ರೈತ ಸಮಾವೇಶಕ್ಕೆ ಭರದ ಸಿದ್ಧತೆ
Team Udayavani, Jan 1, 2020, 3:00 AM IST
ರಾಜ್ಯದಲ್ಲಿಯೇ ಅತೀ ಹೆಚ್ಚು ತೆಂಗು ಬೆಳೆಯುವ ನಾಡಿನಲ್ಲಿ ಪ್ರಗತಿಪರ ರೈತರಿಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರೈತರ ಕೃಷಿ ಪ್ರಶಸ್ತಿ ಪ್ರದಾನ ಮತ್ತು ಕೃಷಿ ಸಮ್ಮಾನ್ ಯೋಜನೆಯ 4ನೇ ಕಂತು ಬಿಡುಗಡೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭರದ ಸಿದ್ಧತೆಗಳು ನಡೆದಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಸಿದ್ಧತೆ ಪರಿಶೀಲಿಸಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು.
ತುಮಕೂರು: ಶೈಕ್ಷಣಿಕ ನಗರಕ್ಕೆ ಜ.2 ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಅನ್ನದಾತನಿಗೆ ಗೌರವಿಸಲು ಆಗಮಿಸುತ್ತಿದ್ದು, ಐತಿಹಾಸಿಕವಾಗಿ ಕಾರ್ಯಕ್ರಮ ನಡೆಯಬೇಕು, ಲಕ್ಷಾಂತರ ರೈತರು ಈ ಅಪೂರ್ವ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಜಿಲ್ಲಾಡಳಿತ ಭರ್ಜರಿ ತಯಾರಿ ನಡೆಸಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಸಿದ್ಧತೆ ಪರೀಶಿಲಿಸಿದರು.
ರೈತರ ಖಾತೆಗಳಿಗೆ ಹಣ ಜಮಾ: ಕೃಷಿ ಪ್ರಧಾನ ಜಿಲ್ಲೆಯಾಗಿರುವ ತುಮಕೂರಿನಲ್ಲಿ ಈ ಸಮಾರಂಭವನ್ನು ಆಯೋಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧತೆ ನಡೆಸಿದ್ದು, ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಗತಿಪರ ರೈತರನ್ನು ಗೌರವಿಸುವುದರ ಜೊತೆಗೆ ಆಹಾರೋತ್ಪಾದನೆಯಲ್ಲಿ ಪ್ರಗತಿಯತ್ತ ಮುನ್ನಡೆಯುತ್ತಿರುವ ಕರ್ನಾಟಕ ರಾಜ್ಯ ಸೇರಿದಂತೆ 6 ರಾಜ್ಯ ಸರ್ಕಾರಗಳಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯ 4ನೇ ಕಂತಿನ ಹಣವನ್ನು ರೈತರ ಖಾತೆಗಳಿಗೆ ಜಮಾವಣೆ ಮಾಡುವ ಕಾರ್ಯಕ್ರಮ ಇದಾಗಿದೆ.
ಸಿದ್ಧಗಂಗಾ ಮಠಕ್ಕೆ ಭೇಟಿ: ರೈತರ ಕಾರ್ಯಕ್ರಮಕ್ಕೂ ಮುನ್ನ ಶ್ರೀಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಭಕ್ತರ ಪಾಲಿನ ನಡೆದಾಡುವ ದೇವರಾಗಿದ್ದ ಕರ್ನಾಟಕ ರತ್ನ, ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆದು, ಪೂಜೆ ಸಲ್ಲಿಸಿ ನಂತರ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು, ಮಠದ ಮಕ್ಕಳೊಂದಿಗೆ ಸಂವಾದ ನಡೆಸಲಿದ್ದಾರೆ.
