ದಲಿತರ ಮನೆಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ


Team Udayavani, Dec 31, 2019, 12:53 PM IST

cm-tdy-1

ಚಿಕ್ಕಮಗಳೂರು: ಕಡೂರು ತಾಲೂಕಿನ ಎಮ್ಮೆದೊಡ್ಡಿ ಗ್ರಾಪಂ ವ್ಯಾಪ್ತಿಯ ಹರಳಘಟ್ಟ ಗಾಂಧಿನಗರ ಗ್ರಾಮದಲ್ಲಿರುವ ದಲಿತರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಜಾಗೃತ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಮ್ಮೆದೊಡ್ಡಿ ಗ್ರಾಪಂ ವ್ಯಾಪ್ತಿಯಲ್ಲಿ ದಲಿತ ಕುಟುಂಬಗಳೇ ಇಲ್ಲ ಎಂದು ಕಡೂರು ವಿಭಾಗದ ಮೆಸ್ಕಾಂ ಅಧಿಕಾರಿಗಳು ವರದಿ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಮೆಸ್ಕಾಂ ಜಂಟಿಯಾಗಿ ಸ್ಥಳ ಪರಿಶೀಲಿಸಿ ವಸ್ತುನಿಷ್ಠ ವರದಿ ನೀಡಬೇಕು. ಅಲ್ಲದೇ ಅವರಿಂದ ಅರ್ಜಿ ಸ್ವೀಕರಿಸಿ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು ಎಂದು ಸೂಚಿಸಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ನಿಗಮದಿಂದ ಕೊರೆಸಿರುವ ಕೊಳವೆಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ಮೆಸ್ಕಾಂ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ಕೊಳವೆಬಾವಿಗಳನ್ನು ಕೊರೆಸಿ ನೀರಿನ ಸೌಲಭ್ಯವನ್ನು ಕಲ್ಪಿಸಿದ್ದು, ಮೆಸ್ಕಾಂ ಗುತ್ತಿಗೆದಾರರು ಕೊಳವೆಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ನಿರಾಸಕ್ತಿ ತೋರಿರುವ ಜತೆಗೆ ಫಲಾನುಭವಿಗಳಿಂದ ಹಣ ವಸೂಲಿ ಮಾಡುತ್ತಿರುವ ವೈಯಕ್ತಿಕವಾಗಿ ದೂರುಗಳು ಬಂದ ಕೂಡಲೇ ಗುತ್ತಿಗೆದಾರರ ಮೇಲೆ ಎಫ್‌ಐಆರ್‌ ದಾಖಲಿಸಿ ಅವರ ಹೆಸರನ್ನು ಕಪ್ಪು ಪಟ್ಟಿಗೆ ಸೇರಿಸುವುದಾಗಿ ಸಭೆಗೆ ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ನಿಗಮಗಳ ವತಿಯಿಂದ ಕೊರೆಸಿರುವ ಕೊಳವೆಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವಲ್ಲಿ ಮೆಸ್ಕಾಂ ಹಿಂದುಳಿದಿದ್ದು, ಮೆಸ್ಕಾಂ ಹಾಗೂ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧಿಕಾರಿಗಳು ಪ್ರತಿ 2 ವಾರಗಳಿಗೊಮ್ಮೆ ಜಂಟಿಯಾಗಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರಸಭೆಯು ಅಂಬೇಡ್ಕರ್‌ ಭವನ ಮಾತ್ರವಲ್ಲ ಅದರ ಸುಪರ್ದಿಗೆ ನೀಡಿರುವ ಯಾವ ಭವನಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡದೇ ಇದ್ದರೆ ಕ್ರಮ ಕೈಗೊಳ್ಳುವ ಮತ್ತು ಅಂಬೇಡ್ಕರ್‌ ಭವನಕ್ಕೆ ಅಗತ್ಯವಿರುವ ಪರಿಕರಗಳ ಪಟ್ಟಿಯನ್ನು ತಯಾರಿಸಬೇಕು ಎಂದು ತಿಳಿಸಿದರು.

ಕಡೂರಹಳ್ಳಿ ಗ್ರಾಮದ ಅಂಬೇಡ್ಕರ್‌ ಭವನದಲ್ಲಿ ಅಂಗನವಾಡಿ ಕೇಂದ್ರ ನಡೆಯುತ್ತಿದ್ದು, ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಮರ್ಲೆ ಗ್ರಾಪಂ ವ್ಯಾಪ್ತಿಯಲ್ಲಿ 150 ದಲಿತ ಕುಟುಂಬಗಳಿದ್ದು, ಅವರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ಸರಿಯಾದ ರೀತಿಯಲ್ಲಿ ಕಲ್ಪಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ ಸೂಚಿಸಿದರು. ಜಿಲ್ಲೆಯಲ್ಲಿ ಈವರೆಗೆ ದೌರ್ಜನ್ಯದಡಿ 98 ಪ್ರಕರಣಗಳು ದಾಖಲಾಗಿದ್ದು, 86 ಪ್ರಕರಣಗಳ 165 ಸಂತ್ರಸ್ತರಿಗೆ 133.20 ಪರಿಹಾರ ವಿತರಿಸಿದ್ದು, ಪರಿಹಾರ ವಿತರಣೆಗೆ ಬಾಕಿ ಉಳಿದಿರುವ 13 ಪ್ರಕರಣಗಳನ್ನು ಶೀಘ್ರವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಉಪ ವಿಭಾಗಾಧಿಕಾರಿ ಎಚ್‌. ಎಲ್‌. ನಾಗರಾಜ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.