ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೂ “ಉತ್ತರದಾಯಿತ್ವ”
Team Udayavani, Dec 27, 2019, 5:45 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಳೆದ
ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲ ವಿಷಯದಲ್ಲೂ ಉತ್ಕೃಷ್ಟ ಉತ್ತರ ನೀಡಿರುವ ಉತ್ತರ ಪ್ರತಿಗಳನ್ನು ವೆಬ್ ಸೈಟ್‌ನಲ್ಲಿ ಪ್ರಕಟಿಸಲು ನಿರ್ಧರಿಸಲಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಅನುಕೂಲ ಕ್ಕಾಗಿ ಪದವಿ ಪೂರ್ವ ಇಲಾಖೆ 36 ವಿಷಯಗಳ ಉತ್ಕೃಷ್ಟ ಉತ್ತರ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಈ ಕುರಿತು “ಉದಯವಾಣಿ’ ಡಿ.26ರಂದು ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತರ ದಾಯಿತ್ವ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಪ್ರಕಟಿಸಿತ್ತು. ಈ ವರದಿಯ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಗಳಿಗೂ ಅನುಕೂಲವಾಗುವಂತೆ ಕಳೆದ ಸಾಲಿನ ಟಾಪರ್‌ಗಳ ಉತ್ತರ ಪತ್ರಿಕೆಯನ್ನು ವೆಬ್ ಸೈಟ್‌ನಲ್ಲಿ ಪ್ರಕಟಿಸಲು ಗುರುವಾರ ನಿರ್ದೇಶನ ನೀಡಿದ್ದಾರೆ.
ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯ ಉತ್ಕೃಷ್ಟ ಉತ್ತರ ಪ್ರತಿಗಳನ್ನು ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಸಚಿವರು ಪ್ರತಿ ತಿಂಗಳು ನಡೆಸುವ ಸಂವೇದನ ಫೋನ್ ಇನ್ ಕಾರ್ಯಕ್ರಮದಲ್ಲಿ ಹಲವರು ಕೋರಿಕೊಂಡಿದ್ದರು.
ಪಿಯು ಇಲಾಖೆ ಈಗಾಗಲೇ ಈ ಕ್ರಮ ಜಾರಿಗೆ ತಂದಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಈ ಸಂಬಂಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಹಾಗೂ ವೆಬ್‌ಸೈಟ್‌ನಲ್ಲೂ ಈ ಬಗ್ಗೆ ಏನನ್ನೂ ಪ್ರಕಟಿಸಿಲ್ಲ. ಸಚಿವರ ಸೂಚನೆಯಂತೆ ಮಂಡಳಿ ನಿರ್ಧಾರ ತೆಗೆದುಕೊಂಡ ನಂತರ ವೆಬ್‌ಸೈಟ್‌ನಲ್ಲಿ http://kseeb.kar.nic.in/ನಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಮಾಹಿತಿ ಲಭ್ಯವಾಗಲಿದೆ.
ಕಳೆದ ಸಾಲಿನ ಟಾಪರ್ ಉತ್ತರ ಪ್ರತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಯಾವುದೇ ಕ್ರಮ ಇನ್ನೂ ತೆಗೆದುಕೊಂಡಿಲ್ಲ. ಸಚಿವರ ನಿರ್ದೇಶನದಂತೆ, ಕಡತಗಳನ್ನು ಪರಿಶೀಲಿಸಿ
ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
● ವಿ. ಸುಮಂಗಳಾ, ನಿರ್ದೇಶಕಿ, ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.