ನಾಡು ಕಂಡ ಶ್ರೇಷ್ಠ ಕವಿ ಕುವೆಂಪು
ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕುವೆಂಪು ಕೃಷಿಕುವೆಂಪು ಸಾಹಿತ್ಯ ವಿದ್ಯಾರ್ಥಿಗಳು ಅಭ್ಯಸಿಸಲಿ
Team Udayavani, Dec 30, 2019, 4:26 PM IST
ಹೊನ್ನಾಳಿ: ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ನ್ಯಾಮತಿ ತಾಲೂಕಿನ ಜೀನಹಳ್ಳಿ ಸರ್ಕಾರಿ ಪ್ರೌಢಶಾಲೆ ಸಂಸ್ಥಾಪಕ ದಿ| ಜೆ.ರಾಮಪ್ಪ ಅವರ ಪುತ್ರ ಷಣ್ಮುಖಪ್ಪ ಹೇಳಿದರು.
ನ್ಯಾಮತಿ ತಾಲೂಕಿನ ಜೀನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ದಿನಾಚರಣೆ ಹಾಗೂ ಗುರು ವಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಶಾಲೆಗಳು ಉಳಿಯಬೇಕಾದರೆ ಶಿಕ್ಷಕರು, ಪೋಷಕರು ಹಾಗೂ ಇಲಾಖೆ ಸೂಕ್ತವಾಗಿ ಸ್ಪಂದಿಸಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕಿದೆ. ಇಲ್ಲದಿದ್ದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಭರಾಟೆಯಲ್ಲಿ ಸರ್ಕಾರಿ ಶಾಲೆಗಳು ಇನ್ನಿಲ್ಲದಂತೆ ಮಾಯವಾಗಬಹುದು ಎಂದು ಎಚ್ಚರಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಎಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳನ್ನು ಶಾಲೆಯತ್ತ ಆಕರ್ಷಿಸಬೇಕು ಎಂದು ಹೇಳಿದರು.
ಕುವೆಂಪು ಅವರು ನಾಡು ಕಂಡ ಶ್ರೇಷ್ಠ ಕವಿ. ಅವರ ಕೃತಿಗಳನ್ನು ಎಲ್ಲರೂ ಓದಬೇಕು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು ಎಂದು ಕರೆ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯ ಮಹಾಂತೇಶ್ ಮಾತನಾಡಿ, 2010-11ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಒಟ್ಟುಗೂಡಿ ರೂ.1.60 ಲಕ್ಷ ವೆಚ್ಚದಲ್ಲಿ ಶಾಲೆಯಲ್ಲಿ ಸಮಾಜ ವಿಜ್ಞಾನ ಪ್ರಯೋಗ ಮಂದಿರ ನಿರ್ಮಾಣ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಗ್ರಾಮದ ಸುತ್ತಮುತ್ತ ಹೆಚ್ಚು ಖಾಸಗಿ ಶಾಲೆಗಳು ಪ್ರಾರಂಭವಾಗಿರುವುದರಿಂದ ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕ್ಷೀಣಿಸಿದೆ ಎಂದು ಹೇಳಿದರು.
ಪ್ರೌಢಶಾಲೆಯ 130 ವಿದ್ಯಾರ್ಥಿಗಳ ಪೈಕಿ ಗ್ರಾಮದ ಬಾಲಕರ ಹಾಗೂ ಬಾಲಕಿಯರ ಸರ್ಕಾರಿ ವಿದ್ಯಾರ್ಥಿನಿಲಯದಿಂದಲೇ 80 ವಿದ್ಯಾರ್ಥಿಗಳು ಬರುತ್ತಿದ್ದು, ವಿದ್ಯಾರ್ಥಿನಿಲಯಗಳಿಲ್ಲದಿದ್ದರೆ ನಮ್ಮ ಶಾಲೆಯ ಸ್ಥಿತಿ ಅಯೋಮಯವಾಗುತ್ತಿತ್ತು ಎಂದು ಹೇಳಿದರು.
ಎಸ್‌ಡಿಎಂಸಿ ಅಧ್ಯಕ್ಷ ಜಿ.ಪಿ.ಚನ್ನೇಶಪ್ಪ, ನಿವೃತ್ತ ಶಿಕ್ಷಕ ಶಿವಪ್ಪ, ಮುಖಂಡರಾದ ಈಶ್ವರಪ್ಪ, ಷಣ್ಮುಖಪ್ಪ, ಶಿಕ್ಷಕರಾದ ಎಂ.ಜಿ.ಮುರುಗೇಂದ್ರಯ್ಯ, ವೆಂಕಟೇಶ್, ನಾಗರಾಜ್ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 2010-11 ಸಾಲಿನಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.