ಪೌರತ್ವ ಕಿಚ್ಚಿಗೆ ನಲುಗಿದ್ದ ಪ್ರವಾಸೋದ್ಯಮ ಚೇತರಿಕೆ


Team Udayavani, Dec 29, 2019, 3:00 AM IST

powratva

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ಕಾಯ್ದೆಯ ಪರವಾಗಿ ಮೆರವಣಿಗೆಗಳು ನಡೆದು, ಸಿಎಎ ಪರ-ವಿರುದ್ಧದ ಪ್ರತಿಭಟನೆಗಳ ಕಿಚ್ಚಿಗೆ ನಲುಗಿ ಹೋಗಿದ್ದ ಪ್ರವಾಸೋದ್ಯಮ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದೆ. ಡಿ.2 ಮತ್ತು 3ನೇ ವಾರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಗಳ ಕಿಚ್ಚು ಜೋರಾಗಿದ್ದರಿಂದಾಗಿ ಕ್ರಿಸ್‌ಮಸ್‌ ಸಂದರ್ಭದಲ್ಲಿ ದಕ್ಷಿಣ ಭಾರತದಲ್ಲಿ ಪ್ರವಾಸಿಗರ ನೆಚ್ಚಿನ ತಾಣ, ಅರಮನೆಗಳ ನಗರಿ ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಇಳಿಮುಖವಾಗಿತ್ತು.

ಶನಿವಾರದಿಂದ ಪ್ರವಾಸೋದ್ಯಮ ಚೇತರಿಕೆ: ವರ್ಷಾಂತ್ಯದಲ್ಲಿ ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರಿಂದ ಶನಿವಾರದಿಂದ ಪ್ರವಾಸೋದ್ಯಮ ಚೇತರಿಕೆ ಕಂಡಿದೆ. ದಸರೆಯ ಬಳಿಕ ವರ್ಷಾಂತ್ಯದಲ್ಲಿ ಮೈಸೂರಿಗೆ ಬರುವ ಪ್ರವಾಸಿಗರನ್ನು ಆಕರ್ಷಿಸಲು ಜಿಲ್ಲಾಡಳಿತ ಅರಮನೆ ಆವರಣದಲ್ಲಿ ಏರ್ಪಡಿಸಿರುವ ಮಾಗಿ ಉತ್ಸವ, ಮೃಗಾಲಯದಿಂದ ಏರ್ಪಡಿಸಿರುವ ಪಕ್ಷಿ ವೀಕ್ಷಣೆ ಕಾರ್ಯಕ್ರಮಗಳು ಪ್ರವಾಸಿಗರನ್ನು ಸೆಳೆಯುತ್ತಿವೆ.

ಪ್ರವಾಸಿ ತಾಣಗಳಲ್ಲೆಲ್ಲಾ ಜನರ ದಂಡು: ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳಾದ ಚಾಮುಂಡಿಬೆಟ್ಟ, ಅರಮನೆ, ಮೃಗಾಲಯ, ಕೆಆರ್‌ಎಸ್‌, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನ, ತಲಕಾಡು, ಸೋಮನಾಥಪುರ ದೇವಸ್ಥಾನ, ಬಂಡೀಪುರ, ನಾಗರಹೊಳೆಗಳಲ್ಲಿ ಪ್ರವಾಸಿಗರು ಕಾಣಸಿಗುತ್ತಾರೆ.

ಕೇರಳದ ಮದ್ಯಪಾನ ಪ್ರಿಯರಿಗೆ ಮೈಸೂರೇ ಗತಿ: ಕೇರಳದ ಪ್ರವಾಸಿಗರಿಗೆ ಮೈಸೂರು ನೆಚ್ಚಿನ ತಾಣ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಕಾವು ಎರಡೂ ರಾಜ್ಯಗಳಲ್ಲಿ ಜೋರಾಗಿ ನಿಷೇಧಾಜ್ಞೆ ಜಾರಿ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಮೈಸೂರಿಗೆ ಬರುವ ಕೇರಳ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಪ್ರತಿಭಟನೆಯ ಕಾವು ಕಡಿಮೆಯಾಗಿದ್ದು,

ಅಲ್ಲಲ್ಲಿ ಪ್ರತಿಭಟನೆಗಳು ನಡೆದರೂ ತೀವ್ರಸ್ವರೂಪ ಪಡೆಯದೆ ಶಾಂತಿಯುತವಾಗಿ ನಡೆಯುತ್ತಿರುವುದರಿಂದ ಪ್ರವಾಸಿಗರು ವರ್ಷಾಂತ್ಯ ಮತ್ತು ಹೊಸ ವರ್ಷಾಚರಣೆಯನ್ನು ಸಂಭ್ರಮಿಸಲು ಮೈಸೂರಿನತ್ತ ಮುಖ ಮಾಡತೊಡಗಿದ್ದಾರೆ. ಕೇರಳದಲ್ಲಿ ಮದ್ಯ ಮಾರಾಟ ನಿಷೇಧ ಇರುವುದರಿಂದ ವರ್ಷಾಂತ್ಯ ಆಚರಣೆ ಮತ್ತು ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮದ್ಯಪಾನ ಪ್ರಿಯರು ನೆರೆಯ ಕರ್ನಾಟಕವನ್ನು ಆಶ್ರಯಿಸಿ ಬರುತ್ತಿದ್ದಾರೆ.

