ಕಾಲಘಟ್ಟ ತಕ್ಕಂತೆ ಕವಿತೆ ಸೃಷ್ಟಿಯಾಗಲಿ
Team Udayavani, Dec 31, 2019, 3:00 AM IST
ಮೈಸೂರು: ಕವಿಯು ಬರೆಯುತ್ತಾನೆ, ಸಹೃದಯ ಓದುಗ ಓದುತ್ತಾನೆ. ಆದರೆ, ಇತ್ತೀಚಿನ ದಿನಗಳಲ್ಲಿ ಓದುಗರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ಕೊಡಗಿನ ನಾಪೋಕ್ಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ಕಾವೇರಿ ಪ್ರಕಾಶ್ ತಿಳಿಸಿದರು. ಹೊಮ್ಮರಗಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸೋಮವಾರ ಆಯೋಜಿಸಿದ್ದ 5ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಕವಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಕಾಲಘಟ್ಟದಲ್ಲಿ ನಡೆದ ಘಟನಾವಳಿಗಳಿಗೆ ಅನುಸಾರವಾಗಿ ಕವಿತೆ ಕವನಗಳನ್ನು ರಚಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಓದುಗರನ್ನು ತಲುಪಬಹುದು ಎಂದು ಅಭಿಪ್ರಾಯಪಟ್ಟರು. ಜಗತ್ತಿನ ಸೃಷ್ಟಿ ಪಡೆದಿರುವ ಮಹತ್ವದಂತೆ ಕವಿತೆ ಜನ್ಮವು ಕೂಡ ಮಹತ್ವದ ಪಾತ್ರ ವಹಿಸಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಕವಿತೆಗಳನ್ನು ಬರೆಯುತ್ತಿರುವುದು ಹರ್ಷ ತಂದಿದೆ ಎಂದು ತಿಳಿಸಿದರು.
ಕವಿಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷೆ ಪ್ರೊ.ನೀ.ಗಿರಿಗೌಡ, ಡಾಕ್ಟರ್ ಕೆ.ಗೋವಿಂದೇಗೌಡ, ಬಿ.ಕೆ.ಮೀನಾಕ್ಷಿ,, ರವಿಶಂಕರ್ ಗುರು, ರಾಘವೇಂದ್ರ, ಚೇತನ, ಶರ್ಮಾ ಹೇಮಮಾಲಿನಿ, ಕಿರಣ್ ಮಂಜುಳಾ, ನರಸಿಂಹನಾಯಕ ಸೇರಿದಂತೆ ಮತ್ತಿತರರನ್ನು ಸನ್ಮಾನಿಸಲಾಯಿತು.
ಗೋಷ್ಠಿ 1: ಜೆಡಿಎಸ್ ತಾಲೂಕು ಅಧ್ಯಕ್ಷ ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿ-1ರಲ್ಲಿ ಶ್ರೀರಂಗಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ಎಚ್.ಕೆ.ಅನ್ನಪೂರ್ಣ ಜೀವನ ಮೌಲ್ಯಗಳು ಮತ್ತು ದಾಸ ಸಾಹಿತ್ಯ ಕುರಿತು ವಿಚಾರ ಮಂಡನೆ ಮಾಡಿದರೆ, ಪ್ರಾಧ್ಯಾಪಕಿ ಡಾ.ಜ್ಯೋತಿ ಶಂಕರ್ ಜೀವನ ಮೌಲ್ಯಗಳು ಮತ್ತು ವಚನ ಸಾಹಿತ್ಯ ಕುರಿತು ವಿಚಾರ ಮಂಡಿಸಿದರು. ಸಂಸ್ಕೃತಿ ಚಿಂತಕ ಡಾ.ಎಂ.ಎನ್.ರವಿಶಂಕರ್ ವರ್ತಮಾನ ಕನ್ನಡದ ಆತಂಕಗಳು ಮತ್ತು ಮಾರ್ಗೋಪಾಯಗಳನ್ನು ಕುರಿತು ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಮಿನಿ ದಸರಾದಂತೆ ನಡೆಯಿತು. ಶಾಲಾ ಮಕ್ಕಳು ವಿವಿಧ ಬಗೆಯ ವೇಷಭೂಷಣ ಧರಿಸಿ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಒಟ್ಟಾರೆ ಹೊಮ್ಮರಗಳ್ಳಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.