ಎಲ್ಲೆಡೆ ಸಂಭ್ರಮದ ಕ್ರಿಸ್‌ಮಸ್‌ ಆಚರಣೆ


Team Udayavani, Dec 26, 2019, 3:00 AM IST

ellede

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಕ್ರೈಸ್ತ ಬಾಂಧವರು ಸಡಗರ ಸಂಭ್ರಮದಿಂದ ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸಿದರು. ನಗರದ ಕೆಥೋಲಿಕ್‌ ಹಾಗೂ ಪ್ರಾಟೆಸ್ಟೆಂಟ್‌ ಪಂಥದವರು ಆಯಾ ಚರ್ಚ್‌ಗಳಿಗೆ ಭೇಟಿ ನೀಡಿ ಸ್ವಾಮಿ ಯೇಸುವಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಕೇಕ್‌ ವಿತರಿಸಿ ಸಂತಸ ಹಂಚಿಕೊಂಡರು. ಚರ್ಚ್‌ಗಳನ್ನು ಬಣ್ಣದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು.

ಕ್ರಿಸ್‌ಮಸ್‌ ಬಲಿಪೂಜೆ: ಕೆಥೋಲಿಕ್‌ ಚರ್ಚ್‌ಗಳಲ್ಲಿ ಮಂಗಳವಾರ ರಾತ್ರಿಯಿಂದಲೇ ಪೂಜೆ ಆರಂಭವಾಯಿತು. ಗೋದಲಿ ರಚಿಸಿ, ಬಾಲ ಏಸುವನ್ನಿರಿಸಲಾಯಿತು. ಕ್ರಿಸ್‌ಮಸ್‌ ಬಲಿಪೂಜೆ ನಡೆಯಿತು. ಸಂತ ಪಾಲ್‌ ಚರ್ಚ್‌ನ ಫಾದರ್‌ ಮರಿ ಜೋಸೆಫ್ ಕ್ರಿಸ್‌ಮಸ್‌ ಬಲಿಪೂಜೆ ಅರ್ಪಿಸಿದರು. ಮಧ್ಯರಾತ್ರಿ 1 ಗಂಟೆಯ ನಂತರ ಕ್ರೈಸ್ತ ಬಾಂಧವರಿಂದ ಶುಭಾಶಯ ವಿನಿಮಯ ನಡೆಯಿತು.

ಇನ್ನು ಪ್ರಾಟಸ್ಟೆಂಟ್‌ ಪಂಥದವರು ಕಳೆದ ಒಂದು ತಿಂಗಳಿಂದಲೂ ಮನೆ ಮನೆಗಳಲ್ಲೂ ಭಜನೆ ನಡೆಸಿದ್ದರು. ಕ್ರಿಸ್‌ಮಸ್‌ ದಿನವಾದ ಬುಧವಾರ ಪ್ರಾಟಸ್ಟೆಂಟ್‌ ಚರ್ಚ್‌ಗಳಲ್ಲಿ ಗಾಯನ ದಿವ್ಯ ಬಲಿಪೂಜೆ ನೆರವೇರಿಸಲಾಯಿತು. ಶುಭಾಶಯಗಳ ವಿನಿಮಯ ನಡೆಯಿತು. ಕ್ರಿಸ್‌ಮಸ್‌ ಕೇಕ್‌ಗಳನ್ನು ಹಂಚಲಾಯಿತು. ಹಬ್ಬದ ತಿನಿಸುಗಳನ್ನು ಪರಸ್ಪರ ಹಂಚಿಕೊಂಡು, ಆಪ್ತರನ್ನು ಕರೆದು ಹಬ್ಬದ ಭೋಜನ ಸವಿದರು.

ಚರ್ಚ್‌ಗಳಿಗೆ ಶಾಸಕರು ಭೇಟಿ: ಪಟ್ಟಣದ ಸಿಎಸ್‌ಐ, ಮಸಗಾಪುರದ ಬಿಷಪ್‌ ನಾರ್ಚೆಂಟ್‌ ಸ್ಮಾರಕ ದೇವಾಲಯ , ದೊಡ್ಡರಾಯಪೇಟೆಯ ಸಂತ ತೆರೆಸಾ ಚರ್ಚ್‌ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಚರ್ಚ್‌ ಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ತೆರಳಿ ಕ್ರಿಸ್‌ಮಸ್‌ ಹಬ್ಬದ ಶುಭಾಶಯ ತಿಳಿಸಿದರು. ವಿವಿಧ ಚರ್ಚ್‌ ಗಳಿಗೆ ತೆರಳಿದ ಶಾಸಕರು ಅಲ್ಲಿನ ಧರ್ಮಗುರುಗಳನ್ನು ಸನ್ಮಾನಿಸಿ ಕೇಕ್‌ ಕಟ್‌ ಮಾಡುವ‌ ಮೂಲಕ ಕ್ರಿಸ್‌ ಮಸ್‌ ಹಬ್ಬದ ಶುಭಾಶಯ ಕೋರಿದರು.

ಉತ್ತಮ ಮಳೆ-ಬೆಳೆಯಾಗಲಿ: ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಂತಿ, ಅಹಿಂಸೆ, ಕರುಣೆಯಂತಹ ಮಾನವೀಯತೆ ಗುಣಗಳನ್ನು ಜಗತ್ತಿಗೆ ಸಾರಿದ ಮಹಾನ್‌ ಮಾನವತಾವಾದಿ ಏಸುಕ್ರಿಸ್ತನು ಹುಟ್ಟಿದ ದಿನವಾದ ಇಂದು ನಾಡಿನ ಎಲ್ಲಾ ಕ್ರೈಸ್ತ ಸಮುದಾಯದ ಬಂಧುಗಳಿಗೆ ಹಬ್ಬದ ಶುಭಾಶಯ ಕೋರಿದರು. ಡಿಸೆಂಬರ್‌ ತಿಂಗಳಲ್ಲಿ ಕ್ರಿಸ್‌ಮಸ್‌ ನಂತರ 2020ನೇ ನೂತನ ವರ್ಷವು ಬರಲಿದ್ದು ನಾಡಿನ ಜನತೆಗೆ ಬರುವ ಹೊಸ ವರ್ಷ ಒಳಿತನ್ನುಂಟು ಮಾಡಿ ಉತ್ತಮ ಮಳೆ-ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಚರ್ಚ್‌ ಗಳಿಗೆ ಭೇಟಿ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ಅಲ್ಲಿನ ಧರ್ಮಗುರುಗಳು ಸನ್ಮಾನಿಸಿ ಆಶೀರ್ವಚನ ನೀಡಿದರು. ತಾಪಂ ಮಾಜಿ ಅಧ್ಯಕ್ಷರಾದ ಬಿ.ಕೆ ರವಿಕುಮಾರ್‌, ಚಿಕ್ಕಮಹದೇವ, ಕನಿಷ್ಠ ವೇತನ ನಿಗಮದ ಮಾಜಿ ಅಧ್ಯಕ್ಷ ಆರ್‌.ಉಮೇಶ್‌, ತಾಪಂ ಮಾಜಿ ಸದಸ್ಯ ರಾಜು, ಗ್ರಾಪಂ ಮಾಜಿ ಸದಸ್ಯ ಮೂರ್ತಿ, ಜೋಸಪ್‌, ರವಿಗೌಡ, ಪುಷ್ಪರಾಜು, ಸುರೇಶ್‌ಕುಮಾರ್‌, ಸಾದುಸುಂದರ್‌, ಮೈಕಲ್‌ ರಾಜು, ಬೆಂಜಮಿನ್‌ ಹಾಜರಿದ್ದರು.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.