ಸಾರ್ವಜನಿಕ ಆಸ್ತಿ ಧ್ವಂಸ ಮಾಡುವವರು ಆತ್ಮವಿಮರ್ಶೆ ಮಾಡಲಿ


Team Udayavani, Dec 26, 2019, 6:40 AM IST

lead

ಲಕ್ನೋ: “ಸಂವಿಧಾನದ 370ನೇ ಕಲಂ, ರಾಮಮಂದಿರ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಲಾಗಿದೆ. ಇನ್ನು, ಬಾಂಗ್ಲಾದೇಶ, ಅಫ್ಘಾನಿಸ್ಥಾನ, ಬಾಂಗ್ಲಾದೇಶಗಳಿಂದ ಬಂದ ನಿರಾಶ್ರಿತರಿಗೆ ಭಾರತದ ಪೌರತ್ವ ನೀಡಲು ಮುನ್ನುಡಿ ಬರೆಯಲಾಗಿದೆ. ಹೀಗೆ ಭಾರತದ 130 ಕೋಟಿ ಜನತೆಯ ಸಮಸ್ಯೆಗಳನ್ನು ನಿವಾರಿಸಲಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ 95ನೇ ಹುಟ್ಟುಹಬ್ಬದ ಅಂಗವಾಗಿ ಬುಧವಾರ, ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ಬುಧವಾರ ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಪೌರತ್ವ ಕಾಯ್ದೆ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ನಷ್ಟ ಮಾಡುವ ಶಕ್ತಿಗಳ ವಿರುದ್ಧ ಕಿಡಿಕಾರಿದ ಅವರು, ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡುತ್ತಿರುವವರು ತಮ್ಮನ್ನು ತಾವು ಆತ್ಮಶೋಧನೆಗೆ ಒಡ್ಡಿಕೊಳ್ಳಬೇಕಿದೆ.

ಉತ್ತಮ ರಸ್ತೆಗಳು, ಉತ್ತಮ ಸಾರಿಗೆ ವ್ಯವಸ್ಥೆ ಹಾಗೂ ಉತ್ತಮ ನೈರ್ಮಲಿÂàಕರಣವನ್ನು ಹೊಂದುವುದು ನಮ್ಮ ಹಕ್ಕು. ಇದರ ಜತೆಗೆ ಶಿಕ್ಷಣ ಸಂಸ್ಥೆಗಳನ್ನು ಕಾಪಾಡುವುದು, ಶಿಕ್ಷಕರನ್ನು ಗೌರವಿಸುವುದೂ ನಮ್ಮ ಹಕ್ಕು ಎಂದು ಅವರು ಪ್ರತಿಪಾದಿಸಿದರು.

ವಾಜಪೇಯಿ ಪ್ರತಿಮೆ ಅನಾವರಣ
ಲಕ್ನೋದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಜಪೇಯಿಯವರ 25 ಅಡಿ ಎತ್ತರವುಳ್ಳ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಗೊಳಿಸಿದರು. ಈ ವಿಶ್ವವಿದ್ಯಾಲಯಕ್ಕಾಗಿ ಉತ್ತರ ಪ್ರದೇಶ ಸರಕಾರ 50 ಎಕರೆ ಜಮೀನನ್ನು ನೀಡಿದೆ. ಈ ಸಮಾರಂಭದಲ್ಲಿ, ಬಿಜೆಪಿ ಧುರೀಣ ಎಲ್‌.ಕೆ. ಆಡ್ವಾಣಿ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಹಾಗೂ ವಾಜಪೇಯಿ ಕುಟುಂಬ ಸದಸ್ಯರು ಹಾಜರಿದ್ದರು. ವಾಜಪೇಯಿ ಅವರು ಸಂಸತ್ತಿನಲ್ಲಿ ಲಕ್ನೋವನ್ನು ಐದು ಬಾರಿ ಪ್ರತಿನಿಧಿಸಿದ್ದರು.

ಗಣ್ಯರಿಂದ ಪುಷ್ಪನಮನ
ಮಾಜಿ ಪ್ರಧಾನಿ ವಾಜಪೇಯಿಯವರ 95ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿರುವ ಅವರ ಸ್ಮಾರಕವಾದ “ಸದೈವ ಅಟಲ್‌’ನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ್ರಧಾನಿ ವಾಜಪೇಯಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಬಿಜೆಪಿ ಧುರೀಣ ಎಲ್‌.ಕೆ. ಆಡ್ವಾಣಿ ಹಾಗೂ ವಾಜಪೇಯಿ ಕುಟುಂಬದ ಸದಸ್ಯರು ಸಹಿತ ಹಲವಾರು ಮಂದಿ ಪುಷ್ಪನಮನ ಸಲ್ಲಿಸಿದರು.

