ರಾಮಕುಂಜದ ವಾಮನಮೂರ್ತಿ ತ್ರಿವಿಕ್ರಮ ಶಕ್ತಿ


Team Udayavani, Dec 30, 2019, 6:15 AM IST

ramakunjada

ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರನ್ನು ನಾಡಿಗೆ ನೀಡಿದ ಪುಣ್ಯ ಪುಟ್ಟ ಹಳ್ಳಿ ರಾಮಕುಂಜಕ್ಕೆ ಸಲ್ಲಬೇಕು. ಹುಡುಗನಿಗಿನ್ನೂ ಆರು ವರ್ಷ. ಆಟವಾಡುವ ವಯಸ್ಸು. ತಂದೆ- ತಾಯಿ ಮಗನನ್ನು ಉಡುಪಿಗೆ ಕರೆತಂದರು. ಆಗ ಪೇಜಾವರ ಮಠದ ಪರ್ಯಾಯವೇ ನಡೆದಿತ್ತು. ಮಠದ ಸ್ವಾಮೀಜಿ ಕೃಷ್ಣ ಪೂಜೆ ಮಾಡುವುದನ್ನು ಆ ಹುಡುಗ ವೆಂಕಟರಾಮ (ವೆಂಕಟರಮಣ ಎಂದೂ ಕರೆಯಲಾಗುತಿತ್ತು) ಆಸಕ್ತಿ­ಯಿಂದ ಗಮನಿಸಿದ. ಏನೋ ಒಂದು ಅಂತ­ರಂಗದ ಸೆಳೆತ. ತಾನೂ ಹೀಗೆ ಕೃಷ್ಣನನ್ನು ಪೂಜಿಸಬಹುದೆ?

ತಂದೆ-ತಾಯಿ ವೆಂಕಟರಮಣನನ್ನು ಸ್ವಾಮಿಗಳ ಭೇಟಿಗೆ ಕರೆದುಕೊಂಡು ಹೋದರು. ವೆಂಕಟರಾಮ ಭಕ್ತಿಯಿಂದ ಸ್ವಾಮಿಗಳಿಗೆ ನಮಸ್ಕರಿಸಿದ. ಪುಟ್ಟ ಹುಡುಗನ ಮುಗ್ಧ ಮುಖ, ಅಲ್ಲಿ ತುಂಬಿದ ಭಕ್ತಿಭಾವ, ನಡೆಯ ಚುರುಕುತನ ಎಲ್ಲ ಗಮನಿಸಿದ ಸ್ವಾಮಿಗಳಿಗೆ ಏನನ್ನಿಸಿತೋ! ಆಕಸ್ಮಿಕವಾಗಿ ಅವರ ಬಾಯಿಂದ ಹೀಗೊಂದು ಮಾತು ಬಂತು. “ನೀನು ನನ್ನಂತೆ ಸ್ವಾಮಿಯಾಗುತ್ತೀಯಾ?’ ವೆಂಕಟರಾಮ ಉತ್ತರಿಸಿದ. “ಹ್ಞೂ ಆಗುತ್ತೇನೆ.” ಈ ಆಕಸ್ಮಿಕ ಸಂಭಾಷಣೆಗೆ ಒಳಗಿನಿಂದ ಪ್ರೇರಿಸಿದ, ಮೇಲೆ ನಿಂತ ದೇವತೆಗಳು “ತಥಾಸ್ತು’ ಎಂದರು.

ಪರ್ಯಾಯದ ಅವಧಿ ಮುಗಿಯಿತು. ಆಗಣ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಮಾನ್ಯ ತೀರ್ಥರು ಸಂಚಾರಕ್ಕೆ ಹೊರಟರು. ಪಯಣದ ದಾರಿಯಲ್ಲಿ ಹಂಪೆಯನ್ನು ತಲುಪಿದರು. ಅಲ್ಲಿ ಅವರ ನಿರ್ಧಾರ ಗಟ್ಟಿಗೊಂಡಿತು. ಅವರು ವಿಳಂಬ ಮಾಡದೆ ವೆಂಕಟರಾಮನನ್ನು ಕರೆಸಿಕೊಂಡರು. ಬಹುಧಾನ್ಯ ಸಂವತ್ಸರದ ಮಾರ್ಗಶಿರ ಶುದ್ಧ ಪಂಚಮಿಯಂದು (3-12-1938) ವೆಂಕಟರ ಮಣನಿಗೆ ಹಂಪೆಯ ಯಂತ್ರೋದ್ಧಾರ ಮುಖ್ಯ ಪ್ರಾಣನ ಸನ್ನಿಧಿಯಲ್ಲಿ ಆಶ್ರಮ ದೀಕ್ಷೆ ನಡೆಯಿತು.

