ಕೋನಾಹಿಪ್ಪರಗಿ-ಸರಡಗಿ ಸೇತುವೆಗೆ ಗ್ರಹಣ
54 ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದರೂ ಉಪಯೋಗಕ್ಕಿಲ್ಲರಸ್ತೆ ಹದಗೆಟ್ಟು ಸವಾರರ ಪರದಾಟ
Team Udayavani, Dec 27, 2019, 10:40 AM IST
ವಿಜಯಕುಮಾರ ಎಸ್. ಕಲ್ಲಾ
ಜೇವರ್ಗಿ: ತಾಲೂಕಿನ ಕೋನಾಹಿಪ್ಪರಗಿ- ಸರಡಗಿ ನಡುವೆ ಭೀಮಾನದಿಗೆ ನಿರ್ಮಿಸಲಾಗಿರುವ 54 ಕೋಟಿ ರೂ. ವೆಚ್ಚದ ಸೇತುವೆ ಉಪಯೋಗಕ್ಕೆ ಇನ್ನೂ ಗ್ರಹಣ ಹಿಡಿದಂತಾಗಿದೆ. ತಾಲೂಕಿನ ಕೋಳಕೂರ ಜಿಪಂ ವ್ಯಾಪ್ತಿಯ ಕೂಡಿ, ಕೋಬಾಳ, ಬಣಮಿ, ಮಂದ್ರವಾಡ, ಕೋನಾಹಿಪ್ಪರಗಿ, ಹಂದನೂರ, ರಾಸಣಗಿ, ಗೌನಳ್ಳಿ, ಜನಿವಾರ, ಹರವಾಳ ಸೇರಿದಂತೆ ಹತ್ತಾರು ಗ್ರಾಮಗಳ ಜನರ ಬೇಡಿಕೆಯಾಗಿದ್ದ ಸೇತುವೆ ಕಳೆದ ಎರಡು ದಶಕಗಳ ಬಳಿಕ
ನಿರ್ಮಾಣವಾಗಿದೆ. ಆದರೆ ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದರಿಂದ ಈ ಭಾಗದ ಜನರಿಗೆ ಸೇತುವೆಯಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದೆ.
ಕೆಆರ್‌ಡಿಸಿಎಲ್ ವತಿಯಿಂದ 54 ಕೋಟಿ ರೂ.ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗಿದೆ. ಕಡಿಮೆ ಸಮಯದಲ್ಲಿ ಕಲಬುರಗಿಗೆ ತೆರಳಲು ಅನುಕೂಲವಾಗಲಿದೆ. ಇದರ ಜತೆಗೆ 20 ಕಿಮೀ ಅಂತರ ಕಡಿಮೆಯಾಗಲಿದೆ ಎನ್ನುವ ಸದುದ್ದೇಶದಿಂದ ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ಕೂಡಿ ದರ್ಗಾದಿಂದ ಕೋನಾಹಿಪ್ಪರಗಿ ಸೇತುವೆವರೆಗೆ ತೆರಳುವ ಮೂರು ಕಿಮೀ ರಸ್ತೆ ತಗ್ಗುಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರೇವನೂರ ಕ್ರಾಸ್ ದಿಂದ ಕೋನಾಹಿಪ್ಪರಗಿವರೆಗೆ ರಸ್ತೆ ಸಹ ತೀರಾ ಹದಗೆಟ್ಟು ಹೋಗಿದೆ, ಕನಿಷ್ಠ ತೇಪೆ ಹಾಕುವ ಕೆಲಸ ಮಾಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಬಹುತೇಕ ಕಡೆ ಡಾಂಬರ್ ಕಿತ್ತು ಹೋಗಿ ಜಲ್ಲಿ ಕಲ್ಲುಗಳು ಎದ್ದಿದೆ. ಇನ್ನು ಕೆಲವು ಕಡೆ ಬೃಹತ್ ಗಾತ್ರದ ಹೊಂಡಗಳು ರಸ್ತೆಯಲ್ಲಿ ಬಿದ್ದಿವೆ. ಒಂದು ಹೊಂಡ ತಪ್ಪಿಸಲು ಹೋದರೆ ಮತ್ತೊಂದು ಹೊಂಡಕ್ಕೆ ವಾಹನ ಇಳಿಯುತ್ತದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ರೇವನೂರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-50ರಿಂದ ಸರಡಗಿ ಬಳಿ ಹೆದ್ದಾರಿಗೆ ಸಂಪರ್ಕ ಕಲ್ಪಿಸಿದರೆ ಮಾತ್ರ ಈ ಭಾಗದ ಜನರಿಗೆ ಇದರಿಂದ ಲಾಭ. ಕಲಬುರಗಿಯಿಂದ ವಿಜಯಪುರಕ್ಕೆ ಈ ಸೇತುವೆ ಮಾರ್ಗವಾಗಿ ಹೋದರೇ ಕನಿಷಷ್ಠ 15 ಕಿಮೀ ಅಂತರ ಕಡಿಮೆಯಾಗಲಿದೆ. ಸರಡಗಿ ಕ್ರಾಸ್‌ದಿಂದ ಸೇತುವೆ ವರೆಗೆ ರಸ್ತೆ ನಿರ್ಮಾಣ ಮಾಡಲಾಗಿದೆ. ಅದೇ ರೀತಿ ರೇವನೂರ ಕ್ರಾಸ್ ವರೆಗೆ ದ್ವಿಪಥದ ರಸ್ತೆ ನಿರ್ಮಾಣ ಮಾಡಬೇಕು ಎಂದು ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಬಗ್ಗೆ ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. 15ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಅನುಕೂಲವಾಗುವ ಈ ರಸ್ತೆ ಅಭಿವೃದ್ಧಿಗೆ ಶಾಸಕ ಡಾ| ಅಜಯಸಿಂಗ್ ಒತ್ತು ನೀಡುವರೆ ಕಾದು ನೋಡೋಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.