ರಾಜ್ಯದಲ್ಲಿ 534 ಪ್ರಾಂಶುಪಾಲರ ಹುದ್ದೆ ಖಾಲಿ

Team Udayavani, Dec 29, 2019, 3:06 AM IST

rajyadalli-534

ಬೆಂಗಳೂರು: ರಾಜ್ಯದ ಬಹುತೇಕ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಪ್ರಾಂಶುಪಾಲರಿಲ್ಲದೇ ನಡೆಯುತ್ತಿವೆ. ಸುಮಾರು 543 ಹುದ್ದೆ ಖಾಲಿಯಿದ್ದು, ವರ್ಗಾವಣೆ ಕೌನ್ಸೆಲಿಂಗ್‌ ಮೂಲಕ ಭರ್ತಿ ಮಾಡಲು ಅಥವಾ ಸರಿಹೊಂದಿಸಲು ಪಿಯು ಶಿಕ್ಷಣ ಇಲಾಖೆ ಮುಂದಾಗಿದೆ. ಕಳೆದ ಮೂರ್‍ನಾಲ್ಕು ವರ್ಷಗಳಿಂದಲೂ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರ ಹುದ್ದೆ ಖಾಲಿಯಾಗಿಯೇ ಉಳಿದಿದೆ.

ಖಾಲಿ ಇರುವ ಹುದ್ದೆಗಳನ್ನು ವರ್ಗಾವಣೆ ಕೌನ್ಸೆಲಿಂಗ್‌ ಮೂಲಕ ಭರ್ತಿ ಮಾಡಿಕೊಳ್ಳುವ ಉದ್ದೇಶದಿಂದ ನಿಗದಿತ ದಿನಾಂಕದೊಳಗೆ ಖಾಲಿ ಹುದ್ದೆಯ ಮಾಹಿತಿಯನ್ನು ಅಪ್‌ಡೇಟ್‌ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಿಸಿದೆ. ಹುದ್ದೆ ಖಾಲಿ ಇದ್ದೂ ಅಪ್‌ಡೇಟ್‌ ಮಾಡದೇ ಇದ್ದರೆ ಅಥವಾ ವಿಳಂಬ ನೀತಿ ಅನುಸರಿಸಿದರೆ, ಜಿಲ್ಲಾ ಉಪನಿರ್ದೇಶಕರೇ ಇದಕ್ಕೆ ನೇರ ಹೊಣೆಯಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು ದಕ್ಷಿಣದಲ್ಲಿ 4, ಬೆಂಗಳೂರು ಉತ್ತರದಲ್ಲಿ 6, ಗ್ರಾಮಾಂತರದಲ್ಲಿ 4, ರಾಮನಗರದಲ್ಲಿ 11, ಬಳ್ಳಾರಿಯಲ್ಲಿ 9, ಚಿಕ್ಕೊಡಿಯಲ್ಲಿ 19, ಬೆಳಗಾವಿಯಲ್ಲಿ 22, ಬಾಗಲಕೋಟೆಯಲ್ಲಿ 28, ವಿಜಯಪುರದಲ್ಲಿ 23, ಬೀದರ್‌ನಲ್ಲಿ 10, ದಾವಣಗೆರೆಯಲ್ಲಿ 16, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿನಲ್ಲಿ ತಲಾ 11, ಗದಗದಲ್ಲಿ 22, ಹಾವೇರಿಯಲ್ಲಿ 23, ಧಾರವಾಡದಲ್ಲಿ 14, ಕಲಬುರಗಿಯಲ್ಲಿ 21,

ಯಾದಗಿರಿಯಲ್ಲಿ 18, ಹಾಸನದಲ್ಲಿ 47, ಚಿಕ್ಕಬಳ್ಳಾಪುರದಲ್ಲಿ 3, ಕೋಲಾರದಲ್ಲಿ 16, ಚಾಮರಾಜನಗರ 9, ಮೈಸೂರಿನಲ್ಲಿ 20, ಮಂಡ್ಯದಲ್ಲಿ 30, ದಕ್ಷಿಣ ಕನ್ನಡದಲ್ಲಿ 20, ಕೊಪ್ಪಳದಲ್ಲಿ 15, ರಾಯಚೂರಿನಲ್ಲಿ 32, ಉತ್ತರ ಕನ್ನಡದಲ್ಲಿ 24, ಉಡುಪಿ 11, ಶಿವಮೊಗ್ಗ 10, ತುಮಕೂರು 18 ಹಾಗೂ ಕೊಡಗು ಜಿಲ್ಲೆಯಲ್ಲಿ 7 ಹುದ್ದೆ ಸೇರಿದಂತೆ 534 ಪ್ರಾಂಶುಪಾಲರ ಹುದ್ದೆಗಳು ಖಾಲಿಯಿವೆ.

ಹೊಸ ನೇಮಕಾತಿ ಇಲ್ಲದೆ, ವರ್ಗಾವಣೆ ಕೌನ್ಸೆಲಿಂಗ್‌ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗಿದೆ. ಇದರಿಂದ ಖಾಲಿ ಇರುವ ಹುದ್ದೆಗಳ ಸಂಖ್ಯೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಾಗುತ್ತಿದೆ. ಹಾಸನ, ಮಂಡ್ಯ, ರಾಯಚೂರು, ಹಾವೇರಿ, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ವಿಜಯಪುರ, ಬಾಗಲಕೋಟೆ ಮತ್ತು ಬೆಳವಾಗಿ ಮೊದಲಾದ ಜಿಲ್ಲೆಗಳ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರ ಕೊರತೆ ಹೆಚ್ಚಿದೆ.

ಸರ್ಕಾರಿ ಶಾಲೆ ದುರಸ್ತಿಗೆ 530 ಕೋಟಿ ಬಿಡುಗಡೆ
ಶಿವಮೊಗ್ಗ: ಸರಕಾರಿ ಶಾಲೆಗಳ ಆಸ್ತಿಪಾಸ್ತಿಗಳನ್ನು ಶಾಲೆಗಳ ಹೆಸರಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಕೆ. ಸುರೇಶ್‌ ಕುಮಾರ್‌ ತಿಳಿಸಿದರು. ಶನಿವಾರ ಸಾಗರ ತಾಲೂಕಿನ ಚದರವಳ್ಳಿ ಗ್ರಾಮದಲ್ಲಿ ಸರಕಾರಿ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳ ಆಕರ್ಷಣೆ ಕಡಿಮೆ ಮಾಡಿ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಕಳಿಸುವ ವಾತಾವರಣ ಸೃಷ್ಟಿಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಶಾಲೆಗಳ ದುರಸ್ತಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ 530 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಸೆಪ್ಟೆಂಬರ್‌ನಿಂದ ನವೆಂಬರ್‌ ಒಳಗಾಗಿ ಆಯೋಜಿಸಲು ಸೂಚನೆ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.