ರಾಮಕುಂಜದ ಪುಟ್ಟ ಹಳ್ಳಿಯ ಮುಗ್ಧ ಬಾಲಕ. ಇನ್ನೂ ಏಳರ ಬಾಲಾಪ್ಯದ ಹಸುಳೆ, ಅಧೋಕ್ಷಜ ತೀರ್ಥರ ಸಂಸ್ಥಾನದ ಉತ್ತರಾಧಿಕಾರಿಯಾಗಿ ಪೇಜಾ ವರ ಮಠದ ಪರಂಪರೆಯ 32ನೆಯ ಯತಿಯಾಗಿ, ಆಚಾರ್ಯ ಮಧ್ವರ ವೇದಾಂತ ಪೀಠವನ್ನೇರಿದ. ವೆಂಕಟರಾಮ “ವಿಶ್ವೇಶತೀರ್ಥ’ರಾದರು. ಈ ಸಂದರ್ಭದಲ್ಲೇ ಇನ್ನೊಂದು ದೈವೀ ಘಟನೆ ನಡೆಯಿತು. ಆಗ ಭಂಡಾರಕೇರಿ ಮಠಾಧೀಶರಾಗಿದ್ದ ಶ್ರೀ ವಿದ್ಯಾಮಾನ್ಯತೀರ್ಥರು ಉಡುಪಿಗೆ ಚಿತ್ತೈಸಿದರು.

ಶ್ರೀಪಾದರು ಮಾಧ್ವ ಯತಿಗಳಲ್ಲೇ ಅಗ್ರಮಾನ್ಯ ಪಂಡಿತರೆಂದು ಖ್ಯಾತರಾದವರು. ಸ್ವತಃ ಹಿರಿಯ ಸಾಧಕರು. ಈ ಬಾಲ ಯತಿ ಅವರ ಕಣ್ಣಿಗೆ ಬಿದ್ದರು. ಈ ಪುಟ್ಟ ಯತಿಯ ಚುರುಕು ಬುದ್ಧಿಯ ಚಾಕಚಕ್ಯ ಹಿರಿಯ ಯತಿಯ ಮನ ಸೆಳೆಯಿತು. 1943ರ ಫೆಬ್ರವರಿ ತಿಂಗಳು ಶ್ರೀ ವಿದ್ಯಾಮಾನ್ಯ ತೀರ್ಥರು ಭಂಡಾರಕೇರಿಯಲ್ಲಿ ಶ್ರೀ ಮಧ್ವರಾದ್ಧಾಂತ ಸಂವರ್ಧಿನೀ ಸಭೆಯನ್ನು ಸ್ಥಾಪಿಸಿದರು. ವಿದ್ವಾಂಸರ ಮೇಳವೇ ಭಂಡಾರಕೇರಿಗೆ ಧಾವಿಸಿತು. ಆ ಬಾರಿಯ ಮಧ್ವನವಮಿಯ ವಿದ್ವತ್‌ ಸಭೆಯ ಅಧ್ಯಕ್ಷತೆಯನ್ನು 12ರ ಬಾಲಯತಿ ಶ್ರೀ ವಿಶ್ವೇಶತೀರ್ಥರಿಗೆ ಒಪ್ಪಿಸಿದರು.

ಈ ವಾಮನಮೂರ್ತಿಯ ವಿದ್ಯೆಯ ತ್ರಿವಿಕ್ರಮಾವ ತಾರವನ್ನು ಅವರು ಅಂದೇ ಗುರುತಿಸಿದ್ದರು.ಹೀಗೆ ಬೆಸೆದ ಬಾಂಧವ್ಯ ಮತ್ತಷ್ಟು ಗಟ್ಟಿಗೊಂಡು ಇಬ್ಬರು ಮಹಾನ್‌ ಯತಿಗಳನ್ನು ಇನ್ನಷ್ಟು ಹತ್ತಿರಕ್ಕೆ ತಂದು ಬೆಸೆಯಿತು. ಶ್ರೀ ವಿಶ್ವೇಶತೀರ್ಥರು ಶ್ರೀ ವಿದ್ಯಾಮಾನ್ಯತೀರ್ಥರಲ್ಲಿಯೇ ವ್ಯಾಸಂಗಕ್ಕೆ ನಿಂತರು. ಭಂಡಾರಕೇರಿಯ ಗುರುಕುಲ ವಾಸ ಅವರ ಏಕಾಂತ ಚಿಂತನೆಗೆ, ಬ್ರಹ್ಮಚರ್ಯದ ಪಾಲನೆಗೆ ಮತ್ತು ಆಳವಾದ ಅಧ್ಯಯನಕ್ಕೆ ಉತ್ತಮ ವಾತಾವರಣವನ್ನು ಒದಗಿಸಿತು. ಮಾಧ್ವ ವಿದ್ವಾಂಸರಲ್ಲೇ ಅಗ್ರ ಮಾನ್ಯರಾಗಿದ್ದ ವಿದ್ಯಾ ಮಾನ್ಯತೀರ್ಥರ ಮಾರ್ಗ­ದರ್ಶ­ನ­ದಲ್ಲಿ ಶ್ರೀ ಅಧ್ಯಯನ ಸಾಗಿತು.