ಶೇ.90ರಷ್ಟು ಈಗಾಗಲೇ ಬುಕ್‌: ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ದೇಶಾದ್ಯಂತ ಪ್ರತಿಭಟನೆ, ಗಲಾಟೆ, ಹಿಂಸಾಚಾರಗಳು ನಡೆಯುತ್ತಿದ್ದರಿಂದ ಡಿಸೆಂಬರ್‌ ತಿಂಗಳಲ್ಲಿ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದ್ದು, ಕಳೆದ ನಾಲ್ಕೈದು ವರ್ಷಗಳಿಗೆ ಹೋಲಿಸಿದರೆ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಶೇ.30ರಷ್ಟು ಕುಸಿದಿದೆ ಎಂದು ಹೋಟೆಲ್‌ ಉದ್ಯಮಿಗಳು ಹೇಳುತ್ತಿದ್ದರು.

ಆದರೆ, ಶುಕ್ರವಾರದಿಂದ ಪರಿಸ್ಥಿತಿ ಸುಧಾರಿಸಿದ್ದು, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳಿಂದ ಪ್ರವಾಸಿಗರು ಬರುತ್ತಿದ್ದು, ಮೈಸೂರು ನಗರದಲ್ಲಿರುವ ಹೋಟೆಲ್‌, ವಸತಿ ಗೃಹಗಳಲ್ಲಿನ ಸುಮಾರು 9500 ಕೊಠಡಿಗಳ ಪೈಕಿ ಶೇ.90ರಷ್ಟು ಈಗಾಗಲೇ ಬುಕ್‌ ಆಗಿದ್ದು, ಈ ವರ್ಷ ಶೇ.100ರಷ್ಟು ಬುಕ್‌ ಆಗುವ ಸಾಧ್ಯತೆ ಇದೆ ಎನ್ನುತ್ತಾರೆ ಮೈಸೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ.

ಪ್ರವಾಸಿಗರನ್ನು ಸೆಳೆಯುವಲ್ಲಿ ವಿಫ‌ಲ: ದೇಶ-ವಿದೇಶಗಳಿಂದ ಮೈಸೂರಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ಯಾತ್ರಾ ಸ್ಥಳಗಳು, ಪ್ರವಾಸಿ ತಾಣಗಳನ್ನು ತೋರಿಸುವ ಸಲುವಾಗಿ ರಚಿಸಲಾದ ಕಾವೇರಿ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಗಾಢ ನಿದ್ದೆಯಲ್ಲಿದೆ. ಇದರ ಪರಿಣಾಮ ಪ್ರವಾಸಿಗರು ಖಾಸಗಿ ಸಂಸ್ಥೆಗಳನ್ನೇ ಆಶ್ರಯಿಸಬೇಕಿದೆ. ಇನ್ನೂ ಪ್ರವಾಸಿಗರನ್ನು ಆಕರ್ಷಿಸಲು ಜಿಲ್ಲಾಡಳಿತ ಆಯೋಜಿಸಿರುವ ಮಾಗಿ ಉತ್ಸವ ನೋಡಲು ಸ್ಥಳೀಯರೇ ಬರುತ್ತಿದ್ದು, ಪ್ರವಾಸಿಗರನ್ನು ಸೆಳೆಯುವಲ್ಲಿ ವಿಫ‌ಲವಾಗಿದೆ ಎಂಬ ಆರೋಪವೂ ಇದೆ.

ಈ ತಿಂಗಳ ಮಧ್ಯಭಾಗದಲ್ಲಿ ಪ್ರತಿಭಟನೆಗಳಿಂದಾಗಿ ಮೈಸೂರಿಗೆ ಬರುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿದೆ. ಮೈಸೂರಿನ ಯಾವುದೇ ತಾಣಕ್ಕೆ ಹೋದರೂ ಪ್ರವಾಸಿಗರಿದ್ದಾರೆ.
-ಎಚ್‌.ಪಿ.ಜನಾರ್ದನ್‌, ಉಪ ನಿರ್ದೇಶಕ, ಪ್ರವಾಸೋದ್ಯಮ ಇಲಾಖೆ

ಪ್ರತಿಭಟನೆಗಳಿಂದಾಗಿ ಮೈಸೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಮೈಸೂರಿಗೆ ಬರುವವರಿಗಿಂತ ಇಲ್ಲಿಂದ ಹೊರಗೆ ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೈಸೂರಿನಲ್ಲಿ ಇನ್ನೋವಾ, ಟೆಂಪೋ ಟ್ರಾವೆಲರ್‌ಗಳು ಬಾಡಿಗೆಗೆ ಸಿಗುತ್ತಿಲ್ಲ. ವರ್ಷಾಂತ್ಯಕ್ಕೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದೆ.
-ಬಿ.ಎಸ್‌.ಪ್ರಶಾಂತ್‌, ಅಧ್ಯಕ್ಷ, ಮೈಸೂರು ಟ್ರಾವೆಲ್‌ ಏಜೆಂಟ್ಸ್‌ ಅಸೋಸಿಯೇಷನ್‌

ಕಳೆದ ವಾರ ಇದ್ದ ಪರಿಸ್ಥಿತಿ ಈಗಿಲ್ಲ. ಪರಿಸ್ಥಿತಿ ಸುಧಾರಿಸಿದ್ದು, ಪಿಕಪ್‌ ಆಗ್ತಿದೆ. ಮೈಸೂರಿನಲ್ಲಿರುವ ಹೋಟೆಲ್‌ ಮತ್ತು ವಸತಿಗೃಹಗಳಲ್ಲಿ ಶೇ.90ರಷ್ಟು ರೂಮ್‌ ಬುಕ್ಕಿಂಗ್‌ ಆಗಿದೆ.
-ಸಿ.ನಾರಾಯಣ ಗೌಡ, ಅಧ್ಯಕ್ಷ, ಮೈಸೂರು ಹೋಟೆಲ್‌ ಮಾಲೀಕರ ಸಂಘ

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.