ಶ್ರೀರಾಮ ಮಂದಿರ ಶೀಘ್ರ ನಿರ್ಮಾಣವಾಗಲಿ: ಡಾ| ಹೆಗ್ಗಡೆ
ವಿಹಿಂಪ ಕೇಂದ್ರೀಯ ವಿಶ್ವಸ್ತ ಮಂಡಳಿ, ಪ್ರಬಂಧ ಸಮಿತಿ ಸಂಯುಕ್ತ ಬೈಠಕ್ಗೆ ಚಾಲನೆ
Team Udayavani, Dec 28, 2019, 6:00 AM IST
ಮಂಗಳೂರು: ಅಯೋಧ್ಯೆ ಸಮಸ್ಯೆ ಬಗೆಹರಿದಿರುವುದು ಸಂತಸದ ವಿಚಾರವಾಗಿದ್ದು, ಆದಷ್ಟು ಶೀಘ್ರ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ವಾಗಲಿ ಎಂದು ಡಾ| ಡಿ. ವೀರೇಂದ್ರ ಹೆಗ್ಗಡೆ ಆಶಿಸಿದರು. ನಗರದ ಸಂಘನಿಕೇತನದಲ್ಲಿ ಶುಕ್ರವಾರ ನಡೆದ ವಿಶ್ವ ಹಿಂದೂ ಪರಿಷತ್ನ ಕೇಂದ್ರೀಯ ವಿಶ್ವಸ್ತ ಮಂಡಳಿ ಮತ್ತು ಪ್ರಬಂಧ ಸಮಿತಿಯ ಸಂಯುಕ್ತ ಬೈಠಕ್ನ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಮ ಮಂದಿರ ನಿರ್ಮಾಣಕ್ಕೆ ದೀರ್ಘಾವಧಿ ತಗಲಿದ್ದು ಯಾಕೆ ಎಂಬುದು ನನ್ನನ್ನು ಕೂಡ ಸದಾ ಕಾಡುತ್ತಿತ್ತು. ಆದರೆ ಅದಕ್ಕೆ ರಾಮನ ಜನ್ಮ ಕುಂಡಲಿಯ ಸಮಸ್ಯೆಯೇ ಕಾರಣವಾಗಿರಬೇಕು ಎಂದೆನಿಸುತ್ತದೆ. ಯಾಕೆಂದರೆ, ಲೋಕ ಕಲ್ಯಾಣಕ್ಕಾಗಿ ರಾಮನ ಜನ್ಮವಾಗಿದ್ದರೂ ಆತ ಶಿಕ್ಷಣ ಹಾಗೂ ಸಿಂಹಾಸನ ಏರುವ ಸಂದರ್ಭದಲ್ಲಿ ಸುದೀರ್ಘ ವರ್ಷ ವನವಾಸ ಅನುಭವಿಸ ಬೇಕಾಯಿತು. ಇದೇ ರೀತಿ ರಾಮ ಮಂದಿರ ನಿರ್ಮಾಣಕ್ಕೂ ಸಮಯ ತಗುಲಿದ್ದಾಗಿರಬೇಕು. ಇದೀಗ ಕುಂಡಲಿ ನಿರ್ಣಯ ಆಗಿದ್ದು, ಹೊಸ ಮಂದಿರ ಆದಷ್ಟು ಬೇಗ ನಿರ್ಮಾಣವಾಗಲಿದೆ ಎಂದರು.
ಸಂಸ್ಕೃತಿ ಮರೆಯಾಗದಿರಲಿ
ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ, ವಿಶ್ವದ ಕಲ್ಯಾಣವಾಗಲಿ ಎಂಬುದೇ ಹಿಂದೂ ಸಂಸ್ಕೃತಿ. ಆದರೆ ವಿದೇಶೀಯರ ಆಕ್ರಮಣದಿಂದಾಗಿ ನಮ್ಮ ಸಂಸ್ಕೃತಿಯು ಮರೆಯಾಗುವಂತಾಗಿದೆ. ಹಿಂದೂ ಧರ್ಮದ ಪುನರುತ್ಥಾನಕ್ಕಾಗಿ ವಿಶ್ವ ಹಿಂದೂ ಪರಿಷತ್ನ ಸೃಷ್ಟಿಯಾಗಿದೆ ಎಂದರು.
ವಿಹಿಂಪ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ್ ಕುಮಾರ್, ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ಚೌಧುರಿ, ಉಪಾಧ್ಯಕ್ಷರಾದ ಜೀವೇಶ್ವರ ಮಿಶ್ರಾ, ಬೀನಾ ಭಟ್, ಓಂ ಪ್ರಕಾಶ್ ಶಿಂಧೆ, ಜಗನ್ನಾಥ ಶಾಹಿ, ಚಂಪತ್ ರಾಯ್, ಮುಖ್ಯ ಟ್ರಸ್ಟಿ ರಮೇಶ್ ಮೋದಿ, ಕೋಶಾಧಿಕಾರಿ ಗೋಪಾಲ್ ಜುಂಜನ್ವಾಲ, ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಂದೆ, ಸಂಘಟನ ಕಾರ್ಯದರ್ಶಿ ವಿನಾಯಕ ರಾವ್ ದೇಶಪಾಂಡೆ, ದಕ್ಷಿಣ ಕರ್ನಾಟಕ ಅಧ್ಯಕ್ಷರಾದ ವಿಜಯಲಕ್ಷಿ$ಉಪಸ್ಥಿತರಿದ್ದರು.
ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ್ ಕೋಕೆj ಪ್ರಸ್ತಾವನೆಗೈದರು. ವಿಹಿಂಪ ದಕ್ಷಿಣ ಕರ್ನಾಟಕ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್ ಸ್ವಾಗತಿಸಿದರು. ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಂದಿಸಿದರು.
ಹಿಂದೂಗಳ ಮೇಲಿನ ಆಕ್ರಮಣ ತಡೆಯೋಣ
ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣು ಸದಾಶಿವ್ ಕೋಕೆ ಮಾತನಾಡಿ, ಹಿಂದೂಗಳ ಮತಾಂತರ ತಡೆಯಲು ನಮ್ಮಿಂದ ಪೂರ್ಣವಾಗಿ ಸಾಧ್ಯವಾಗಿಲ್ಲ. ಧರ್ಮ ನಿರಪೇಕ್ಷತೆ ಹೆಸರಿನಲ್ಲಿ ಹಿಂದೂಗಳ ಮೇಲೆ ಆಕ್ರಮಣಕಾರಿ ಷಡ್ಯಂತ್ರಗಳು ನಡೆಯುತ್ತಲೇ ಇವೆ. ಇದನ್ನು ವಿರೋಧಿಸಬೇಕಾಗಿದೆ. ಆದರೆ 2014ರಿಂದೀಚೆಗೆ ಸಂಕುಚಿತವಾಗಿದ್ದ ಹಿಂದೂ ಧರ್ಮದವರು ತಮ್ಮನ್ನು ತಾವು ಹಿಂದೂಗಳೆಂದು ಕರೆಸಿಕೊಳ್ಳಲು ಹೆಮ್ಮೆ ಪಡುವಂತಾಗಿದೆ. ಇದು ವಿಎಚ್ಪಿಯ ಶಕ್ತಿ ಸಾಮರ್ಥ್ಯದಿಂದ ಸಾಧ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.