ಪೌರತ್ವ ತಿದ್ದುಪಡಿ ಕಾನೂನು ಜನಜಾಗೃತಿ
Team Udayavani, Dec 27, 2019, 2:42 PM IST
ಪಾವಗಡ: ಪೌರತ್ವ ತಿದ್ದುಪಡಿ ಕಾನೂನಿಂದ ಯಾರಿಗೂ ತೊಂದರೆ ಯಾಗುವುದಿಲ್ಲ ಎಂದು ಜಿಲ್ಲಾ ಪೌರತ್ವ ತಿದ್ದುಪಡಿ ಕಾನೂನು ಬಿಜೆಪಿ ಜನಜಾಗೃತಿ ಜಿಲ್ಲಾ ಸಂಚಾಲಕ ಸಂಪಂಗಿ ನಂದೀಶ್ ಹೇಳಿದರು. ಪಟ್ಟಣದ ಆಂಧ್ರಗಿರಿ ಭವನದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು ಜನಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ಲೋಕ ಹಾಗೂ ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕಾರವಾದ ಕಾಯ್ದೆ ವಿರೋಧಿಸುವುದು ಸರಿಯಲ್ಲ. ಸ್ವಾತಂತ್ರ್ಯ ಬಂದಾಗ ಮುಸ್ಲಿಮರಿಗೆ ಪಾಕಿಸ್ತಾನ, ಹಿಂದುಗಳಿಗೆ ಭಾರತ ಎಂದು ಇಬ್ಭಾಗ ಮಾಡಲಾಯಿತು. ಪಾಕಿಸ್ತಾನದಲ್ಲಿ ಹಿಂದುಗಳಿಗೆ ತೊಂದರೆಯಾದರೆ ಭಾರತದ ಪೌರತ್ವ ನೀಡುವ ಬಗ್ಗೆ ಅಂದೇ ಒಪ್ಪಂದವಾಗಿತ್ತು. ಸ್ವಾತಂತ್ರ್ಯ ಬಂದಾಗ ಭಾರತದಲ್ಲಿ ಶೇ.6ರಷ್ಟಿದ್ದ ಮುಸ್ಲಿಮರ ಸಂಖ್ಯೆ ಈಗ ಶೇ.16 ಆಗಿದೆ. ಪಾಕಿಸ್ತಾನದಲ್ಲಿ ಶೆ.13ರಷ್ಟಿದ್ದ ಹಿಂದುಗಳ ಸಂಖ್ಯೆ ಶೇ.4ಕ್ಕೆ ಇಳಿದಿದೆ. ಪೌರತ್ವ ಕಾನೂನಿಂದ 33 ಸಾವಿರ ಮಂದಿಗೆ ಲಾಭ ಸಿಗಲಿದೆ. ಬಿಜೆಪಿ ಕಾರ್ಯಕರ್ತರು ಪೌರತ್ವ ಕಾನೂನು ಬಗ್ಗೆ ತಿಳಿದುಕೊಂಡು ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ವಿಸ್ತಾರಕ ಜಯಪ್ರಕಾಶ್ ಮಾತನಾಡಿ,ತಾಲೂಕಿನ ಕಾರ್ಯಕರ್ತರು ಬೂತ್‌ಮಟ್ಟದಲ್ಲಿ ಜನಜಾಗೃತಿ ಸಭೆ ಮಾಡಬೇಕು. ಕಾಂಗ್ರೆಸ್ ಮತ್ತು ಕೆಲ ಕೀಡಿಗೆಡಿಗಳು ಮಾಡುತ್ತಿರುವ ಅಪಪ್ರಚಾರ ಜನತೆಗೆ ತಿಳಿಸಿ ಎಂದು ಹೇಳಿದರು.
ಬಿಜೆಪಿ ತಾಲೂಕು ಅಧ್ಯಕ್ಷ ರವಿಶಂಕರ್ ನಾಯ್ಕ, ಜಿಲ್ಲಾ ಕಾರ್ಯದರ್ಶಿ ರವಿ, ತಾಲೂಕು ಜಾಗೃತಿ ಉಸ್ತುವಾರಿ ಒಂಕಾರ್, ತಾಲೂಕು ನಿಕಟಪೂರ್ವ ಅಧ್ಯಕ್ಷ ಗಿರೀಶ್, ಮುಖಂಡರಾದ ಕರಿಯಣ್ಣ, ಸೂರ್ಯನಾರಾಯಣ, ಪಾಂಡು ಯಾದವ್, ಬ್ಯಾಡನೂರ್ ಶಿವು, ಚಂದ್ರಶೇಖರ್ ನಾಯ್ಕ, ನವೀನ್ ಕುಮಾರ್, ಪಾಲಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.