ಕನ್ನಡ ಸಾಹಿತ್ಯ ಲೋಕಕ್ಕೆ ಬೇವು-ಬೆಲ್ಲದ ಸಮ್ಮಿಲನ

Team Udayavani, Dec 31, 2019, 3:07 AM IST

kannada

ಬೆಂಗಳೂರು: ಕನ್ನಡ ಸಾಹಿತ್ಯ ಲೋಕ 2019 ರಲ್ಲಿ “ಬೇವು-ಬೆಲ್ಲ’ ಎರಡನ್ನೂ ಸವಿದಿದೆ. “ಶರಣರ ನಾಡು’ ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್‌.ಎಸ್‌.ವೆಂಕಟೇಶಮೂರ್ತಿ ಅವರು ಆಯ್ಕೆಯಾದರು. ನಾಟಕಕಾರ ಗಿರೀಶ್‌ ಕರ್ನಾಡ , ಹಿರಿಯ ವಿಮರ್ಶಕ ಪ್ರೊ.ಎಲ್‌.ಎಸ್‌.ಶೇಷಗಿರಿರಾವ್‌ ಸೇರಿ ಹಲವು ಸಾಹಿತಿಗಳು ನಿಧನರಾದರು.

ಜಾನಪದ ಅಕಾಡೆಮಿಗೆ ಮಂಗಳ ಮುಖಿ ಮಂಜಮ್ಮ ಜೋಗತಿ ಅಧ್ಯಕ್ಷರಾಗಿ ನೇಮಕ, ಸಚಿವ ಸಿ.ಟಿ.ರವಿ ಅವರ “ಮನೆ ಹಾಳರು’ ಕುರಿತ ವಿವಾದದ ಹೇಳಿಕೆ, ಪ್ರಾಧಿಕಾರ ಮತ್ತು ಅಕಾಡೆಮಿ ಅಧ್ಯಕ್ಷರು, ಸದಸ್ಯರು ಅಧಿಕಾರ ಪೂರೈಸದೇ ನಿರ್ಗಮಿಸಿ ರುವುದು 2019ನೇ ಸಾಲಿನ ಹಿನ್ನೋಟದ ಪ್ರಮುಖ ಹೈಲೆಟ್ಸ್‌.

ಮನೆಹಾಳರು ಹೇಳಿಕೆ ಕಿಡಿ: ಅಕಾಡೆಮಿಗಳಿಗೆ ಅಧ್ಯಕ್ಷರು, ಸದಸ್ಯರ ಆಯ್ಕೆಯಲ್ಲಿ ಈ ಬಾರಿ ಮನೆಹಾಳು ಜನರಿಗೆ ಅವಕಾಶ ನೀಡಿಲ್ಲ. ಅವರನ್ನು ದೂರ ಇಟ್ಟಿದ್ದೇನೆಂಬ ಸಚಿವ ಸಿ.ಟಿ.ರವಿ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಹೇಳಿಕೆ ಖಂಡಿಸಿ ಸಾಹಿತಿ, ಕಲಾವಿದರ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದೂರು ಕೂಡ ನೀಡಿತು.

ಅವಧಿ ಮುನ್ನವೇ ನಿರ್ಗಮನ: “ಜೆಡಿಎಸ್‌-ಕಾಂಗ್ರೆಸ್‌’ ಮೈತ್ರಿಕೂಟ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ 3 ಪ್ರಾಧಿಕಾರ ಮತ್ತು 13 ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರು ತಮ್ಮ ಅವಧಿ ಪೂರ್ಣಗೊಳ್ಳುವ ಮುನ್ನವೇ ನಿರ್ಗಮಿಸಬೇಕಾಯಿತು.

ಸರ್ಕಾರ ನಿಲುವಿಗೆ ಭೈರಪ್ಪ ಖಂಡನೆ: ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲಿ ಇಂಗ್ಲಿಷ್‌ ಕಲಿಕೆ ಆರಂಭಕ್ಕೆ ಮುಂದಾದ ಸರ್ಕಾರದ ನಿಲುವು ಸಾಹಿತಿಗಳ ಆಕ್ರೋಶಕ್ಕೆ ಕಾರಣವಾಯಿತು. ಕಸಾಪ ಅಧ್ಯಕ್ಷ ಮನು ಬಳಿಗಾರ್‌ ನೇತೃತ್ವ ದಲ್ಲಿ ನಡೆದ ಸಾಹಿತಿ, ಕನ್ನಡ ಪರ ಹೋರಾಟಗಾರರ ಸಭೆಯಲ್ಲಿ ಸರ್ಕಾರ ನಿಲುವಿಗೆ ಖಂಡನೆ ವ್ಯಕ್ತವಾಯಿತು. ಹಿರಿಯ ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ಅವರು ಈ ಸಭೆಯಲ್ಲಿ ಪಾಲ್ಗೊಂಡು ಸರ್ಕಾರ ನಿಲುವನ್ನು ಖಂಡಿಸಿದ್ದು ವಿಶೇಷ.

