ಜನರಲ್ ಬಿಪಿನ್ ರಾವತ್ ಗೆ ದೇಶದ ಮೂರು ಸೇನೆಗಳ ಪ್ರಥಮ ಮಹಾದಂಡನಾಯಕ ಪಟ್ಟ: ವರದಿ
ಈ ಬಗ್ಗೆ ಅಧಿಕೃತ ಘೋಷಣೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ವರದಿ ಹೇಳಿದೆ.
Team Udayavani, Dec 30, 2019, 4:27 PM IST
ನವದೆಹಲಿ: ದೇಶದ ಮೂರು ರಕ್ಷಣಾ ಪಡೆಗಳ ಪ್ರಥಮ ಮಹಾದಂಡನಾಯಕರನ್ನಾಗಿ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿರುವುದಾಗಿ ಆಂಗ್ಲಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಅಧಿಕೃತ ಘೋಷಣೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ವರದಿ ಹೇಳಿದೆ.
ಭಾರತೀಯ ಸೇನಾಪಡೆಯ ಮುಖ್ಯಸ್ಥರಾಗಿ ಬಿಪಿನ್ ರಾವತ್ ಅವರು ಮೂರು ವರ್ಷಗಳ ಸೇವಾವಧಿಯನ್ನು ಪೂರ್ಣಗೊಳಿಸಿದ್ದು, ಇದೀಗ ಸೇವೆಯಿಂದ ನಿವೃತ್ತಿಗೊಳ್ಳಲು ಒಂದು ದಿನ ಇರುವ ಮುನ್ನ ಜನರಲ್ ರಾವತ್ ಅವರನ್ನು ಸೇನಾಮಹಾದಂಡನಾಯಕನನ್ನಾಗಿ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಡಿಸೆಂಬರ್ 24ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಸಿಡಿಎಸ್ (ಸೇನಾಮಹಾದಂಡನಾಯಕ) ಹುದ್ದೆ ಹಾಗೂ ಇದರ ಕರ್ತವ್ಯಗಳ ನಿರ್ಣಯಕ್ಕೆ ಅನುಮತಿ ನೀಡಲಾಗಿದೆ ಎಂದು ವರದಿ ವಿವರಿಸಿದೆ.
ಮೂರು ಸೇನೆಗಳ ವಿಷಯಗಳ ಸೇನಾ ಮುಖ್ಯ ಸಲಹೆಗಾರರಾಗಿ ಸಿಡಿಎಸ್ (ಸೇನಾಮಹಾದಂಡನಾಯಕ) ಕಾರ್ಯನಿರ್ವಹಿಸಲಿದ್ದಾರೆ. ತಮ್ಮ ಪಡೆಗಳ ಪ್ರಮುಖ ವಿಷಯಗಳ ಬಗ್ಗೆ ಮೂರು ಸೇನಾ ವರಿಷ್ಠರು ರಕ್ಷಣಾ ಸಚಿವರ ಜತೆ ಸಲಹೆಯನ್ನು ಪಡೆಯುವುದು ಮುಂದುವರಿಯಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.