ಮಂಗಳೂರು ಗಲಭೆ: ಸಿಐಡಿ ಪೊಲೀಸರ ತನಿಖೆ ಆರಂಭ
Team Udayavani, Dec 28, 2019, 7:46 AM IST
ಮಂಗಳೂರು: ನಗರದ ಗಲಭೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಗರಕ್ಕೆ ಆಗಮಿಸಿರುವ ಸಿಐಡಿ ಪೊಲೀಸರ ತನಿಖಾ ತಂಡವು ಶುಕ್ರವಾರ ತನಿಖೆ ಆರಂಭಿಸಿದೆ. ಸಿಐಡಿ ಎಸ್ಪಿ ರಾಹುಲ್ ಶಹಾಪೂರ್ ನೇತೃತ್ವದ 5 ಮಂದಿ ಅಧಿಕಾರಿಗಳ ತಂಡ ತನಿಖೆಯನ್ನು ಕೈಗೆತ್ತಿಕೊಂಡಿದೆ. ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ.
ಸಿಐಡಿ ತಂಡ ಪ್ರಥಮವಾಗಿ ಡಿ. 19ರಂದು ಮಂಗಳೂರಿನಲ್ಲಿ ನಡೆದ ಘಟನೆಯ ಬಗ್ಗೆ ವಾಸ್ತವ ಚಿತ್ರಣದ ಮಾಹಿತಿಯನ್ನು ಕಲೆ ಹಾಕಿ ಬಳಿಕ ತನಿಖೆಯನ್ನು ಕೈಗೆತ್ತಿಕೊಳ್ಳಲಿದ್ದು, ಈ ನಿಟ್ಟಿನಲ್ಲಿ ಈಗ ಘಟನಾವಳಿಯ ಮಾಹಿತಿ ಕಲೆಹಾಕುವ ಕಾರ್ಯದಲ್ಲಿ ನಿರತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಂಗಳೂರು ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯ ಕಲೆಹಾಕಿದ್ದಾರೆ. ಈ ತನಿಖೆಯನ್ನು ಇನ್ನು ಸಿಐಡಿ ಕೈಗೆತ್ತಿಕೊಳ್ಳಲಿದೆ. ಮಾತ್ರವಲ್ಲದೆ ಮಂಗಳೂರು ಪೊಲೀಸರ ಪ್ರಾಥಮಿಕ ಹಂತದ ತನಿಖೆ ಸರಿಯಾಗಿದೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಿದೆ. ಶುಕ್ರವಾರ ಬೆಳಗ್ಗೆ ಕಮಿಷನರ್ ಕಚೇರಿಗೆ ಆಗಮಿಸಿದ ತನಿಖಾ ತಂಡ, ಗೋಲಿಬಾರ್ ಘಟನೆಗೆ ಸಂಬಂ ಧಿಸಿ ಅಗತ್ಯ ಮಾಹಿತಿಯನ್ನು ಕಲೆ ಹಾಕಿತು. ಪ್ರಮುಖ ದಾಖಲೆಗಳು ಹಾಗೂ ದಾಖಲಾದ ಪ್ರಕರಣಗಳ ವಿವರವನ್ನು ಪಡೆದುಕೊಂಡಿತು ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಧಿಕಾರಿ ಜಗದೀಶ್ ಡಿ. 28ರ ಬಳಿಕ ಮಂಗಳೂರಿಗೆ ಆಗಮಿಸಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ಈ ತನಿಖೆಯನ್ನೂ ಮೂರು ತಿಂಗಳೊಳಗೆ ಮುಕ್ತಾಯಗೊಳಿಸಿ ವರದಿ ನೀಡುವಂತೆ ಸರಕಾರ ಆದೇಶಿಸಿದೆ.
ಮುಂದುವರಿದ ಬೆದರಿಕೆ ಕರೆ
ಗೋಲಿಬಾರ್ ಬಳಿಕ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್ ಅಧಿ ಕಾರಿಗಳು ಹಾಗೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಸಿಬಂದಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಅಧಿಕಾರಿಗಳು, ಸೈಬರ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕರೆಗಳ ಮೂಲವನ್ನು ಪತ್ತೆಹಚ್ಚುವಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
ಭದ್ರತೆ ಹೆಚ್ಚಳಕ್ಕೆ ಕ್ರಮ
ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಿಂದ ಇರುವಂತೆ ಉನ್ನತ ಅಧಿಕಾರಿಗಳು ಸೂಚನೆ ನೀಡಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕೂಲಂಕಷ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕಮಿಷನರ್ಗೆ ಹೊರಗೆ ಸಂಚಾರ ವೇಳೆಯಲ್ಲೂ ಭದ್ರತೆ ಒದಗಿಸುವಂತೆ ಉನ್ನತಾಧಿ ಕಾರಿಗಳು ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.
ಹಳೆಯ ಅಧಿಕಾರಿಗಳಿಗೆ ಬುಲಾವ್
ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಕರೆಸಿ ಅವರಿಂದ ಇಲ್ಲಿನ ಪರಿಸರದ ಸೂಕ್ಷ್ಮಗಳನ್ನು ಹಾಗೂ ವಸ್ತುಸ್ಥಿತಿ ತಿಳಿದು ಕೊಳ್ಳಲು ಹಾಗೂ ಅದರಿಂದ ಈ ಘಟನೆಯ ತನಿಖೆಗೆ ಏನಾದರೂ ಸಹಾಯ ಆಗ ಬಹುದೇ ಎನ್ನುವುದನ್ನು ಪರಿಶೀಲಿಸುತ್ತಿದ್ದಾರೆ. ಈ ದಿಶೆಯಲ್ಲಿ ಕೆ.ಯು. ಬೆಳ್ಳಿಯಪ್ಪ, ತಮ್ಮಯ್ಯ, ರಾಜೇಂದ್ರ., ಭಾಸ್ಕರ ಒಕ್ಕಲಿಗ, ಡಾ| ಎಚ್.ಎನ್. ವೆಂಕಟೇಶ ಪ್ರಸನ್ನ, ವೆಲೆಂಟೈನ್ ಡಿ’ಸೋಜಾ ಮಂಗಳೂರಿನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.