ಇತಿಹಾಸ ಸೃಷ್ಟಿಸಿದ ಮಂಗಳ ಮುಖಿ: ಜಾನಪದ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯ ಹಿರಿಯ ರಂಗ ಕಲಾವಿದೆ ಮಂಗಳಮುಖಿ ಮಂಜಮ್ಮ ಜೋಗತಿ ಅವರು ನೇಮಕವಾಗುವ ಮೂಲಕ ಇತಿಹಾಸದ ಪುಟ ಸೇರಿದರು. ಅಲ್ಲದೆ, ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿಯ ಅಧಿಕಾರ ವಿಸ್ತರಣೆ ವಿಚಾರದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಯಿತು. ಹಾಲಿ ಅಧ್ಯಕ್ಷ ಮನು ಬಳಿಗಾರ್‌ ನೇತೃತ್ವದ ಕಾರ್ಯಕಾರಿ ಸಮಿತಿಯ ಸದಸ್ಯರ ಮುಂದುವರಿಕೆ ವಿಚಾರ ಕೋರ್ಟ್‌ ಮೆಟ್ಟಿಲೇರಿದ್ದು ಸಾಹಿತ್ಯ ಲೋಕದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.

ಕಣವಿಗೆ ನೃಪತುಂಗ ಸಾಹಿತ್ಯ ಪ್ರಶಸ್ತಿ: ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2019ನೇ ಸಾಲಿನ “ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಕವಿ ಚನ್ನವೀರ ಕಣವಿ ಭಾಜನರಾದರು. ಪ್ರಶಸ್ತಿ 7 ಲಕ್ಷದ 1 ರೂ. ನಗದು ಮತ್ತು ಸ್ಮರಣಿಕೆ ಒಳ ಗೊಂಡಿತ್ತು. ಯುವ ಕಾದಂಬರಿ ಕಾರ ಶ್ರೀಧರ ಬನವಾಸಿ ಅವರ ‘ಬೇರು’ ಕಾದಂಬರಿ 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ “ಯುವ ಪುರಸ್ಕಾರ’ಕ್ಕೆ ಭಾಜನವಾಯಿತು. ಹಾಗೆಯೇ ಚಂದ್ರಕಾಂತ ಕರದಳ್ಳಿ ಅವರ “ಕಾಡು ಕನಸಿನ ಬೀದಿಗೆ’ ಕೃತಿಗೆ “ಬಾಲಸಾಹಿತ್ಯ ಪುರಸ್ಕಾರ’ ಆಯ್ಕೆಯಾಗಿತ್ತು.

“ಕುದಿ ಎಸರು’ ಕೃತಿಗೆ ಪ್ರಶಸ್ತಿ: ವರ್ಷದ ಕೊನೆಯಲ್ಲಿ ಹಿರಿಯ ಪತ್ರಕರ್ತೆ ಡಾ.ವಿಜಯಾ ಅವರ ಆತ್ಮಕತೆ “ಕುದಿ ಎಸರು’ ಕೃತಿ 2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಯಿತು. ಪ್ರಶಸ್ತಿ 1 ಲಕ್ಷ ರೂ.ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ಕವಿ, ನಾಟಕಕಾರರ ನಿಧನ: ನಾಟಕಕಾರ ಗಿರೀಶ್‌ ಕಾರ್ನಾಡ್‌, ಹಿರಿಯ ವಿಮರ್ಶಕ ಪ್ರೊ.ಎಲ್‌.ಎಸ್‌. ಶೇಷಗಿರಿ ರಾವ್‌, ಕವಿ ಕೆ.ಬಿ.ಸಿದ್ದಯ್ಯ, ಡಾ. ಚನ್ನಣ್ಣ ವಾಲೀಕಾರ, ಬಿ.ಎ.ಸನದಿ ಅವರ ನಿಧನ 2019ರ ಕಹಿ ನೆನಪುಗಳ ಪುಟ ಸೇರಿತು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.