ಹೊಸ ವರ್ಷಕ್ಕೆ ಉಡುಪಿಗೆ ನೂತನ ಎಸ್.ಪಿ. ; ನಿಶಾ ಜೇಮ್ಸ್ ವರ್ಗಾವಣೆ
Team Udayavani, Dec 31, 2019, 10:54 PM IST
ಉಡುಪಿ: ಜಿಲ್ಲೆಯ ಪೊಲೀಸ್ ಅಧೀಕ್ಷರಾಗಿದ್ದ ನಿಶಾ ಜೇಮ್ಸ್ ಐ.ಪಿ.ಎಸ್. ವರ್ಗಾವಣೆಗೊಂಡಿದ್ದಾರೆ. ಅವರ ಸ್ಥಾನಕ್ಕೆ ಐಪಿಎಸ್ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರಕಾರ ಇಂದು ಆದೇಶ ಹೊರಡಿಸಿದೆ. ಮಚ್ಚಿಂದ್ರ ಅವರು ಕಲುಬುರಗಿ ಜಿಲ್ಲೆಯ ಚಿಂಚೋಳೀ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು
ಉಡುಪಿ ಜಿಲ್ಲೆಯ ಎಸ್.ಪಿ. ಆಗಿದ್ದ ಲಕ್ಷಣ ನಿಂಬರ್ಗಿ ಅವರು ಕಳೆದ ಫೆಬ್ರವರಿಯಲ್ಲಿ ವರ್ಗಾವಣೆಗೊಂಡ ಬಳಿಕ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ನೆಮಕಗೊಂಡಿದ್ದರು. ಇದೀಗ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಚಿಕ್ಕೋಡಿ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಐಪಿಎಸ್ ಅಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರನ್ನು ಕಾರ್ಕಳದಲ್ಲಿರುವ ನಕ್ಸಲ್ ನಿಗ್ರಹ ದಳದ ಎಸ್.ಪಿ.ಯನ್ನಾಗಿ ನೇಮಕ ಮಾಡಲಾಗಿದೆ.
ಕಾರ್ಕಳ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಪಿ. ಕೃಷ್ಣಕಾಂತ್ ಐ.ಪಿ.ಎಸ್. ಅವರಿಗೆ ಭಡ್ತಿ ನೀಡಿ ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷರನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷರಾಗಿದ್ದ ಸೈದುಲು ಅದವತ್ ಐಪಿಎಸ್ ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್.ಪಿ.ಯನ್ನಾಗಿ ನೇಮಕಗೊಳಿಸಿ ಆದೇಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.