ಪೊಲೀಸ್ ಜೀಪ್ ಎಗರಿಸಿದ ಭೂಪ!
Team Udayavani, Dec 31, 2019, 3:05 AM IST
ಚಿಕ್ಕಮಗಳೂರು: ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪೊಲೀಸ್ ಜೀಪನ್ನೇ ಅಪಹರಿಸಿ ಪರಾರಿಯಾದ ಘಟನೆ ನಗರದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಪೊಲೀಸ್ ಜೀಪ್ (ಸಂಖ್ಯೆ ಕೆ.ಎ.18 ಜಿ.728) ನಗರದ ಹನುಮಂತಪ್ಪ ವೃತ್ತದ ಪೆಟ್ರೋಲ್ ಬಂಕ್‌ಗೆ ಡೀಸೆಲ್ ತುಂಬಿಸಿಕೊಳ್ಳಲು ಬಂದಾಗ ಈ ಘಟನೆ ನಡೆದಿದೆ.
ಪೊಲೀಸ್ ಜೀಪಿನ ಚಾಲಕ ಇಂಧನ ತುಂಬಿಸಿಕೊಂಡು ಕೀಲಿಯನ್ನು ಜೀಪಿನಲ್ಲಿಯೇ ಬಿಟ್ಟು ಹಣ ನೀಡಲು ಬಂಕ್‌ನ ಕಚೇರಿಗೆ ಹೋದಾಗ, ಅಲ್ಲೇ ಇದ್ದ ವ್ಯಕ್ತಿಯೋರ್ವ ಜೀಪನ್ನು ಚಾಲನೆ ಮಾಡಿಕೊಂಡು ಕಡೂರು-ಮಂಗಳೂರು ರಸ್ತೆಯಲ್ಲಿ ವೇಗವಾಗಿ ತೆರಳಿ ಲಕ್ಯಾವರೆಗೂ ಹೋಗಿದ್ದ.
ತಕ್ಷಣ ಎಚ್ಚೆತ್ತ ಚಾಲಕ ಈ ಮಾಹಿತಿಯನ್ನು ಇಲಾಖೆಗೆ ತಿಳಿಸಿ, ಕಳುವಾದ ಜೀಪು ಹಿಂಬಾಲಿಸಲು ಮುಂದಾದಾಗ, ಜೀಪನ್ನು ರಸ್ತೆಯಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿದಾಗ, ಪ್ರಕರಣ ನಡೆದಿರುವುದು ನಿಜ. ನಿರ್ಲಕ್ಷé ತೋರಿದ ಜೀಪ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.