ಶಕ್ತಿ ಕೇಂದ್ರಕ್ಕೂ ತಟ್ಟಿದ ಗ್ರಹಣದ ಬಿಸಿ

Team Udayavani, Dec 26, 2019, 6:02 PM IST

Vidhana-Soudha-Dark

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಗೋಚರಿಸಿದ ಕಂಕಣ ಸೂರ್ಯಗ್ರಹಣದ ಪ್ರಭಾವ ಶಕ್ತಿ ಕೇಂದ್ರ ವಿಧಾನಸೌಧದ ಮೇಲೂ ದಟ್ಟವಾಗಿಯೇ ಬೀರಿತ್ತು. ಬಹುತೇಕ ಸಚಿವರ ಕೊಠಡಿಗೆ ಗ್ರಹಣದ ಅವಧಿಯಲ್ಲಿ ಬೀಗ ಹಾಕಿದ್ದು ಕಂಡುಬಂತು. ರಾಜಧಾನಿಯಲ್ಲಿ ಬೆಳಗ್ಗೆ 11.11ಕ್ಕೆ ಗ್ರಹಣ ಅವಧಿ ಮುಗಿದ ಕೆಲವು ಹೊತ್ತಿನ ಬಳಿಕವಷ್ಟೇ ವಿಧಾನಸೌಧದಲ್ಲಿ ಕಾರ್ಯ ಚಟುವಟಿಕೆಗಳು ಸಹಜ ಸ್ಥಿತಿಗೆ ಮರಳಿತು.

ವಿಧಾನಸೌಧದಲ್ಲಿ ಬೆಳಗ್ಗೆ 11.30ರವರೆಗೆ ಅಧಿಕಾರಿಗಳು, ನೌಕರರು ಮತ್ತು ಸಿಬಂದಿ ಸಂಖ್ಯೆ ವಿರಳವಾಗಿತ್ತು. ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರ ಕಚೇರಿ ಸಹಿತ ಬಹುತೇಕ ಸಚಿವರ ಕಚೇರಿಗೆ ಬೀಗ ಹಾಕಲಾಗಿತ್ತು. ಸಚಿವರ ಕಚೇರಿಗೆ ಹೊಂದಿಕೊಂಡ ಆಪ್ತ ಸಹಾಯಕರ ಕಚೇರಿಯಲ್ಲೂ ನೌಕರರ ಸಂಖ್ಯೆ ವಿರಳವಾಗಿತ್ತು. ವಿಧಾನಸೌಧದ ಆವರಣ, ಕಾರಿಡಾರ್‌ಗಳಲ್ಲೂ ಸಾರ್ವಜನಿಕರ ಓಡಾಟ ವಿರಳವಾಗಿತ್ತು. ನೌಕರರು ಮತ್ತು ಸಿಬಂದಿ ವಿರಳವಾಗಿದ್ದರಿಂದ ವಿಧಾನಸೌಧದ ಕಾರಿಡಾರ್‌ಗಳು ಭಣಗುಡುತ್ತಿದ್ದವು.

ಸ್ವಚ್ಛತೆ- ಪೂಜೆ- ಧೂಪ
ಬೆಳಗ್ಗೆ 11.30ರ ಬಳಿಕವಷ್ಟೇ ನೌಕರರು, ಸಿಬಂದಿ ಕಚೇರಿಗಳತ್ತ ಬರಲಾರಂಭಿಸಿದರು. ಬಳಿಕ ಸಿಬಂದಿ ಕಚೇರಿಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಸಚಿವರ ಕೊಠಡಿಗಳಲ್ಲಿ ಕುರ್ಚಿ, ಮೇಜುಗಳನ್ನು ಸ್ವಚ್ಛಗೊಳಿಸುತ್ತಿರುವ ದೃಶ್ಯ ಕಂಡುಬಂತು. ಕೆಲವು ಕಚೇರಿಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕವಷ್ಟೇ ನೌಕರರು ಮತ್ತು ಅಧಿಕಾರಿಗಳು ಕೆಲಸ ಆರಂಭಿಸಿದರು.

ಕಂದಾಯ ಸಚಿವ ಆರ್‌. ಅಶೋಕ್‌ ಅವರ ಕೊಠಡಿಯನ್ನು ಸಿಬಂದಿ ಸಂಪೂರ್ಣವಾಗಿ ಸ್ವತ್ಛಗೊಳಿಸಿದರು. ಬಳಿಕ ಇಡೀ ಕೊಠಡಿಗೆ ಸಾಂಬ್ರಾಣಿ ಧೂಪ ಹಾಕಿ ಕಿಟಕಿ ಬಾಗಿಲುಗಳನ್ನು ಕೆಲವು ಹೊತ್ತು ಮುಚ್ಚಲಾಗಿತ್ತು. ಕ್ರಮೇಣ ಇತರ ಸಚಿವ ಕೊಠಡಿಗಳ ಬೀಗಗಳನ್ನು ತೆರೆಯಲಾಯಿತು. ಮಧ್ಯಾಹ್ನ 12.30ರ ಹೊತ್ತಿಗೆ ಬಹುತೇಕ ಕಚೇರಿಗಳಲ್ಲಿ ಕೆಲಸ ಕಾರ್ಯಗಳು ಆರಂಭವಾದವು.

ನಿರಂತರ ಸಭೆ

ಮುಖ್ಯಮಂತ್ರಿ ಟಿ.ಎಂ. ವಿಜಯ ಭಾಸ್ಕರ್‌ ಅವರು ಗುರುವಾರವೂ ಎಂದಿನಂತೆ ಕೆಲಸ ಕಾರ್ಯದಲ್ಲಿ ತೊಡಗಿದ್ದರು. ಬೆಳಗ್ಗೆ 10.30ಕ್ಕೆ ಆಯ್ದ ಅಧಿಕಾರಿಗಳೊಂದಿಗೆ ತಮ್ಮ ಕಚೇರಿಯಲ್ಲೇ ಸಭೆ ನಡೆಸಿದ ಅವರು ಬಳಿಕ ಮಧ್ಯಾಹ್ನ 12 ಹೊತ್ತಿಗೆ ಸಮಿತಿ ಕೊಠಡಿಯಲ್ಲಿ ಮತ್ತೂಂದು ಸಭೆಯಲ್ಲಿ ನಿರತರಾಗಿದ್ದರು.

ಟಾಪ್ ನ್ಯೂಸ್

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.