವರ, ಸಂಗಪ್ಪ ಸಣಕಲ್ಲ, ಬಸವರಾಜ ಬಾಣದ, ಸುರೇಶ ತಳವಾರ, ನಿಂಗಪ್ಪ ಕುಂಬಾರ, ಮಲ್ಲಪ್ಪ ಚಲವಾದಿ, ಗದಿಗೆಯ್ಯ ಹಿರೇಮಠ, ಮುತ್ತಪ್ಪ ಪರಣ್ಣವರ, ಹನಮಂತ ಕೆರಿ, ಮಂಜಪ್ಪ ಹರಕತ್ತಿ, ಸಂಗಪ್ಪ ನವಲಗುಂದ, ಅಶೋಕ ಬದನಿಕಾಯಿ, ಈರನಗೌಡ ಕುದರಿ, ವಿನಾಯಕ ಸುಂಕದ, ಭೀಮಪ್ಪ ಕೆರಿ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.