ಎಬಿಎಆರ್‌ಕೆ ಕಾರ್ಡ್ ಸೇವಾ ಕೇಂದ್ರದಲ್ಲಿ ಲಭ್ಯ
Team Udayavani, Dec 31, 2019, 1:06 PM IST
ಚಿತ್ರದುರ್ಗ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್‌ಗಳನ್ನು ಈವರೆಗೆ ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಾತ್ರ ಪಡೆಯಬಹುದಾಗಿತ್ತು. ಈಗ ಎಬಿಎಆರ್‌ಕೆ ಕಾರ್ಡ್‌ನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಪಡೆಯಬಹುದು ಎಂದು ಡಿಎಚ್‌ಒ ಡಾ| ಸಿ.ಎಲ್ ಪಾಲಾಕ್ಷ ಹೇಳಿದರು.
ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಚಿತ್ರದುರ್ಗ ತಾಲೂಕು ಪಂಚಾಯತಿ ಇವರ ಸಹಯೋಗದಲ್ಲಿ ಚಿತ್ರದುರ್ಗ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪಿಡಿಒ ಹಾಗೂ ಗಣಕಯಂತ್ರ ನಿರ್ವಾಹಕರಿಗೆ ಆಯೋಜಿಸಿದ್ದ “ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಆರೋಗ್ಯ ಯೋಜನೆ (ಎಬಿಎಆರ್‌ಕೆ) ಕಾರ್ಡ್ ಗಣಕಯಂತ್ರದ ಮೂಲಕ ಆನ್‌ಲೈನ್‌ನಲ್ಲಿ ಸೃಜನೆ ಮಾಡುವ ಕೌಶಲ್ಯ ಕುರಿತ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಬಿಎಆರ್‌ಕೆ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಯೋಜಿತ ಯೋಜನೆಯಾಗಿದೆ. ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಎಲ್ಲಾ ನಾಗರಿಕರು ಈ ಕಾರ್ಡ್ ಪಡೆಯಬಹುದು. ಗ್ರಾಮ ಮಟ್ಟದಲ್ಲಿ ಎಲ್ಲ ಅರ್ಹ ನಾಗರಿಕರಿಗೆ ಎಬಿಎಆರ್‌ಕೆ ಕಾರ್ಡ್ ಸಮರ್ಪಕವಾಗಿ ವಿತರಣೆ ಮಾಡಲು ಪಿಡಿಒಗಳ ಸಹಕಾರ ಅಗತ್ಯ ಎಂದರು.
ಎಬಿಎಆರ್‌ಕೆ ಯೋಜನೆಯ ಜಿಲ್ಲಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ| ಚಂದ್ರಶೇಖರ್ ಕಂಬಾಳಿ ಈ ಕುರಿತ ಉಪನ್ಯಾಸ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.