ಹಂಪಿ ಕನ್ನಡ ವಿವಿಗೆ ವಾಲ್ಮೀಕಿ ಹೆಸರಿಡಿ
ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಾಣವಾಗಲಿ: ಪ್ರಸನ್ನಾನಂದ ಶ್ರೀ
Team Udayavani, Dec 29, 2019, 4:31 PM IST
ಕುರುಗೋಡು: ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಿಶಿಷ್ಟ ಜಾತಿ, ಪಂಗಡದವರಿಗೆ ಉದ್ಯೋಗ ಮತ್ತು ಶಿಕ್ಷಣಕ್ಕೆ ಶೇ. 7.5 ಮಿಸಲಾತಿಯನ್ನು ಶೀಘ್ರವೇ ಹೆಚ್ಚಳ ಮಾಡಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದರು.
ಪಟ್ಟಣದ ರೈತ ಸಮುದಾಯ ಭವನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ರಾಜನಹಳ್ಳಿ ಗ್ರಾಮದಲ್ಲಿ ಫೆ. 8 ಮತ್ತು 9ರಂದು ನಡೆಯುವ 2ನೇ ವರ್ಷದ ಶ್ರೀ ವಾಲ್ಮೀಕಿ ಜಾತ್ರೋತ್ಸವದ ಪ್ರಯುಕ್ತ ತಾಲೂಕು ಮಟ್ಟದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪ.ಪಂಗಡದ ಜನಾಂಗದ ಹೆಸರಿನಲ್ಲಿ ಬೇರೆ ಜನಾಂಗದವರು ನಕಲಿ ಪ್ರಮಾಣ ಪತ್ರ ಪಡೆಯುತ್ತಿದ್ದು ಅಂಥವರ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕು. ವಾಲ್ಮೀಕಿ ಜನಾಂಗಕ್ಕೆ ಪ್ರತ್ಯೇಕ ಸಚಿವಾಲಯವನ್ನು ನಿರ್ಮಾಣ ಮಾಡಲು ಸರಕಾರ ಮುಂದಾಗಬೇಕು. ಈಗಾಗಲೇ ಇರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಹೆಸರನ್ನು ಇಡಬೇಕು. ಇದಲ್ಲದೆ ವಾಲ್ಮೀಕಿ ಸಮಾಜದ ಮುಖಂಡರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಮುಖ್ಯ ಪಾತ್ರ ವಹಿಸಬೇಕು. ದಕ್ಷಿಣ ಭಾರತದ ಅಳ್ವಿಕೆಯಲ್ಲಿ ಮುಸ್ಲಿಂರ ಪತನದ ವೇಳೆ ವಾಲ್ಮೀಕಿ ಸಮಾಜದವರು 77 ಪಾಳೆಗಾರರನ್ನು ಧ್ವಂಸ ಮಾಡಿದಂತಹ ಇತಿಹಾಸ ಇಗಲೂ ಇದೆ.
ರಾಜ್ಯದಲ್ಲಿ ವಿಧಾನಸಭಾ ಶಾಸಕರಲ್ಲಿ 15 ಶಾಸಕರು ಪ.ಪಂಗಡದವರು ಇದ್ದಾರೆ. ಇವರು ಸಮಾಜದ ವಿಷಯದಲ್ಲಿ ಯಾವುದೇ ಪಕ್ಷ ಭೇದವಿಲ್ಲದೆ ಪ್ರತಿಯೊಂದಕ್ಕೂ ಸಹಕಾರ ನೀಡುತ್ತ ಬರುತ್ತಿದ್ದಾರೆ. ಇವರ ಸಹಕಾರ ಯಾವಾಗಲೂ ಸಮಾಜದ ಅಭಿವೃದ್ಧಿ ಮೇಲೆ ಇರಲಿ. ಕಳೆದ ವರ್ಷಕ್ಕಿಂತ ಈ ಬಾರಿ ವಾಲ್ಮೀಕಿ ಜಾತ್ರೋತ್ಸವ ಅದ್ಧೂರಿಯಾಗಿ ಜರುಗಲಿದೆ. ಇದಕ್ಕೆ ಪ್ರತಿಯೊಂದು ಹಳ್ಳಿ ಮತ್ತು ತಾಲೂಕಿನ ವಾಲ್ಮೀಕಿ ಸಮಾಜದವರು ಭಾಗವಹಿಸಬೇಕು. ಅದರ ಜೊತೆಗೆ ನಮ್ಮಲ್ಲಿರುವಂಥ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಸಮಾವೇಶ ಜರುಗಲಿದೆ. ಒಂದು ವೇಳೆ ಸರಕಾರಗಳು ಈ ಬಾರಿ ನಮ್ಮ ಬೇಡಿಕೆಗಳನ್ನು ಈಡೇರಿಸಲು ಹಾಗೂ ಮೀಸಲಾತಿಯನ್ನು ಹೆಚ್ಚಳ ಮಾಡಲು ನಿರ್ಧರಿಸದಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯಾವ ಕೊಠಡಿಯಲ್ಲಿ ಅಡಗಿರುತ್ತಾರೆ ಅದಕ್ಕೆ ಮುತ್ತಿಗೆ ಹಾಕಲು ನಮ್ಮ ಸಮುದಾಯ ಶತಸಿದ್ಧ ಎಂದರು.
ಶಾಸಕ ಜೆ.ಎನ್.ಗಣೇಶ್ ಮಾತನಾಡಿದರು. ಈ ಸಂದರ್ಭದಲ್ಲಿ ಎನ್. ನಾಗರಾಜ, ಕರೆಪ್ಪ ನಾಯಕ, ನಾರಾಯಣಪ್ಪ, ದೊಡ್ಡ ಎರ್ರಿಸ್ವಾಮಿ, ಮುಷ್ಟಗಟ್ಟೆ ಹನುಮಂತಪ್ಪ, ಚಿದಾನಂದಪ್ಪ ಸೇರಿ ಸಮಾಜದ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.