ಸರ್ಕಾರಿ ನೌಕರರೆಂದು ಪರಿಗಣಿಸಲು ಒತ್ತಾಯ
Team Udayavani, Dec 28, 2019, 10:44 AM IST
ಬೆಂಗಳೂರು: ಸಾರಿಗೆ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಶುಕ್ರವಾರ ಟೌನ್‌ಹಾಲ್ ಮುಂಭಾಗ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೂಟದ ಅಧ್ಯಕ್ಷ ಆರ್.ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವು ಸಂಖ್ಯೆಯಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ್, ಸಾರಿಗೆ ಸಂಸ್ಥೆಯ ನೌಕರರನ್ನು ಸರ್ಕಾರ ಸರ್ಕಾರಿ ನೌಕರರು ಎಂದು ಶೀಘ್ರವಾಗಿ ಘೋಷಿಸಬೇಕೆಂದು ಆಗ್ರಹಿಸಿದರು. ವಾಯು ರಸ್ತೆ ಸಾರಿಗೆ ಸಂಸ್ಥೆಯ ಹೊಸ ನೇಮಕಾತಿಯನ್ನು ರದ್ದು ಮಾಡಿ, ಕೂಡಲೇ ಅಂತರ ನಿಗಮ ವರ್ಗಾವಣೆ ಪೂರ್ಣಗೊಳಿಸಬೇಕು ಎಂದು ಮನವಿ ಮಾಡಿದರು.
ಈಗಾಗಲೇ ಆಂಧ್ರಪ್ರದೇಶ ಸರ್ಕಾರ ಅಲ್ಲಿನ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಿದೆ. ಹಾಗೆಯೇ ತೆಲಂಗಾಣ ಸರ್ಕಾರ ಕೂಡ ಅಲ್ಲಿನ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಿಗೆ ನೀಡುವ ಸವಲತ್ತುಗಳನ್ನು ನೀಡುತ್ತಿದೆ. ರಾಜ್ಯ ಸರ್ಕಾರ ಕೂಡ ಸಾರಿಗೆ ನೌಕರರ ಸಮಸ್ಯೆ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಹೇಳಿದರು.
ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಖಜಾಂಚಿ ಸತೀಶ್ ಮಾತನಾಡಿ, ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಈಗಾಗಲೇ ಸರ್ಕಾರಗ ಗಮನ ಸೆಳೆಯಲಾಗಿದೆ. ಆದರೂ ಕೂಡ ಸರ್ಕಾರ ಸಾರಿಗೆ ನೌಕರರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.