ಎಂಟು ವರ್ಷಗಳ ಅವಿಚ್ಛಿನ್ನ ಅಧ್ಯಯನ, ವಿದ್ಯಾಮಾನ್ಯತೀರ್ಥರು ತನ್ನೆಲ್ಲ ಅರಿವನ್ನು ಇವರಿಗೆ ಧಾರೆಯೆರೆದರು. ವಿಶ್ವೇಶತೀರ್ಥರು ವಿದ್ಯೆಯ ಪರ್ವತವೇ ಆದರು. ಬಹಳ ಜನಕ್ಕೆ ತಿಳಿದಿಲ್ಲ; ಶಾಸ್ತ್ರ ಪಾಂಡಿತ್ಯದಲ್ಲಿ ವಿಶ್ವೇಶತೀರ್ಥರ ಸಮಕ್ಕೆ ನಿಲ್ಲಬಲ್ಲ ಪೀಠಾಧಿಪತಿ ಇಡಿಯ ದೇಶದಲ್ಲಿ ಇನ್ನೊಬ್ಬನಿಲ್ಲ. (ಪೇಜಾವರ ಶ್ರೀಗಳಿಗೆ 80 ತುಂಬಿದ ಸಂದರ್ಭ ಬನ್ನಂಜೆ ಗೋವಿಂದಾಚಾರ್ಯರು ನಮ್ಮ ಸೋದರ ಪತ್ರಿಕೆ ತರಂಗಕ್ಕೆ ಬರೆದ ಲೇಖನದ ಆಯ್ದ ಭಾಗ.)

ನನ್ನ ದಾರಿ ಅದಲ್ಲ…: ಒಮ್ಮೆ ಶ್ರೀಪಾದರ ಶಿಷ್ಯರು ಅವರನ್ನು ಒತ್ತಾಯಿಸಿದರು. “ತಾವು ವೇದಾಂತ ಗ್ರಂಥಗಳಿಗೆ ಸಂಸ್ಕೃತದಲ್ಲಿ ಟೀಕೆ ಬರೆಯಬೇಕು’. ಶಿಷ್ಯರ ಕೇಳಿಕೆ ತಪ್ಪಲ್ಲ. ಸಂಸ್ಕೃತದಲ್ಲಿರುವ ವೇದಾಂತ ಗ್ರಂಥಗಳಿಗೆ ಸಂಸ್ಕೃತದಲ್ಲೇ ಟೀಕೆ ಬರೆಯಬಲ್ಲ ಅಗಾಧ ಪಾಂಡಿತ್ಯವಿರುವ ಏಕ ಮಾತ್ರ ಪೀಠಾಧಿಪತಿ ಪೇಜಾವರ ಶ್ರೀಪಾದರು. ಆದರೆ ಅದಕ್ಕೆ ಶ್ರೀಪಾದರು ನೀಡಿದ ಉತ್ತರ ಕಣ್ಣು ತೆರೆಸುವಂಥದು: “ನನ್ನ ಮೇಲೆ ಇಂಥ ಒತ್ತಡ ತರಬೇಡಿ. ನಾನು ಏನು ಮಾಡಬೇಕು ಎನ್ನುವುದು ನನಗೆ ಗೊತ್ತು. ನನ್ನ ಜೀವನದ ಗುರಿ ನನ್ನ ಕಣ್ಣ ಮುಂದಿದೆ. ಅದು ಸಮಾಜದಲ್ಲಿ ನೊಂದವರ ಸೇವೆಯೇ ಹೊರತು ಗ್ರಂಥ ರಚನೆಯಲ್ಲ’.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ve-46

ರಾಜಕಾರಣ- ಭ್ರಷ್ಟಾಚಾರ- ಸ್ವರ್ಗ- ಪರಿಸರ- ಪುಣ್ಯ…

ve-44

ರಥಬೀದಿ, ಪೇಜಾವರ ಮಠದಲ್ಲಿ ನೀರವ ಮೌನ

ve-47

ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…

bg-68

ಪೇಜಾವರ ಶ್ರೀ ಬದುಕಿನ ಸಾರ

kolar-tdy-1

ದಲಿತ ಕೇರಿಗೆ ಭೇಟಿ ನೀಡಿದ್ದ ಪೇಜಾವರ ಶ್ರೀ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.