1 ಲಕ್ಷ ಜನ ಸೇರುವ ನಿರೀಕ್ಷೆ: ಈ ಎಲ್ಲಾ ಕಾರ್ಯಕ್ರಮ ವ್ಯವಸ್ಥಿತವಾಗಿ ನಡೆಯಬೇಕೆಂದು ರಾಜ್ಯ ಸರ್ಕಾರ ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ಪ್ರಧಾನಿಯವರು ಸಂಚರಿಸುವ ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 1 ಲಕ್ಷ ಜನ ಸೇರುವ ನಿರೀಕ್ಷೆಯಿಂದ ಅಷ್ಟೂ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸಮಾರಂಭಕ್ಕೆ ಬರುವ ಜನರಿಗೆ ನಿರಾಸೆಯಾಗಬಾರದು ಎಂದು ಮೈದಾನಕ್ಕೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ಎಲ್‌ಇಡಿ ಪರದೆ ಅಳವಡಿಸಿ ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಲಾಗಿದೆ.
ಸಿದ್ಧತೆಗಳ ಪರಿಶೀಲನೆ: ಜಿಲ್ಲಾಡಳಿತ ನಡೆಸಿರುವ ಸಿದ್ಧತೆ ಬಗ್ಗೆ ಕಳೆದ ಒಂದು ವಾರದಿಂದ ರಾಜ್ಯ ಸರ್ಕಾರದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಸಿಎಂ ಹಾಗೂ ಕೃಷಿ ಸಚಿವ ಲಕ್ಷ್ಮಣ ಸವದಿ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ, ವಸತಿ ಸಚಿವ ವಿ. ಸೋಮಣ್ಣ ನಿರಂತರವಾಗಿ ಕಾರ್ಯಕ್ರಮ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.
ಸಿಎಂ ಖುದ್ದು ಪರಿಶೀಲನೆ: ಮಂಗಳವಾರ ಸ್ವತಃ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಕಾರ್ಯಕ್ರಮದ ವ್ಯವಸ್ಥೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಹಲವು ಸಲಹೆಗಳನ್ನು ನೀಡಿದರು. ಒಟ್ಟಾರೆಯಾಗಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ತಯಾರಿಗಳು ನಡೆದಿವೆ.
ನಗರದಾದ್ಯಂತ ಬಿಗಿ ಭದ್ರತೆ: ಪ್ರಧಾನಿ ಮೋದಿಯವರು ತುಮಕೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಒದಗಿಸಲು ಈಗಾಗಲೇ ಜಿಲ್ಲಾ ಪೊಲೀಸ್ ಪಡೆ ಸಜಾjಗಿದೆ. ಈಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋ.ನಂ ವಂಸಿಕೃಷ್ಣ ನಗರದ ಯಾವೆಲ್ಲಾ ಪ್ರದೇಶಗಳಲ್ಲಿ ಭದ್ರತೆ ಒದಗಿಸುವಂತೆ ಪೊಲೀಸ್ ಸಿಬ್ಬಂದಿ ಸೂಚಿಸಿದ್ದಾರೆ.
ಮದ್ಯದಂಗಡಿಗಳು ಬಂದ್: ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುವ ಹಿನ್ನೆಲೆಯಲ್ಲಿ ಜ. 2ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕೆಎಸ್‌ಬಿಸಿಎಲ್ ಡಿಪೋ ಹೊರತು ಪಡಿಸಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಿ ಮದ್ಯ ಮಾರಾಟ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್ ಆದೇಶಿಸಿದ್ದಾರೆ.
ಪ್ರಧಾನ ಮಂತ್ರಿಯವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಡಿ.30 ರಿಂದ ಜ. 2ರ ಮಧ್ಯರಾತ್ರಿ 12 ಗಂಟೆವರೆಗೆ ತುಮಕೂರು ನಗರ ಹಾಗೂ ಹೊರವಲಯದಾದ್ಯಂತ ಡ್ರೋನ್ ಕ್ಯಾಮೆರಾಗಳನ್ನು ನಿಷೇಧಿಸಲಾಗಿದೆ.
-ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾಧಿಕಾರಿ
* ಚಿ.ನಿ. ಪುರುಷೋತ್ತಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.