ಕೃಷಿ ಕ್ಷೇತ್ರ ಚೆನ್ನಾಗಿದ್ದರೆ ದೇಶ ಸುಭಿಕ್ಷ
ವಿಪ ಉಪಸಭಾಪತಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಧರ್ಮೇಗೌಡ ಅಭಿಮತ
Team Udayavani, Dec 27, 2019, 2:34 PM IST
ಚಿಕ್ಕಮಗಳೂರು: ಕೃಷಿ ಕ್ಷೇತ್ರ, ರೈತಾಪಿ ವರ್ಗ ಹಾಗೂ ಗ್ರಾಮೀಣ ಜನರ ಬದುಕು ಚೆನ್ನಾಗಿದ್ದರೆ ದೇಶ ಸುಭಿಕ್ಷವಾಗಿರುತ್ತದೆ ಎಂದು ವಿಧಾನ ಪರಿಷತ್ ಉಪಸಭಾಪತಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್. ಎಲ್.ಧರ್ಮೇಗೌಡ ಹೇಳಿದರು.
ತಾಲೂಕಿನ ಶಿರವಾಸೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೈತನಿಗೆ ಕೃಷಿ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಹೋಗುವ ಹಂಬಲವಿದ್ದು, ಆರ್ಥಿಕ ನೆರವು ಹಾಗೂ ಬೆಳೆಗಳಿಗೆ ಸರಿಯಾದ ಬೆಲೆ ಸಿಗದೆ ಬೆಳವಣಿಗೆ ಕುಂಠಿತವಾಗಿ ಕಷ್ಟದ ಜೀವನ ಸಾಗಿಸುತ್ತಿದ್ದಾನೆ. ಅನ್ನದಾದತನಿಗೆ ಸರಿಯಾದ ನೆಲೆ ಸಿಗುತ್ತಿಲ್ಲ. ಬದಲಾಗಿ ಆಧುನಿಕ ಯುಗಕ್ಕೆ ಮೊರೆ ಹೋಗುತ್ತಿರುವುದು ವಿಷಾದನೀಯ ಎಂದರು.
ರೈತರ ಆರ್ಥಿಕ ವ್ಯವಸ್ಥೆ ಸುಧಾರಿಸಲು ಇರುವ ಸದೃಢ ಮಾರ್ಗವೆಂದರೆ ಅದು ಸಹಕಾರಿ ಕ್ಷೇತ್ರ. ಪ್ರತಿ ವರ್ಷ ಸಹಕಾರಿ ಕ್ಷೇತ್ರ ನಡೆದು ಬಂದ ದಾರಿ ಹಾಗೂ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಬೇಕು ಎಂಬುದನ್ನು ಅವಲೋಕನ ಮಾಡಲು ರೈತ ದಿನಾಚರಣೆಯನ್ನು ಆಚರಿಸಬೇಕೆಂದು ಹೇಳಿದರು.
ಪ್ರತಿಯೊಬ್ಬ ರೈತ ಕುಟಂಬಕ್ಕೆ ಕನಿಷ್ಠ 3 ಲಕ್ಷದವರೆಗೆ ಬಡ್ಡಿ ರಹಿತವಾದ ಸಾಲ ಕೊಡಬೇಕು ಎಂಬ ಸರ್ಕಾರದ ಯೋಜನೆ ಸಂಪೂರ್ಣವಾಗಿ ಸಿಗುತ್ತಿಲ್ಲ. ಜಿಲ್ಲಾ ಸಹಕಾರ ಸಂಘ 10 ಲಕ್ಷ ರೂ. ವರೆಗೆ ಕಡಿಮೆ ಬಡ್ಡಿಯಲ್ಲಿ ಸಾಲ ಕೊಡುವ ಯೋಜನೆಯು ಸಹ ರೈತರಿಗೆ ತಲುಪುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.
ರೈತನ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕುಗಳು ನೀಡುತ್ತಿರುವ ಹಣವನ್ನು ರೈತರು ಸಹಕರಿಸಿ ಮರುಪಾವತಿ ಮಾಡಿ ಸಹಕಾರ ಸಂಘವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.
