ಕಂಬಳ ಉಳಿಸಲು ಪ್ರಯತ್ನ: ಸಿಎಂ
ಮೂಡುಬಿದಿರೆ: "ಅಬ್ಬಕ್ಕ' ಪ್ರತಿಮೆ ಲೋಕಾರ್ಪಣೆ
Team Udayavani, Dec 26, 2019, 6:20 AM IST
ಮೂಡುಬಿದಿರೆ: ತುಳುನಾಡಿನ ಜಾನಪದ ಕ್ರೀಡೆ ಕಂಬಳ ಸುಪ್ರೀಂ
ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಗಳಿಸಿದೆ. ತುಳುವರ ಕೃಷಿಬದುಕಿನ ಪರಿಶ್ರಮ,
ಸಂಭ್ರಮದ ಪ್ರತೀಕವಾದ ಕಂಬಳವನ್ನು ಉಳಿಸಿ ಬೆಳೆಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ’ ಗ್ರಾಮದಲ್ಲಿ ನಡೆದ 17ನೇ ವರ್ಷದ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಬಯಲು ಕಂಬಳದಲ್ಲಿ “ಅಬ್ಬಕ್ಕ’ ಪ್ರತಿಮೆಯನ್ನು ಲೋಕಾರ್ಪಣೆ ಗೊಳಿಸಿ, ಕಂಬಳ ವೀಕ್ಷಿಸಿ ಅವರು ಮಾತನಾಡಿದರು.
“ತಾಲೂಕು ಅಭಿವೃದ್ಧಿಗೆ 100 ಕೋ.ರೂ. ಕೊಡಿ’
ಮೂಡುಬಿದಿರೆ ತಾಲೂಕಿನ ಮೂಲ ಸೌಕರ್ಯಗಳಿಗಾಗಿ 100 ಕೋ. ರೂ. ಒದಗಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸಿಎಂ ಅವರಲ್ಲಿ ಮನವಿ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಸಚಿವರಾದ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ. ರವಿ, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಮುಖ್ಯ ಸಚೇತಕ ಸುನಿಲ್ ಕುಮಾರ್, ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಪುತ್ತೂರು ವಿವೇಕಾನಂದ ವಿದ್ಯಾಲಯಗಳ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ರಾಜೇಶ್ ನಾೖಕ್, ಹರೀಶ್ ಪೂಂಜ, ವಾರ್ತಾಧಿಕಾರಿ ಖಾದರ್ ಷಾ, ಜಿ.ಪಂ. ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ತಹಶೀಲ್ದಾರ್ ಅನಿತಾಲಕ್ಷ್ಮೀ, ಕಂಬಳ ಸಮಿತಿಯ ಗೌರವ ಸಲಹೆಗಾರ, ಆಳ್ವಾಸ್ ಪ್ರವರ್ತಕ ಡಾ| ಎಂ. ಮೋಹನ ಆಳ್ವ, ಅದಾನಿ ಸಂಸ್ಥೆಯ ನಿರ್ವಾಹಕ ನಿರ್ದೇಶಕ ಮತ್ತು ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ, ಮಾಜಿ ಸಚಿವ ನಾಗರಾಜ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಸುದರ್ಶನ್ ಎಂ., ಕೆ.ಪಿ. ಜಗದೀಶ ಅಧಿಕಾರಿ, ಸುರೇಶ್ ಕೆ. ಪೂಜಾರಿ, ಭಾಸ್ಕರ್ ಎಸ್. ಕೋಟ್ಯಾನ್, ಕೆ. ಕೃಷ್ಣರಾಜ ಹೆಗ್ಡೆ, ರಂಜಿತ್ ಪೂಜಾರಿ, ಮೇಘನಾದ ಶೆಟ್ಟಿ, ದೇವಪ್ರಸಾದ್ ಪುನರೂರು, ಭುವನಾಭಿರಾಮ ಉಡುಪ, ಇಂದು ಎಂ., ಅಮರ್ ಕೋಟೆ ಉಪಸ್ಥಿತರಿದ್ದರು.
ಸಮ್ಮಾನ
ಕಂಬಳ ಕ್ಷೇತ್ರದ ಸಾಧಕ, ಪ್ರಧಾನದ ತೀರ್ಪುಗಾರ ಕೆ. ಗುಣಪಾಲ ಕಡಂಬ ಅವರನ್ನು ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.