ಎ, ಬಿ ಹುದ್ದೆ : ಸಂದರ್ಶನವಿಲ್ಲ
ಕೆಲವು ವೃತ್ತಿಪರ ಹುದ್ದೆಗಳಿಗೆ ಮಾತ್ರ ಅನ್ವಯ: ಸಂಪುಟ
Team Udayavani, Dec 31, 2019, 6:30 AM IST
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಎ ಮತ್ತು ಬಿ ದರ್ಜೆಯ ಕೆಲವು ವೃತ್ತಿಪರ ಹುದ್ದೆಗಳಿಗೆ ಸಂದರ್ಶನ ರದ್ದುಪಡಿಸಿ ಲಿಖಿತ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಸೋಮವಾರ ತೀರ್ಮಾನಿಸಿದೆ.
ಪ್ರಸ್ತುತ ಸಿ ಮತ್ತು ಡಿ ಗ್ರೂಪ್ ಹುದ್ದೆಗಳಿಗೆ ಸಂದರ್ಶನವಿಲ್ಲದೆ ನೇಮಕ ಮಾಡಿಕೊಳ್ಳುತ್ತಿರುವಂತೆ ಇನ್ನು ಮುಂದೆ ಎ ಮತ್ತು ಬಿ ಹುದ್ದೆಗಳಿಗೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿ ಸಿದರು. ಸಂಪುಟ ಸಭೆಯ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಯಾವ ಯಾವ ಇಲಾಖೆಗಳಿಗೆ ಇದು ಅನ್ವಯ ಎಂಬುದರ ಬಗ್ಗೆ ಇನ್ನೂ ನಿಯಮಾವಳಿ ರೂಪಿಸಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಮಂಡಳಿಗೆ ಶಾಸಕರ ನೇತೃತ್ವ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಲು ಸಚಿವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಈ ನಿಯಮ ಪಾಲನೆ ಯಿಂದ ಶಾಸಕರು ಬೇಸರಗೊಂಡಿರುವುದರಿಂದ ಶಾಸಕರೂ ಮಂಡಳಿಯ ಅಧ್ಯಕ್ಷರಾಗಲು ಅವಕಾಶ ದೊರೆಯುವಂತೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.
ಕಲ್ಯಾಣ ಕರ್ನಾಟಕ ಮಂಡಳಿಗೆ ಆ ಭಾಗದ ಶಾಸಕರಲ್ಲದ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಅಧ್ಯಕ್ಷರನ್ನಾಗಿ ನೇಮಿ ಸಿದ್ದರಿಂದ ಆಕ್ಷೇಪಗಳು ಕೇಳಿ ಬಂದವು. ಹೀಗಾಗಿ ಶಾಸಕರನ್ನೂ ಅಧ್ಯಕ್ಷರನ್ನಾಗಿ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಸಂಪುಟದ ಪ್ರಮುಖ ನಿರ್ಣಯಗಳು
– 2020ರ ನ. 3ರಿಂದ 5ರ ವರೆಗೆ ಬೆಂಗಳೂರಿನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ
– ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರ ಗಳಲ್ಲಿ ಖಾಸಗಿ ಸಂಸ್ಥೆಗಳ ನೆರವಿನಿಂದ ಜಿಟಿಟಿಸಿ ತರಬೇತಿ ಕೇಂದ್ರಗಳನ್ನು ತೆರೆಯಲು ನಿರ್ಧಾರ, ಶೇ.90 ಖಾಸಗಿ ಸಂಸ್ಥೆಗಳು ಬಂಡವಾಳ ಹಾಕಲಿವೆ. 353 ಕೋಟಿ ರೂ. ಯೋಜನೆಗೆ ರಾಜ್ಯ ಸರಕಾರ 36 ಕೋಟಿ ರೂ. ನೀಡಲಿದೆ.
– ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಲ್ಲಿ ನೇಮಕಾತಿಯಲ್ಲಿ ನಿಯಮಗಳ ತಿದ್ದುಪಡಿಗೆ ಒಪ್ಪಿಗೆ
– ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್, ಮಡಿಕೇರಿಯಲ್ಲಿ 12.5 ಕೋ.ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ಅಭಿವೃದ್ಧಿಗೆ ಒಪ್ಪಿಗೆ
– ಮಂಗಳೂರಿನ ವೆನಾಕ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ ಹಾಗೂ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನ.
– ಸಮಾಜ ಕಲ್ಯಾಣ ಇಲಾಖೆ ವತಿಯಿಂದ 20 ಸಂಚಾರಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿ ಗುಡ್ಡಗಾಡು ಪ್ರದೇಶಗಳಲ್ಲಿ ಬಳಕೆಗೆ ತೀರ್ಮಾನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.