ಕಾಶ್ಮೀರದಲ್ಲಿ ಕೆಲಸ ಮಾಡಿ: ಹೈಕೋರ್ಟ್‌ನ 33 ಹುದ್ದೆಗಳಿಗೆ ನೇಮಕಕ್ಕೆ ಅರ್ಜಿ ಆಹ್ವಾನ
Team Udayavani, Dec 31, 2019, 8:52 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲಸ ಮಾಡಲು ಬಯಸುತ್ತೀರಾ? ಹಾಗಿದ್ದರೆ ನಿಮ್ಮ ಕನಸು ಶೀಘ್ರದಲ್ಲಿಯೇ ನನಸಾಗಲಿದೆ. ವಿಶೇಷ ಸ್ಥಾನಮಾನ ವ್ಯವಸ್ಥೆ ರದ್ದುಗೊಂಡ ಬಳಿಕ ಮೊದಲ ಬಾರಿಗೆ ಅಲ್ಲಿನ ಸರಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಮೊದಲ ಹಂತದಲ್ಲಿ ಕಣಿವೆ ರಾಜ್ಯದ ಹೈಕೋರ್ಟ್‌ನಲ್ಲಿರುವ 33 ಪತ್ರಾಂಕಿತೇತರ ಹುದ್ದೆಗಳು (ನಾನ್ ಗೆಝೆಟೆಡ್ ಪೋಸ್ಟ್) ರಾಜ್ಯದ ಹೊರಗಿನ ಉದ್ಯೋಗಾಕಾಂಕ್ಷಿಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಸ್ಟೆನೋಗ್ರಾಫರ್‌ಗಳು, ಟೈಪಿಸ್ಟ್‌ಗಳು, ಚಾಲಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 33 ಹುದ್ದೆಗಳ ಪೈಕಿ 17 ಹುದ್ದೆಗಳನ್ನು ‘ಒಪನ್ ಮೆರಿಟ್’ ವ್ಯಾಪ್ತಿಗೆ ತರಲಾಗಿದೆ. ಅಂದರೆ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಹೊರಗಿನ ಯಾವುದೇ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸೇರದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದವರು ಆಯಾ ಜಿಲ್ಲಾ ವ್ಯಾಪ್ತಿಯ ಕೋರ್ಟ್‌ಗಳ ಮೂಲಕ ಅರ್ಜಿ ಸಲ್ಲಿಸಬೇಕು.
ಇತ್ತೀಚೆಗಷ್ಟೇ ಕಣಿವೆ ರಾಜ್ಯದ ಬಿಜೆಪಿ ಘಟಕ ಹೊಸದಿಲ್ಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮಾತ್ರ ಮೀಸಲು ವ್ಯವಸ್ಥೆ ನೀಡದೆ, ಇತರ ನಿವಾಸಿಗಳಿಗೂ ಮೀಸಲು ನೀಡಬೇಕು ಎಂದು ಮನವಿ ಮಾಡಿಕೊಂಡಿತ್ತು. 15-20 ವರ್ಷಗಳ ಕಾಲ ವಾಸ ಮಾಡಿಕೊಂಡಿದ್ದವರನ್ನೂ ನೇಮಕ ವೇಳೆ ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿಕೊಳ್ಳಲಾಗಿತ್ತು. ಇದೇ ವೇಳೆ ಈ ಸಲಹೆಗೆ ವಿರೋಧವೂ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.