ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಗೆ ಸೂಚನೆ


Team Udayavani, Dec 28, 2019, 3:00 AM IST

sarkari

ಚಾಮರಾಜನಗರ: ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ.8 ಹಾಗೂ 9ರಂದು ನಗರದಲ್ಲಿ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಏರ್ಪಾಡು ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆಗಾಗಿ ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸಿದ್ಧತೆ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ಕುಡಿಯುವ ನೀರು, ಕ್ರೀಡಾಂಗಣದ ಸ್ವತ್ಛತೆ, ಇನ್ನಿತರ ಪ್ರಮುಖ ಕೆಲಸಗಳನ್ನು ನಗರಸಭೆ ಅಧಿಕಾರಿಗಳು ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.

ತೀರ್ಪುಗಾರರ ನಿಯೋಜನೆ: ಕ್ರೀಡಾಕೂಟದ ತೀರ್ಪುಗಾರರಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಬೇಕು. ಅದೇ ರೀತಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳ ತೀರ್ಪುಗಾರರ ನೇಮಕಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದರು.

ವ್ಯವಸ್ಥೆಯಲ್ಲಿ ಲೋಪ ಬೇಡ: ಕ್ರೀಡಾಕೂಟ ನಡೆಯುವ ದಿನಗಳಂದು ವೈದ್ಯರು ಅಗತ್ಯ ಸಿಬ್ಬಂದಿಯೊಂದಿಗೆ ಕ್ರೀಡಾಂಗಣದಲ್ಲಿ ಲಭ್ಯರಿರಬೇಕು. ಔಷಧೋಪಚಾರಗಳು ಸಹ ಇರುವಂತೆ ನೋಡಿಕೊಳ್ಳಬೇಕು. ಆರಕ್ಷಕ ಸಿಬ್ಬಂದಿ ನಿಯೋಜನೆ ಸೇರಿದಂತೆ ಕ್ರೀಡಾಕೂಟಕ್ಕೆ ಬೇಕಿರುವ ಅಗತ್ಯ ವ್ಯವಸ್ಥೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯಾವುದೇ ಲೋಪವಿಲ್ಲದೆ ಮಾಡಬೇಕು ಎಂದು ತಿಳಿಸಿದರು.

ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿ: ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ನಗರದಲ್ಲಿ ಆಯೋಜಿತವಾಗುವ ಕ್ರೀಡಾಕೂಟಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ನೌಕರರು ಬರಲಿದ್ದಾರೆ. ಅವರ ವಾಸ್ತವ್ಯಕ್ಕೆ ಅಗತ್ಯ ವ್ಯವಸ್ಥೆ ಸಹ ಕಲ್ಪಿಸಬೇಕಿದೆ. ಕ್ರೀಡಾಕೂಟಕ್ಕೆ ನೌಕರರ ಸಂಘವು ಅಗತ್ಯ ಸಹಕಾರ ನೀಡಲಿದೆ ಎಂದು ಹೇಳಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ‌ ಚಲುವಯ್ಯ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ವಾರೇಶ್‌ ಗಿರಿಯಪ್ಪ ಸಂಗೊಂದಿ, ಪ್ರಧಾನ ಕಾರ್ಯದರ್ಶಿ ಮಹದೇವ ಸ್ವಾಮಿ, ತಾಲೂಕು ನೌಕರರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.