ಸುರಂಗಕ್ಕೆ ಅಟಲ್‌ ಹೆಸರು
ಹಿಮಾಚಲ ಪ್ರದೇಶದ ಪ್ರಸಿದ್ಧ ಪ್ರವಾಸಿ ತಾಣಗಳಾದ ಮಲಾಲಿಯಿಂದ ಕಾಶ್ಮೀರದ ಲೇಹ್‌ ಸರೋವರದ ನಡುವೆ ನಿರ್ಮಿಸಲಾಗುತ್ತಿರುವ 8.8 ಕಿ.ಮೀ. ಉದ್ದದ ರೋಹrಂಗ್‌ ಸುರಂಗ ಮಾರ್ಗಕ್ಕೆ ಅಟಲ್‌ ಬಿಹಾರಿ ವಾಜಪೇಯಿ ಹೆಸರಿಡಲಾಗಿದೆ. ನಾಮಕರಣ ನೆರವೇರಿಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಿಮಾಚಲ ಪ್ರದೇಶದ ಬಹು ದಿನಗಳ ಆಸೆಯಂತೆ ನಾಮಕರಣ ನೆರವೇರಿಸಲಾಗಿದೆ ಎಂದರು. ಸರ್ವ ಋತುವಿನ ಈ ಸುರಂಗ ಮಾರ್ಗವು, ಮನಾಲಿ- ಲೇಹ್‌ ನಡುವಿನ ಅಂತರವನ್ನು 46 ಕಿ.ಮೀ.ಗಳಷ್ಟು ಕಡಿಮೆ ಮಾಡಲಿದೆ. ಅಲ್ಲದೆ, ಸಮುದ್ರ ಮಟ್ಟದಿಂದ 9842.52 ಅಡಿ ಎತ್ತರದಲ್ಲಿ ನಿರ್ಮಾಣವಾಗುತ್ತಿರುವ ಇದು, ವಿಶ್ವದ ಅತೀ ಎತ್ತರದ ಸುರಂಗ ಮಾರ್ಗ ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ. 2020ಕ್ಕೆ ಇದು ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ.

ಅಟಲ್‌ ಭೂಜಲ ಯೋಜನೆ ಉದ್ಘಾಟನೆ
ದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಅಟಲ್‌ ಭೂಜಲ ಯೋಜನೆಗೆ ಪ್ರಧಾನಿ ಮೋದಿ ಬುಧವಾರ ಚಾಲನೆ ನೀಡಿದರು. ಅದಕ್ಕಾಗಿ ಒಟ್ಟು 6 ಸಾವಿರ ಕೋಟಿ ರೂ. ಮೀಸಲಾಗಿ ಇರಿಸಲಾಗಿದೆ. ಕರ್ನಾಟಕ ಸಹಿತ ಏಳು ರಾಜ್ಯಗಳ 78 ಜಿಲ್ಲೆಗಳ 8,300 ಹಳ್ಳಿಗಳಿಗೆ ಯೋಜನೆ ಲಾಭ ಸಿಗಲಿದೆ. ಗ್ರಾ.ಪಂ.ಗಳ ಮೂಲಕ ಅದನ್ನು ಅನುಷ್ಠಾನಗೊಳಿಸಲಾಗುತ್ತದೆ. ಪಂಚಾಯಿತಿ ಮಟ್ಟದಲ್ಲಿ ಅಂತರ್ಜಲ ಹೆಚ್ಚಿಸಲು ಪ್ರೋತ್ಸಾಹದಾಯಕ ಕ್ರಮ ಕೈಗೊಳ್ಳಲಾಗುತ್ತದೆ. ಅಂತರ್ಜಲ ಮಟ್ಟ ಏರಿಕೆ ಮಾಡುವ ನಿಟ್ಟಿನಲ್ಲಿ ಹಲವು ಯೋಜನೆ ಜಾರಿ ಮಾಡುವ ರಾಜ್ಯಗಳಿಗೆ ಪ್ರೋತ್ಸಾಹ, ನೀರಿನ ಬಳಕೆ ಮಾಡುವ, ಅಂತರ್ಜಲ ನಿರ್ವಹಣೆ ಮೇಲೆ ನಿಗಾ ಈ ಯೋಜನೆ ವ್ಯಾಪ್ತಿಯಲ್ಲಿ ಬರುತ್ತದೆ.

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

Gujarat: ಕೋಸ್ಟ್‌ ಗಾರ್ಡ್‌ ಹೆಲಿಕಾಪ್ಟರ್‌ ಪತನ; ಮೂವರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.