ನಿಯಮಾನುಸಾರ ನಂಬರ್ ಪ್ಲೇಟ್ ಅಳವಡಿಸಿ
Team Udayavani, Dec 27, 2019, 5:13 PM IST
ದಾವಣಗೆರೆ: ಎಲ್ಲಾ ವಾಹನಗಳಿಗೆ ಕಡ್ಡಾಯವಾಗಿ ಭಾರತೀಯ ಮೋಟಾರು ವಾಹನ ಕಾಯ್ದೆ ನಿಯಮಾನುಸಾರ ನೋಂದಣಿ ಫಲಕ (ನಂಬರ್ ಪ್ಲೇಟ್) ಅಳವಡಿಸಿಕೊಳ್ಳಬೇಕು. ಇಲ್ಲದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.
ಗುರುವಾರ, ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಿರ್ಧಿಷ್ಟ ಅಳತೆಯ ನಂಬರ್ ಪ್ಲೇಟ್‌ನ ಮೂರನೇ ಒಂದು ಭಾಗದಲ್ಲಿ ಸರ್ಕಾರದ ಹಾಲೋಗ್ರಾಮ್ ಮತ್ತು ಐ.ಎನ್.ಡಿ. ಎಂಬುದಾಗಿ ನಮೂದಾಗಿರಬೇಕು. ಈ ರೀತಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇತ್ತಿಚಿನ ದಿನಗಳಲ್ಲಿ ಮಾಲೀಕರು ತಮ್ಮ ವಾಹನಗಳ ನೋಂದಣಿ ಫಲಕಗಳನ್ನು ಇಚ್ಛಾನುಸಾರ ಅಳವಡಿಸಿಕೊಳ್ಳುತ್ತಿದ್ದಾರೆ. ಇದು ಭಾರತೀಯ ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗುತ್ತದೆ.
ಮುಖ್ಯವಾಗಿ ಅಪಘಾತದ ಸಂದರ್ಭದಲ್ಲಿ ವಾಹನಗಳ ನೋಂದಣಿ
ಸಂಖ್ಯೆ ಪತ್ತೆ ಹಚ್ಚುವುದು ಕಷ್ಟವಾಗಿದೆ. ಹಾಗಾಗಿ ಇನ್ನು ಮುಂದೆ ಎಲ್ಲಾ ವಾಹನಗಳಿಗೆ ಭಾರತೀಯ ಮೋಟಾರು ವಾಹನ ಕಾಯ್ದೆ ಅನ್ವಯ ನೋಂದಣಿ ಫಲಕ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಾಹನ ನೋಂದಣಿ ಸಂಖ್ಯೆಯ ಫಲಕದ ಗುರುತಿನ ಅಕ್ಷರಗಳು ಆಂಗ್ಲ ಭಾಷೆ ಮತ್ತು ಅಂಕಿಗಳು ಹಿಂದೂ ಅರೇಬಿಕ್ ಸಂಖ್ಯೆಯಲ್ಲಿರಬೇಕು. ವಾಹನ ಹಿಂಬದಿ ಮತ್ತು ಮುಂಬದಿ ನೋಂದಣಿ ಫಲಕ ಹೊಂದಿರಬೇಕು. ನೋಂದಣಿ ಫಲಕ ಅಲ್ಯೂಮಿನಿಯಂ ಲೋಹದ್ದಾಗಿರಬೇಕು. ಐ.ಎಸ್.ಓ. 759 ಮಾದರಿಯಲ್ಲಿ ರಚಿತವಾಗಿರಬೇಕು. ಅದರ ಅಂಚುಗಳು ಹಾಳಾಗದಂತೆ 10 ಎಂ.ಎಂ. ದುಂಡಾಗಿ ಮಾಡಿಸಬೇಕು. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ 200+100 ಎಂ.ಎಂ. ಗಾತ್ರ, ಪ್ರಯಾಣಿಕರ ಕಾರ್‌ಗಳ ನಂಬರ್ ಪ್ಲೇಟ್ 500+120 ಎಂ.ಎಂ., ಲಘು ಮತ್ತು ಭಾರಿ ಗಾತ್ರದ ವಾಹನಗಳಿಗೆ 340+200 ಎಂ.ಎಂ. ಅಳತೆ ನೋಂದಣಿ ಫಲಕ ಹೊಂದಿರಬೇಕು. 2 ಮತ್ತು 3 ಚಕ್ರದ, ಮತ್ತು 4 ಚಕ್ರದ ವಾಹನಗಳ ಮುಂಭಾಗದ ನೋಂದಣಿ ಫಲಕದಲ್ಲಿ ಅಕ್ಷರಗಳ 35 ಎಂ.ಎಂ. ಎತ್ತರ, 7 ಎಂ.ಎಂ. ಅಗಲ ಹಾಗೂ ಹಿಂಭಾಗದ ನೋಂದಣಿ ಫಲಕದಲ್ಲಿ ಅಕ್ಷರಗಳ 40 ಎಂ.ಎಂ ಎತ್ತರ, 7 ಎಂ.ಎಂ. ಅಗಲ ಇರಬೇಕು. ಮಧ್ಯದ ಅಂತರ 5 ಎಂ.ಎಂ. ಇರಬೇಕು ಎಂದು ಅವರು ಹೇಳಿದರು ನೋಂದಣಿ ಫಲಕಗಳಲ್ಲಿ ಅಲಂಕಾರಿಕ ಅಕ್ಷರ, ಯಾವುದೇ ಚಿತ್ರ, ಹೆಸರು, ದೇವರ ಚಿತ್ರ ಹಾಕುವುದನ್ನು ನಿಷೇ ಧಿಸಲಾಗಿದೆ. ಆದ್ದರಿಂದ ಯಾವುದೇ ವಾಹನ ನೋಂದಣಿ ಫಲಕ ಸಿದ್ದಪಡಿಸುವಾಗ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಈ ನಿಯಮ ಪಾಲಿಸದೇ ಇದ್ದಲ್ಲಿ 1,000 ರೂ. ದಂಡ ವಿ ಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.