ನರೀಪುರದಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

Team Udayavani, Dec 27, 2019, 12:19 PM IST

cn-tdy-2

ಕೊಳ್ಳೇಗಾಲ: ತಾಲೂಕಿನ ನರೀಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಹನೂರು ಶಾಸಕ ಆರ್‌.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಹದಗೆಟ್ಟಿರುವ ರಸ್ತೆ ಅಭಿವೃದ್ಧಿಗಾಗಿ ಸಚಿವರ ಗಮನ ಸೆಳದು, ರಸ್ತೆ ಡಾಂಬರೀಕರಣಕ್ಕೆ 15 ಕೋಟಿ ರೂ. ಅನುದಾನ ಮಂಜೂರು ಹಾಗಿದ್ದು, ತಾಲೂಕಿನ ನರೀಪುರ ಗ್ರಾಮದಿಂದ ಮತ್ತೀಪುರದ ವರೆಗಿನ 5.11 ಕಿಲೋ ಮೀಟರ್‌ ರಸ್ತೆ ಮತ್ತು ಪಟ್ಟಣದ ಆರ್‌ಸಿಎಂ ಶಾಲೆ ಯಿಂದ ಮಧುವನ ಹಳ್ಳಿಯ ವರೆಗೆ 3.33 ಕಿಲೋ ಮೀಟರ್‌ ಡಾಂಬರ್‌ ರಸ್ತೆ ಹಾಗೂ ಗುಂಡಾಲ್‌ ಜಲಾಶಯದ ಅಡ್ಡ ರಸ್ತೆಯಿಂದ ಲೊಕ್ಕನಹಳ್ಳಿವರೆಗೆ 6.75 ಕಿಲೋ ಮೀಟರ್‌ ರಸ್ತೆ ಸೇರಿದಂತೆ 3 ಕಾಮಗಾರಗಳಿಂದ ಒಟ್ಟು 15 ಕೋಟಿ ರೂ. ಅಂದಾಜಿನಲ್ಲಿ 15 ಕಿಲೋ ಮೀಟರ್‌ ಡಾಂಬರೀಕಣ ರಸ್ತೆ ನಿರ್ಮಾಣವಾಗಲಿದೆ. ಕ್ಷೇತ್ರದಲ್ಲಿ ಎಂ.ಡಿ.ಆರ್‌ ರಸ್ತೆ 72 ಕಿಲೋ ಮೀಟರ್‌ ಇದೆ. ಇದರಲ್ಲಿ 70 ಕಿಲೋ ಮೀಟರ್‌ ರಸ್ತೆ ಅಭಿವೃದ್ಧಿ ಮಾಡಲಾಗಿದೆ.  ಉಳಿದ ರಸ್ತೆಯನ್ನು ಮುಂದಿನ ಸೋಮವಾರ ಭೂಮಿಪೂಜೆ ಮಾಡಿ, ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದು ಹೇಳಿದರು.

ರಸ್ತೆ ಗುಂಡಿ ಮುಚ್ಚಲು ಕ್ರಮ: ನೂತನ ವರ್ಷದ ಜನವರಿ ತಿಂಗಳಲ್ಲಿ ತಾಲೂಕಿನ ಪವಾಡ ಪುರುಷ ಚಿಕ್ಕಲ್ಲೂರು ಸಿದ್ದಪ್ಪಾಜಿ ಬೃಹತ್‌ ಜಾತ್ರಾ ಮಹೋತ್ಸವ ನಡೆಯಲಿದೆ. ಹದಗೆಟ್ಟಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ಗುಂಡಿ ಮುಚ್ಚುವ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ತಾಲೂಕಿನ ಸತ್ತೇಗಾಲ ದಿಂದ ಚಿಕ್ಕಲ್ಲೂರಿನ ರಸ್ತೆ ಮತ್ತು ಪಾಳ್ಯದಿಂದ ಚಿಕ್ಕಲ್ಲೂರು ರಸ್ತೆಗಳನ್ನು ಸರಿಪಡಿಸಿ, ಜಾತ್ರೆ ಸುಗಮವಾಗಿ ನಡೆಯುವಂತೆ ಮಾಡಲಾಗುವುದು.

ಜಾತ್ರೆ ಹಿನ್ನಲೆಯಲ್ಲಿ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣಕ್ಕೆ ಸಚಿವರಿಂದ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಜಾತ್ರೆಯ ಬಳಿಕ ಎಲ್ಲಾ ರಸ್ತೆಗಳು ಡಾಂಬರೀಕರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ತಾಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಅರುಣ್‌ ಕುಮಾರ್‌, ತಾಲೂಕು ಪಂಚಾಯ್ತಿ ಸದಸ್ಯ ಸುರೇಶ್‌, ಜಿಲ್ಲಾ ಪಂಚಾಯ್ತಿ ಸದಸ್ಯೆ ಮರಗದ ಮಣಿ, ಧನಗೆರೆ ಗ್ರಾಪಂ ಅಧ್ಯಕ್ಷ ಕುಮಾರ್‌, ಲೋಕೋಪಯೋಗಿ ಇಲಾಖೆ ಎಇಇ ಮಹದೇವಸ್ವಾಮಿ, ಸಹಾಯಕ ಎಂಜಿನಿಯರ್‌ ರಮೇಶ್‌, ಗುತ್ತಿಗೆದಾರ ವಾಲೆ ಮಹದೇವು, ಮುಖಂಡ ಯಡಕುರಿಯ ಮಹದೇವ, ಧನಗೆರೆ ಮಹದೇವ, ಗ್ರಾಪಂ ಮಾಜಿ ಅಧ್ಯಕ್ಷ ಶಿವಶಂಕರ್‌, ಸಿದ್ದರಾಜು, ವೆಂಕಟರಾಮು, ಸೀಗ ನಾಯಕ ಹಾಜರಿದ್ದರು.

ಟಾಪ್ ನ್ಯೂಸ್

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.