ಜಿಲ್ಲಾ ಸಹಕಾರಿ ಬ್ಯಾಂಕಿನಲ್ಲಿ ಬಂದ ಯಾವುದೇ ಸಾಲ ಅರ್ಜಿಗಳನ್ನು ವಾಪಸ್ ಕಳುಹಿಸದೆ ಸಾಲಗಳನ್ನು ನೀಡಿ ರೈತನ ಅಭಿವೃದ್ಧಿಗೆ ಸಹಕರಿಸಬೇಕೆಂದು ಹೇಳಿದರು. ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಮಾತನಾಡಿ, ಇಂದಿನ ಆಧುನಿಕ ಸಮಾಜದಲ್ಲಿ ಕೃಷಿಕನನ್ನು ಸ್ವಾವಲಂಬಿಯನ್ನಾಗಿ ಮಾಡಲು ಚಿಂತಿಸಬೇಕಾದ ಅನಿವಾರ್ಯತೆ ಹಾಗೂ ಅವಶ್ಯಕತೆ ಇದೆ ಎಂದು ಹೇಳಿದರು.
ಪ್ರಸ್ತುತ ಸಮಾಜದಲ್ಲಿ ಕೃಷಿ ಸಂಸ್ಕೃತಿಯನ್ನು ಉಳಿಸಬೇಕಾದ ಅನಿವಾರ್ಯತೆ ಎದುರಾಗಿದ್ದು, ನಮ್ಮ ಬೆನ್ನೆಲುಬಾಗಿರುವ ರೈತ ಇಂದು ಹಲವು ಸಂಕಷ್ಟಗಳಿಗೆ ಒಳಗಾಗಿದ್ದಾನೆ. ಇದು ನಮ್ಮ ದೇಶದ ದುಸ್ಥಿತಿ ಎಂದು ಹೇಳಿದರು.
ಸಿದ್ಧನಗೌಡ ಅವರು ಪ್ರಾರಂಭಿಸಿದ ಸಹಕಾರಿ ಚಳವಳಿಯಿಂದಾಗಿ ಇಂದು ರಾಜ್ಯದ ಉದ್ದಗಲಕ್ಕೆ ದೊಡ್ಡ ಆಂದೋಲನವಾಗಿ ಹೊರಹೊಮ್ಮಿದೆ. ರಾಮಚಂದ್ರ ಹಾಗೂ ಮುಳ್ಳೇಗೌಡರಿಂದ ಸಹಕಾರ ಸಂಘ ಪ್ರಾರಂಭವಾಗಿ ರೈತರಿಗೆ ನೆರವು ನೀಡಿದ್ದರಿಂದ
ಶಿರವಾಸೆಯಂತಹ ಮಲೆನಾಡಿನ ಗ್ರಾಮ ಲಾಭದಾಯಕವಾಗಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮಾತನಾಡಿ, ಇಂದಿನ ಯುವ ಪೀಳಿಗೆ ಕೃಷಿ ಲಾಭದಾಯಕ ಕ್ಷೇತ್ರವಲ್ಲ ಎಂಬ ಕಾರಣದಿಂದ ಕೃಷಿಯ ಕಡೆ ಒಲವು ತೋರದೆ ಎಲೆಕ್ಟ್ರಾನಿಕ್ ಸಿಟಿಗಳ ಕಡೆ ಗಮನ ಹರಿಸುತ್ತಿದ್ದಾರೆ. ಇದರಿಂದ ಸರ್ಕಾರ ಅವರಲ್ಲಿ ಕೃಷಿಯ ಮಹತ್ವವನ್ನು ತಿಳಿಸುವಂತಹ ಪ್ರಯತ್ನ ಮಾಡಬೇಕು ಎಂದರು. ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುಜಾತ ಕೃಷ್ಣಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷ ಜಯಣ್ಣ ನೆಟ್ಟೆಕೆರೆಹಳ್ಳಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಜಸಿಂತಾ ಅನಿಲ್ ಕುಮಾರ್, ಕವಿತಾ ಲಿಂಗರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.